ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ #Renukaswamy Murder Case ಸುಪ್ರೀಂ ಕೋರ್ಟ್’ನಿಂದ #Supreme Court ಜಾಮೀನು ರದ್ದಾಗಿ ಮತ್ತೆ ಜೈಲು ಸೇರಿರುವ ನಟ ದರ್ಶನ್, #Darshan ತಮಗೆ ಬೆನ್ನು ನೋವು ಕಾಣಿಸಿಕೊಂಡಿದೆ ಹೇಳಿರುವುದಾಗಿ ವರದಿಯಾಗಿದ್ದು, ಅಧಿಕೃತ ಮೂಲಗಳು ಖಚಿತಪಡಿಸಿಲ್ಲ.
ಜಾಮೀನು ರದ್ದಾದ #Bail Cancelation ಹಿನ್ನೆಲೆಯಲ್ಲಿ ಪ್ರಕರಣದಲ್ಲಿ 7 ಆರೋಪಿಗಳನ್ನು ವಶಕ್ಕೆ ಪಡೆದು ಜೈಲಿಗೆ ಕಳುಹಿಸುವಂತೆ ಸುಪ್ರೀಂ ಕೋರ್ಟ್ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ನಿನ್ನೆಯೇ ಎಲ್ಲಾ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದು, ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು. ಎಲ್ಲಾ ಆರೋಪಿಗಳನ್ನು ನ್ಯಾಯಾಧೀಶರು ನ್ಯಾಯಾಂಗ ಬಂಧನಕ್ಕೆ ಆಗ್ರಹಿಸಿದ್ದಾರೆ.

ಇಂದು ಮುಂಜಾನೆ ಜೈಲಿನಲ್ಲಿ ದರ್ಶನ್ ಉಪ್ಪಿಟ್ಟು ಸೇವನೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ದರ್ಶನ್ ಜೊತೆ ಪವಿತ್ರಾ ಗೌಡ ಕೂಡ ಜೈಲು ಸೇರಿದ್ದಾರೆ. ಇಬ್ಬರನ್ನೂ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಾಗಿದೆ. ನಟ ದರ್ಶನ್ ಮಾನಸಿಕವಾಗಿ ಕುಗ್ಗಿ ಹೋಗಿದ್ದಾರೆ. ಹೀಗಾಗಿ, ಸ್ವಾತಂತ್ರೋತ್ಸವಕ್ಕೆ ಗೈರಾಗಿದ್ದಾರೆ.

ಪ್ರತಿ ವರ್ಷ ಜೈಲಿನಲ್ಲಿ ಸ್ವಾತಂತ್ರ ದಿನಾಚರಣೆ ಮಾಡಲಾಗುತ್ತದೆ. ವಿಚಾರಣಾಧೀನ ಆರೋಪಿಗಳು, ಸಜಾ ಬಂಧಿಗಳು ಎಲ್ಲರೂ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರೆ. ಅಂತೆಯೇ ಈ ಬಾರಿಗೂ ಸಮಾರಂಭ ಮಾಡಲಾಯಿತು. ಆದರೆ, ದರ್ಶನ್ ಮತ್ತು ಪ್ರಜ್ವಲ್ ರೇವಣ್ಣ ಭಾಗಿಯಾಗಿಲ್ಲ ಎಂದ ವರದಿಯಾಗಿದೆ.
ಅಧಿಕಾರಿಗಳಿಗೆ ಸುಪ್ರೀಂ ಕೋರ್ಟ್ ಖಡಕ್ ಎಚ್ಚರಿಕೆ
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಎಲ್ಲಾ ಆರೋಪಿಗಳ ಜಾಮೀನನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿದ್ದು, ದರ್ಶನ್’ಗೆ ಜೈಲಿನಲ್ಲಿ ವಿಐಪಿ ಟ್ರೀಟ್ಮೆಂಟ್ ನೀಡಿದರೆ ಹುಷಾರ್ ಎಂದು ಎಚ್ಚರಿಕೆ ನೀಡಲಾಗಿದೆ.
ಈ ಕುರಿತಂತೆ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದ್ದು, ಎಲ್ಲ ಆರೋಪಿಗಳನ್ನು ತಕ್ಷಣವೇ ವಾಸಕ್ಕೆ ಪಡೆಯಲು ಸೂಚಿಸಿದೆ. ಅಲ್ಲದೇ, ದರ್ಶನ್’ಗೆ ಜೈಲಿನಲ್ಲಿ ವಿಐಪಿ ಟ್ರೀಟ್ಮೆಂಟ್ ಕೊಟ್ಟರೆ ಹುಷಾರ್ ಎಂದು ಜೈಲಾಧಿಕಾರಿಗಳಿಗೆ ಸುಪ್ರೀಂ ಎಚ್ಚರಿಕೆ ಕೊಟ್ಟಿದೆ.

