No Result
View All Result
PESITM hosts Mock CET 2026 to Strengthen KCET Preparation
English Articles

PESITM hosts Mock CET 2026 to Strengthen KCET Preparation

by ಕಲ್ಪ ನ್ಯೂಸ್
March 31, 2026
0

Kalpa Media House  |  Shivamogga  | PES Institute of Technology and Management #PESITM conducted Mock CET 2026 on March 30...

Read moreDetails
India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

March 30, 2026
SWR to run special trains for Good Friday, Easter rush

SWR to run special trains for Good Friday, Easter rush

March 30, 2026
ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ಪಿಆರ್‌ಓ ಪ್ರವೀಣ್ ಅಧಿಕಾರ ಸ್ವೀಕಾರ

South Western Railway | Praveen Takes Charge as Hubballi Divisional Public Relations Officer

March 28, 2026
26 ವರ್ಷದ ಯುವಕನಿಗೆ ಮರುಜೀವ ಕೊಟ್ಟ ಮೆಡಿಕವರ್ ಆಸ್ಪತ್ರೆ | ಏನಾಗಿತ್ತು ಯುವಕನಿಗೆ?

Critical Condition Turned Around with Timely Medical Intervention

March 27, 2026
  • Advertise With Us
  • Grievances
  • About Us
  • Contact Us
Wednesday, April 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಲಾಕ್‌ಡೌನ್‌ ಬೇಡ, ಸಮಸ್ಯೆಗೆ ಅದೇ ಪರಿಹಾರವಲ್ಲ ಎಂದ ಡಿಸಿಎಂ

ರೋಗ ಲಕ್ಷಣಗಳಿದ್ದರೆ ಕೋವಿಡ್‌ ಪರೀಕ್ಷೆ ಮಾಡಿಸಿಕೊಳ್ಳಿ, ತಪ್ಪದೇ ಲಸಿಕೆ ಹಾಕಿಸಿಕೊಳ್ಳಿ ಎಂದು ಮನವಿ ಮಾಡಿದ ಡಾ.ಸಿ.ಎನ್.‌ಅಶ್ವತ್ಥನಾರಾಯಣ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 14, 2021
in ಬೆಂಗಳೂರು ನಗರ
0
ಪದವಿ ವಿದ್ಯಾರ್ಥಿಗಳ ನೆರವಿಗೆ ಧಾವಿಸಿದ ಡಿಸಿಎಂ: ಪ್ರವೇಶಕ್ಕೆ ಅಂತಿಮ ಅವಕಾಶ

File photo

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಬೆಂಗಳೂರು: ಮತ್ತೆ ಲಾಕ್‌ಡೌನ್‌ ಮಾಡುವುದರಿಂದ ಯಾವುದೇ ಪ್ರಯೋಜನ ಇಲ್ಲ. ಈಗಿನ ಸಂದರ್ಭದಕ್ಕೆ ಅದು ಸರಿ ಹೊಂದುವುದೂ ಇಲ್ಲ. ಹೊರಗಿನಿಂದ ಬೆಂಗಳೂರಿಗೆ ಬರುತ್ತಿರುವ ಪ್ರತಿಯೊಬ್ಬರೂ ಕೋವಿಡ್‌ ತಪಾಸಣೆಗೆ ಒಳಗಾಗಬೇಕು ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಹೇಳಿದರು.
ಬೆಂಗಳೂರಿನಲ್ಲಿ ಬುಧವಾರ ಬಿಜೆಪಿ ರಾಜ್ಯ ಕಚೇರಿ ಜಗನ್ನಾಥ ಭವನದಲ್ಲಿ ʼಡಾ.ಅಂಬೇಡ್ಕರ್‌ ಜಯಂತಿʼ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಂದರ್ಭದಲ್ಲಿ ಸುದ್ದಗಾರರ ಜತೆ ಅವರು ಮಾತನಾಡಿದರು.

