ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ಬೈಕ್ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಫ್ಲೈಓವರ್ ಮೇಲಿನಿಂದ ಬಿದ್ದು ಸಾವನ್ನಪ್ಪಿರುವ ದುರ್ಘಟನೆ ಸಂಭವಿಸಿದೆ.
ನಗರದ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ವಾಹನಗಳನ್ನು ಓವರ್ ಟೇಕ್ ಮಾಡುವ ರಭಸದಲ್ಲಿ ಕಾರು ಬೈಕ್ ಗೆ ಡಿಕ್ಕಿ ಹೊಡೆದಿದ್ದರಿಂದ ಯುವತಿಯರು ಫ್ಲೈಓವರ್ ನಿಂದ ಕೆಳಗೆ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಅಪಘಾತದಲ್ಲಿ ಕಾರು ಸಹ ಜಖಂಗೊಂಡಿದ್ದು ಫೈಓವರ್ ನ ತುದಿಗೆ ಬಂದು ನಿಂತಿದ್ದು, ಇನ್ನು ಸ್ವಲ್ಪ ವಾಲಿದ್ದರೂ ಕಾರು ಸಹ ಫ್ಲೈಓವರ್ ಮೇಲಿನಿಂದ ಕೆಳಗೆ ಬೀಳುವ ಸಂಭವವಿತ್ತು ಎನ್ನಲಾಗಿದೆ.
ಪರಪ್ಪನ ಅಗ್ರಹಾರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತನಿಖೆ ಮುಂದುವರೆದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post