ಜೈಲಿನಲ್ಲಿ ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳಿಗೆ ವಿಐಪಿ ಟ್ರೀಟ್ಮೆಂಟ್ ನೀಡುವಂತಿಲ್ಲ. ಆರೋಪಿಗಳಿಗೆ 5 ಸ್ಟಾರ್ ಟ್ರೀಟ್ಮೆಂಟ್ ನೀಡಲಾಗುತ್ತಿದೆ ಎಂದು ನಮಗೆ ತಿಳಿದ ದಿನ, ಮೊದಲ ಹೆಜ್ಜೆಯೇ ಸೂಪರಿಂಟೆAಡೆAಟ್ ಮತ್ತು ಇತರ ಎಲ್ಲ ಅಧಿಕಾರಿಗಳನ್ನು ಅಮಾನತುಗೊಳಿಸುತ್ತೇವೆ.
ರಾಜ್ಯ ಸರ್ಕಾರ ಯಾರಿಗಾದರೂ ವಿಐಪಿ ಟ್ರೀಟ್ಮೆಂಟ್ ನೀಡುತ್ತಿರುವ ಛಾಯಾಚಿತ್ರಗಳು ಅಥವಾ ಯಾವುದೇ ವೀಡಿಯೊವನ್ನು ನಾವು ನೋಡಿದರೆ ಮೊದಲು ನಿಮ್ಮನ್ನು ಸಸ್ಪೆಂಡ್ ಮಾಡಲಾಗುತ್ತದೆ ಎಂದು ಕೋರ್ಟ್ ಖಡಕ್ ವಾರ್ನಿಂಗ್ ನೀಡಿದೆ.
ಹೈಕೋರ್ಟ್ ಆದೇಶದ ಬಗ್ಗೆ ಹೇಳಿದ್ದೇನು?
ಹೈಕೋರ್ಟ್ ಆದೇಶದಲ್ಲಿ ದೋಷವಿದೆ. ತಾಂತ್ರಿಕ ಕಾರಣಗಳಿಂದ ಜಾಮೀನು ನೀಡಿದ್ದಾರೆ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ.
ಆರೋಪಿ ಎಷ್ಟೇ ದೊಡ್ಡವರಿದ್ದರೂ ಅವರು ಕಾನೂನಿಗಿಂತ ದೊಡ್ಡವರಲ್ಲ. ಕಾನೂನು ಆಡಳಿತ ಎತ್ತಿ ಹಿಡಿಯಲಾಗಿದೆ. ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ, ಯಾರೂ ಚಿಕ್ಕವರಲ್ಲ. ಆರೋಪಿಗಳಿಗೆ 5 ಸ್ಟಾರ್ ಟ್ರೀಟ್ಮೆಂಟ್ ನೀಡಲಾಗಿದೆ. ಜೈಲು ಸೂಪರಿಂಟೆAಡ್’ನನ್ನು ಸಸ್ಪೆಂಡ್ ಮಾಡಬೇಕಿತ್ತು ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post