ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಚಂದನವನದ ನಟ ಚೇತನ್ ಚಂದ್ರ #Actor Chetan Chandra ಅವರ ಮೇಲೆ ಅಪರಿಚಿತರು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದು, ಕಗ್ಗಲಿಪುರ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಈ ಕುರಿತಂತೆ ಸ್ವತಃ ಸಾಮಾಜಿಕ ಜಾಲತಾಣದಲ್ಲಿ ಚೇತನ್ ಅವರು ಮಾಹಿತಿ ಹಂಚಿಕೊAಡಿದ್ದು, ಭಾನುವಾರ ರಾತ್ರಿ ಘಟನೆ ನಡೆದಿದ್ದು, ಈ ಬಗ್ಗೆ ದೂರು ನೀಡಿದ್ದೇನೆ ಎಂದಿದ್ದಾರೆ.
ಬೈಕ್’ನಲ್ಲಿ ಹಿಂಬಾಲಿಸಿಕೊಂಡು ಬಂದ ಕೆಲ ಕಿಡಿಗೇಡಿಗಳು, ಬೈಕ್’ಗೆ ಟಚ್ ಮಾಡಿದ್ದೀರಿ ಎಂದು ಗಲಾಟೆ ಆರಂಭಿಸಿದರು. ಈ ವೇಳೆ ದುಡ್ಡು ಕೇಳಲು ಆರಂಭಿಸಿದರು. ಹಣ ಕೊಡೋದಿಲ್ಲ ಎಂದು ಹೇಳಿದ್ದಕ್ಕೆ ಗಲಾಟೆ ಮಾಡಿದರು. ಬಳಿಕ ಬೈಕ್’ನಲ್ಲಿ ಚೇಸ್ ಮಾಡಿಕೊಂಡು ಬಂದು ಕಾರಿಗೆ ಬೈಕ್ ಅಡ್ಡಹಾಕಿ, ನನ್ನ ಮುಖಕ್ಕೆ ರಕ್ತ ಬರುವ ಹಾಗೆ ಹೊಡೆದಿದರು ಎಂದು ದೂರಿದ್ದಾರೆ.
Also read: ಶಿವಮೊಗ್ಗ | ಭೀಕರ ರಸ್ತೆ ಅಪಘಾತ | ಹೆತ್ತ ತಾಯಿ ಮುಂದೆಯೇ ಮಗಳ ದುರ್ಮರಣ
ನನ್ನ ಅಮ್ಮನನ್ನು ದೇವಸ್ಥಾನಕ್ಕೆ ಕರೆದುಕೊಂಡು ಹೋಗಿ ಪೂಜೆ ಮಾಡಿಸಿಕೊಂಡು ಬಂದಿದ್ದೇನೆ. ಕಗ್ಗಲಿಪುರದ ಬಳಿ ಬಂದಾಗ ಯಾರೂ ಆಗುಂತಕ ಕಿಡಿಗೇಡಿಗಳು ನನ್ನ ಕಾರನ್ನು ಹಿಂಬಾಲಿಸಿಕೊAಡು ಬಂದು ಈ ಕೃತ್ಯ ಎಸಗಿದ್ದಾರೆ ಎಂದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post