ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ತಮ್ಮ ಭುಜದ ಮೇಲೆ ಕೈ ಹಾಕಿದ ತಮ್ಮದೇ ಕಾಂಗ್ರೆಸ್ ಪಕ್ಷದ ಕಾರ್ಯಕರ್ತನೊಬ್ಬನಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ #DCM D K Shivakumar ಕಪಾಳಕ್ಕೆ ಹೊಡೆದ ಘಟನೆ ನಡೆದಿದೆ ಎಂದು ವರದಿಯಾಗಿದೆ.
ಈ ಕುರಿತಂತೆ ವೀಡಿಯೋವೊಂದನ್ನು ರಾಜ್ಯ ಬಿಜೆಪಿ ತನ್ನ ಎಕ್ಸ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದೆ.
ಕಳೆದ ರಾತ್ರಿ ಡಿ.ಕೆ. ಶಿವಕುಮಾರ್ ಅವರು ಹಾವೇರಿ ಜಿಲ್ಲೆಯ ಸವಣೂರು ಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿನೋದ್ ಅಸೂಟಿಯವರ ಪರ ಚುನಾವಣಾ ಪ್ರಚಾರ ನಡೆಸುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಹೇಳಿದೆ.
Also read: ಲವ್ ಮ್ಯಾರೇಜ್ ಆದ ತನ್ನ ಪತಿಯ ಕೈಕಾಲು ಕಟ್ಟಿ ಮರ್ಮಾಂಗಕ್ಕೆ ಸಿಗರೇಟಿನಿಂದ ಸುಟ್ಟ ಪತ್ನಿ
ಕಾಂಗ್ರೆಸ್ ಕಾರ್ಯಕರ್ತರು ಡಿಕೆ, ಡಿಕೆ ಎಂದು ಘೋಷಣೆಗಳನ್ನು ಕೂಗುತ್ತಿದ್ದರು.
ಈ ಸಂದರ್ಭದಲ್ಲಿ ಡಿ.ಕೆ. ಶಿವಕುಮಾರ್ ಕಾರಿನಿಂದ ಕೆಳಗಿಳಿದು ಬಂದ ತಕ್ಷಣ ಅವರ ಹೆಗಲ ಮೇಲೆ ಕೈಹಾಕಿದ ಕಾಂಗ್ರೆಸ್ ಕಾರ್ಪೊರೇಟರ್ ಅಲ್ಲಾವುದ್ದೀನ್ ಮನಿಯಾರ್ ಅವರ ಕಪಾಳಕ್ಕೆ ಬಾರಿಸಿದ್ದಾರೆ ಎಂದು ಹೇಳಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post