ವೈಯಕ್ತಿಕವಾಗಿ ಲಾಕ್‌ಡೌನ್‌ ಬೇಡ ಎಂತಲೇ ಹೇಳುತ್ತೇನೆ. ಸಮಾಜದಲ್ಲಿ ಯಾರೊಬ್ಬರಿಗೂ ಲಾಕ್‌ಡೌನ್‌ ತಡೆದುಕೊಳ್ಳುವ ಶಕ್ತಿ ಇಲ್ಲ. ಜೀವ ಉಳಿಯುವುದರ ಜತೆಗೆ ಜೀವನವೂ ನಡೆಯಬೇಕು. ಕಳೆದ ಒಂದು ವರ್ಷದಿಂದ ಜನರು ಸಾಕಷ್ಟು ಕಷ್ಟ ಅನುಭವಿಸಿದ್ದಾರೆ. ಮತ್ತೆ ಸಂಕಷ್ಟಕ್ಕೆ ಸಿಲುಕುವುದು ಬೇಡ ಎಂದರು.

ಎಲ್ಲ ಕಡೆ ಕೋವಿಡ್‌ ಉಚಿತ ತಪಾಸಣೆ ನಡೆಯುತ್ತಿದೆ. ಒಂದು ನಯಾಪೈಸೆಯನ್ನೂ ಖರ್ಚು ಮಾಡಬೇಕಾಗಿಲ್ಲ. ಹೊರಗಿನಿಂದ ನಗರಕ್ಕೆ ಯಾರಾದರೂ ಬಂದರೆ ಕಡ್ಡಾಯವಾಗಿ ಕೋವಿಡ್‌ ಪರೀಕ್ಷೆ ಮಾಡಿಸಿಕೊಳ್ಳಬೇಕು. ಯಾರೂ ಉಪೇಕ್ಷೆ ಮಾಡಬಾರದು. ಕೋವಿಡ್‌ ಲಕ್ಷಣಗಳೇನಾದರೂ ಕಂಡು ಬಂದರೆ ಅದನ್ನು ಕಡೆಗಣಿಸೋದು ಬೇಡ ಎಂದು ಅವರು ತಿಳಿಸಿದರು.

ಜತೆಗೆ, ಕೋವಿಡ್‌ ವಿಷಯದಲ್ಲಿ ಪ್ರತಿಪಕ್ಷಗಳು ರಾಜಕೀಯ ಮಾಡುವ ಬದಲು ಸಂಕಷ್ಟದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ಡಿಸಿಎಂ ಕಿವಿಮಾತು ಹೇಳಿದರಲ್ಲದೆ, ಜನರು ಕೂಡ ಕಟ್ಟುನಿಟ್ಟಾಗಿ ಕೋವಿಡ್‌ ನಿಯಮಗಳನ್ನು ಪಾಲಿಸಬೇಕು. ಆ ಬಗ್ಗೆ ಅಸಡ್ಡೆ ತೋರಿಸುವುದು ಸರಿಯಲ್ಲ ಎಂದರು.

ಯಾರೂ ಸೂಪರ್‌ಮ್ಯಾನ್‌ ಅಲ್ಲ
ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಅಂಗನವಾಡಿ ಕೇಂದ್ರಗಳು ಸೇರಿದಂತೆ ಎಲ್ಲ ಕಡೆ ಪರೀಕ್ಷೆಗಳನ್ನು ಮಾಡಲಾಗುತ್ತಿದೆ ಎಂದ ಅಶ್ವತ್ಥನಾರಾಯಣ, “ನನಗೇನೂ ಆಗಿಲ್ಲ. ನಾನು ಚೆನ್ನಾಗಿದ್ದೇನೆ. ಗಟ್ಟಿಮುಟ್ಟಾಗಿದ್ದೇನೆ ಎಂಬ ಅತಿ ಆತ್ಮವಿಶ್ವಾಸ ಯಾರಿಗೂ ಬೇಡ. ಯಾರೂ ಕೂಡ ಸೂಪರ್‌ಮ್ಯಾನ್‌ ಅಲ್ಲ. ಇದನ್ನು ಎಲ್ಲರೂ ನೆನಪಲ್ಲಿ ಇಟ್ಟುಕೊಳ್ಳಬೇಕು. ಉಚಿತವಾಗಿ ಸಿಗುತ್ತಿರುವ ಸೌಲಭ್ಯಗಳನ್ನು ಎಲ್ಲರೂ ಬಳಸಿಕೊಳ್ಳಬೇಕು” ಎಂದು ಡಿಸಿಎಂ ಕಿವಿಮಾತು ಹೇಳಿದರು.

