ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ #Renukaswamy murder case ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ #Darshan ಅವರ ಪತ್ನಿ ವಿಜಯಲಕ್ಷ್ಮಿ #Vijayalakshmi ಅವರು ತಮ್ಮ ಮಗನ ಶಾಲೆ ದಾಖಲಾತಿ ವಿಚಾರಕ್ಕೆ ತಮ್ಮನ್ನು ಭೇಟಿಯಾಗಿದ್ದರು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ #DCM D K Shivakumar ಹೇಳಿದ್ದಾರೆ.
ದರ್ಶನ್ ಪತ್ನಿ ವಿಜಯಲಕ್ಷ್ಮಿ, ಸಹೋದರ ದಿನಕರ್ ಹಾಗೂ ನಿರ್ದೇಶಕ ಪ್ರೇಮ್ ಅವರುಗಳು ಡಿಸಿಎಂ ಶಿವಕುಮಾರ್ ಅವರನ್ನು ಭೇಟಿಯಾಗಿ ಸುಮಾರು ಒಂದೂವರೆ ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿದ್ದು, ಈ ಹಿನ್ನೆಲೆಯಲ್ಲಿ ಈ ಸ್ಪಷ್ಟನೆ ನೀಡಿದ್ದಾರೆ.
Also read: ಶ್ರೀಜಯತೀರ್ಥರ ಮೂಲಬೃಂದಾವನ ವಿವಾದ | ಉತ್ತರಾದಿಮಠದ ವಾದಕ್ಕೆ ಮನ್ನಣೆ | ಮಳಖೇಡದಲ್ಲಿ ಹರಿದ ಹರ್ಷದ ಹೊನಲು

ದರ್ಶನ್ ಪುತ್ರ ಈ ಹಿಂದೆ ನಮ್ಮ ಶಾಲೆಯಲ್ಲಿಯೇ ವ್ಯಾಸಂಗ ಮಾಡುತ್ತಿದ್ದರು. ಕಾರಣಾಂತರಗಳಿAದ ನಮ್ಮ ಶಾಲೆ ತೊರೆದು ಬೇರೆ ಶಾಲೆಗೆ ಸೇರಿಸಿದ್ದರು. ಈಗ ಮತ್ತೆ ನಮ್ಮ ಶಾಲೆಗೆ ಸೇರಿಸಿ ಕೊಳ್ಳುವಂತೆ ಮನವಿ ಮಾಡಲು ಅವರು ನನ್ನನ್ನು ಭೇಟಿಯಾಗಿದ್ದಾರೆ. ಅದಕ್ಕೆ ಸಂಬಂಧಿಸಿದಂತೆ ನಮ್ಮ ಶಾಲೆಯ ಪ್ರಾಂಶುಪಾಲರನ್ನು ಭೇಟಿಯಾಗಲು ಸೂಚಿಸಿದ್ದೇನೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 











Discussion about this post