ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ಕೇಂದ್ರದ ಮಾಜಿ ಸಚಿವ ಹಾಗೂ ರೈತ ನಾಯಕ ಬಾಬಗೌಡ ಪಾಟೀಲರ ನಿಧನಕ್ಕೆ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ತೀವ್ರ ಶೋಕ ವ್ಯಕ್ತಪಡಿಸಿದ್ದು, ಬಾಬಗೌಡರ ಅಗಲಿಕೆ ರೈತ ಚಳವಳಿಗೆ ದೊಡ್ಡ ನಷ್ಟ ಎಂದು ಹೇಳಿದ್ದಾರೆ.
ಸ್ವಚ್ಛ ರಾಜಕಾರಣಿಯಾಗಿದ್ದ ಬಾಬಗೌಡರು, ರೈತ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದರು. ಸದನದ ಹೊರಗೆ ಮತ್ತು ಒಳಗೆ ರೈತರ ಸಮಸ್ಯೆಗಳ ಬಗ್ಗೆ ಹೋರಾಟ ನಡೆಸಿದವರು. ಏಕಕಾಲಕ್ಕೆ ಎರಡು ವಿಧಾನಸಭಾ ಕ್ಷೇತ್ರಗಳಿಂದ ಆಯ್ಕೆಯಾಗಿದ್ದ ನಮ್ಮ ರಾಜ್ಯದ ವಿರಳ ಜನನಾಯಕ. ಅಲ್ಲದೆ, ಕರ್ನಾಟಕ ರಾಜ್ಯ ರೈತ ಸಂಘದ ಸಂಸ್ಥಾಪಕರಲ್ಲಿ ಒಬ್ಬರಾಗಿದ್ದರು ಎಂದು ಡಿಸಿಎಂ ಸ್ಮರಿಸಿದ್ದಾರೆ.
ಗ್ರಾಮೀಣಾಭಿವೃದ್ಧಿ ಮತ್ತು ರೈತರ ಅಭ್ಯುದಯದ ಬಗ್ಗೆ ಅಪರಿಮಿತ ಕಾಳಜಿ ಹೊಂದಿದ್ದ ಬಾಬಗೌಡರು ಬೆಳಗಾವಿ ಲೋಕಸಭೆ ಕ್ಷೇತ್ರದಿಂದ ಆಯ್ಕೆಯಾಗಿ ಅಟಲ್ ಬಿಹಾರಿ ವಾಜಪೇಯಿ ಅವರ ಸಚಿವ ಸಂಪುಟದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವರಾಗಿ ಕೆಲಸ ಮಾಡಿದ್ದರು. ಹೊಸ ತಲೆಮಾರಿನ ರಾಜಕಾರಣಿಗಳಿಗೆ ಮಾರ್ಗದರ್ಶಕರಾಗಿದ್ದರು. ಅವರ ನಿಧನ ತೀವ್ರ ನೋವುಂಟು ಮಾಡಿದೆ. ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ನೀಡಲಿ ಎಂದು ಡಿಸಿಎಂ ಅವರು ಪ್ರಾರ್ಥಿಸಿದ್ದಾರೆ.
ವರದಿ: ಡಿ.ಎಲ್. ಹರೀಶ್, ಬೆಂಗಳೂರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post