ತಪಾಸಣಾ ಕೇಂದ್ರಗಳನ್ನು ಹೆಚ್ಚಿಸಲಾಗುತ್ತಿದೆ. ಆ ಕೇಂದ್ರಗಳ ಬಗ್ಗೆ ಸಂಪೂರ್ಣ ಮಾಹಿತಿ ನೀಡಲಾಗುತ್ತಿದೆ. ದಿನಕ್ಕೆ ಒಂದು ಲಕ್ಷಕ್ಕಿಂತ ಹೆಚ್ಚು ಜನರಿಗೆ ಉಚಿತ ಟೆಸ್ಟ್‌ ಮಾಡಲಾಗುತ್ತಿದೆ. ಯಾರಿಗೇ ಲಕ್ಷಣಗಳು ಇದ್ದರೆ ಅಂಥವರೆಲ್ಲ ತಕ್ಷಣ ಬಂದು ತಪಾಸಣೆ ಮಾಡಿಸಿಕೊಳ್ಳಬೇಕು. ಔಷಧ ಇದೆ, ಲಸಿಕೆಯೂ ಲಭ್ಯವಿದೆ. ಆಸ್ಪತ್ರೆಯಷ್ಟೇ ಅಲ್ಲದೆ ಮನೆಯಲ್ಲೂ ಹೋಮ್‌ ಐಸೋಲೇಷನ್‌ ಆಗಿ ಚಿಕಿತ್ಸೆ ಪಡೆಯಬಹುದು ಎಂದು ಡಾ.ಅಶ್ವತ್ಥನಾರಾಯಣ ತಿಳಿಸಿದರು

ಲಸಿಕೆ ಅಭಿಯಾನ ಉತ್ತಮ
ಲಸಿಕೆ ತಯಾರಿಕೆ ಹಾಗೂ ಅಸಿಕೆ ಅಭಿಯಾನವು ಇಡೀ ಜಗತ್ತಿನಲ್ಲಿಯೇ ನಮ್ಮ ದೇಶದಲ್ಲಿ ಉತ್ತಮವಾಗಿ ನಡೆಯುತ್ತಿದೆ. ಹೆಚ್ಚು ಜನರಿಗೆ ಕ್ಷಿಪ್ರವಾಗಿ ವ್ಯಾಕ್ಷಿನ್‌ ಕೊಟ್ಟಿರುವ ಏಕೈಕ ದೇಶ ನಮ್ಮದು ಎಂದು ಡಿಸಿಎಂ ಅಶ್ವತ್ಥನಾರಾಯಣ ಹೇಳಿದರು.

ಕೋವಿಡ್‌ ಎರಡನೇ ಅಲೆಯ ಅಪಾಯದ ತೀವ್ರತೆ ಕಡಿಮೆ. ಆದರೆ, ವೇಗವಾಗಿ ಹರಡುತ್ತಿದೆ. ಯುವಜನರು, ಮಧ್ಯವಯಸ್ಕರಿಗೆ ಹೆಚ್ಚು ಅಪಾಯ ಕಾಣುತ್ತಿದೆ. ಕೆಲವರು ರೋಗ ಲಕ್ಷಣಗಳಿದ್ದರೂ ಸೂಕ್ತ ಪರೀಕ್ಷೆ ಮಾಡಿಸಿಕೊಂಡು ಚಿಕಿತ್ಸೆ ಪಡೆಯುತ್ತಿಲ್ಲ. ಇವರಿಂದಲೇ ಹೆಚ್ಚು ಸಮಸ್ಯೆಯಾಗುತ್ತಿದೆ. ಕೋವಿಡ್‌ ಟೆಸ್ಟ್‌ ನೆಗೆಟೀವ್‌ ಬಂದರೂ ಯಾರೂ ಎಚ್ಚರ ತಪ್ಪಬಾರದು ಎಂದು ಅವರು ಎಚ್ಚರಿಕೆ ನೀಡಿದರು.
ಲಸಿಕೆ ಕೊರತೆ ಇಲ್ಲ
ಕೋವಿಡ್‌ ಲಸಿಕೆಯನ್ನು ರಫ್ತು ಮಾಡಿದ್ದರಿಂದಲೇ ದೇಶದಲ್ಲಿ ಕೊರತೆ ಉಂಟಾಗಲು ಕಾರಣ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮಾಡಿರುವ ಆರೋಪವನ್ನು ಡಾ.ಅಶ್ವತ್ಥನಾರಾಯಣ ತಳ್ಳಿಹಾಕಿದರು.

ಕುಮಾರಸ್ವಾಮಿ ಅವರು ಸರಿಯಾದ ಮಾಹಿತಿ ಇಲ್ಲದೆ ಆಧಾರ ರಹಿತ ಆರೋಪ ಮಾಡಿದ್ದಾರೆ ಎಂದ ಅವರು, ರಾಜ್ಯದಲ್ಲಿ ಲಸಿಕೆ ಕೊರತೆ ಇಲ್ಲ. ಸಕಾಲಕ್ಕೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಮುಗ್ಧ ಜನರಿಗೆ ತಪ್ಪು ಮಾಹಿತಿ ಕೊಟ್ಟು ದಾರಿ ತಪ್ಪಿಸೋದು ಬೇಡ. ದೊಡ್ಡ ಸ್ಥಾನದಲ್ಲಿದ್ದವರು, ರಾಜ್ಯದ ಜವಾಬ್ದಾರಿ ಹೊತ್ತಿದ್ದವರು ಇಂಥ ಹೇಳಿಕೆಗಳನ್ನು ಕೊಡುವುದು ಸರಿಯಲ್ಲ ಎಂದರು.

ಕೋವಿಡ್‌ ವಿಷಯದಲ್ಲಿ ಸರಕಾರ ಪ್ರತಿಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡೇ ಕೆಲಸ ಮಾಡುತ್ತಿದೆ. ಇಂಥ ಸಂಕಷ್ಟದ ಸಮಯದಲ್ಲಿ ಅವರನ್ನು ಕಡೆಗಣಿಸುವ ಪ್ರಶ್ನೆಯೇ ಇಲ್ಲ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕಾಲ ಕಾಲಕ್ಕೆ ಅವರ ಸಲಹೆಗಳನ್ನು ಪಡೆದಿದ್ದಾರೆ ಎಂದು ಅವರು ಹೇಳಿದರು.

ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಮಾಡಿರುವ ಆರೋಪ ಸುಳ್ಳು. ಅವರು ಪೂರ್ವಗ್ರಹಪೀಡಿತರಾಗಿ ದೂರುತ್ತಿದ್ದಾರೆ. ಪ್ರತಿಯೊಂದರಲ್ಲೂ ತಪ್ಪು ಹುಡುಕುವ ಅವರು, ಸಮಸ್ಯೆಗೆ ಪರಿಹಾರ ಹೇಳುವ ಕೆಲಸ ಮಾಡಿಲ್ಲ ಎಂದರು.‌

ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

 

Tags: BangaloreD K ShivakumarDCM Ashwath NarayanKannada News WebsiteLatest News KannadaLockdownState NewsVaccinationಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ಬೆಂಗಳೂರುಲಸಿಕೆ ಅಭಿಯಾನಲಾಕ್‍ಡೌನ್
Share202Tweet123Send
Previous Post

ಕಠಿಣ ಪರಿಶ್ರಮದಿಂದ ಸಾಧಿಸಿ ಮಾನ್ಯಳಾದ ಮಾನ್ಯತಾ ಜೈಕುಮಾರ್ ಬಗ್ಗೆ ನೀವು ತಿಳಿದುಕೊಳ್ಳಲೇಬೇಕು

Next Post

ಬಾಬಾ ಸಾಹೇಬರ ಚಿಂತನೆಗಳು ಎಂದಿಗೂ ಪ್ರಸ್ತುತ: ಗೋಪಾಲ್ ಅಭಿಮತ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಬಾಬಾ ಸಾಹೇಬರ ಚಿಂತನೆಗಳು ಎಂದಿಗೂ ಪ್ರಸ್ತುತ: ಗೋಪಾಲ್ ಅಭಿಮತ

ಬಾಬಾ ಸಾಹೇಬರ ಚಿಂತನೆಗಳು ಎಂದಿಗೂ ಪ್ರಸ್ತುತ: ಗೋಪಾಲ್ ಅಭಿಮತ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಕೋಟಕ್ ಮಹೀಂದ್ರಾ ಬ್ಯಾಂಕ್ ನಾಯಕತ್ವ ಬದಲಾವಣೆ | ಸಿಇಓ ಆಗಿ ಸೂರಜ್ ರಾಜಪ್ಪನ್ ನೇಮಕ

ಕೋಟಕ್ ಮಹೀಂದ್ರಾ ಬ್ಯಾಂಕ್ ನಾಯಕತ್ವ ಬದಲಾವಣೆ | ಸಿಇಓ ಆಗಿ ಸೂರಜ್ ರಾಜಪ್ಪನ್ ನೇಮಕ

April 1, 2026
SWR to run special trains for Good Friday, Easter rush

ತಿರುಚ್ಚಿರಾಪಳ್ಳಿ-ಬೆಂಗಳೂರು ನಡುವೆ ವಿಶೇಷ ಎಕ್ಸ್’ಪ್ರೆಸ್ ರೈಲು | ಇಲ್ಲಿದೆ ಡೀಟೇಲ್ಸ್

April 1, 2026
ಶಿಕಾರಿಪುರ | ಶಿಕ್ಷಕರು ಬೋಧನೆಯೊಂದಿಗೆ ಅನ್ವಯಿಕ ಕೌಶಲ್ಯ ಮುಖ್ಯ | ಪ್ರೊ.ಚಿನ್ನಪ್ಪ ಸಲಹೆ

ಶಿಕಾರಿಪುರ | ಶಿಕ್ಷಕರು ಬೋಧನೆಯೊಂದಿಗೆ ಅನ್ವಯಿಕ ಕೌಶಲ್ಯ ಮುಖ್ಯ | ಪ್ರೊ.ಚಿನ್ನಪ್ಪ ಸಲಹೆ

April 1, 2026
ಹಾವೇರಿ | ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಮೇಲೆರಗಿದ ಬಸ್ | ಮಗು ಸಾವು, ಮೂವರಿಗೆ ಗಂಭೀರ ಗಾಯ

ಹಾವೇರಿ | ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಮೇಲೆರಗಿದ ಬಸ್ | ಮಗು ಸಾವು, ಮೂವರಿಗೆ ಗಂಭೀರ ಗಾಯ

April 1, 2026
ಜಿಪಂ ಸಿಇಒ ಹೇಮಂತ್ ಕುಮಾರ್ ಅವರಿಗೆ ಕುವೆಂಪು ವಿವಿ ರಿಜಿಸ್ಟಾರ್ ಆಗಿ ಪ್ರಭಾರ ಜವಾಬ್ದಾರಿ

ಜಿಪಂ ಸಿಇಒ ಹೇಮಂತ್ ಕುಮಾರ್ ಅವರಿಗೆ ಕುವೆಂಪು ವಿವಿ ರಿಜಿಸ್ಟಾರ್ ಆಗಿ ಪ್ರಭಾರ ಜವಾಬ್ದಾರಿ

April 1, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL