ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
7 ವಿಧಾನಪರಿಷತ್ ಸ್ಥಾನಗಳಿಗೆ ಚುನಾವಣೆ MLC Election ಘೋಷಣೆಯಾಗಿದ್ದು, ಜೂನ್ 3 ರಂದು ಚುನಾವಣೆ ನಡೆಯಲಿದೆ. ಮೇ 17ರಂದು ಈ ಬಗ್ಗೆ ಅಧಿಕೃತ ಅಧಿಸೂಚನೆ ಪ್ರಕಟವಾಗಲಿದ್ದು, ಮೇ 24 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ.
ಈ ಚುನಾವಣೆಯಲ್ಲಿ ಬಿಜೆಪಿಯ 4, ಕಾಂಗ್ರೆಸ್‌ನ 2, ಜೆಡಿಎಸ್‌ನ ಒಬ್ಬರು ಸದಸ್ಯರು ಆಯ್ಕೆಯಾಗುವ ಸಾಧ್ಯತೆಯಿದೆ. ವಿಧಾನಸಭೆಯ 225 ಸದಸ್ಯರು ಮತದಾನ ಮಾಡಲಿದ್ದಾರೆ.
ಬಿಜೆಪಿಯ ಲಕ್ಷಣ ಸವದಿ, ಲೆಹರ್ ಸಿಂಗ್ ಕಾಂಗ್ರೆಸ್‌ನ ಆರ್‌ಬಿ ತಿಮ್ಮಾಪೂರ್, ಅಲ್ಲಂ ವೀರಭದ್ರಪ್ಪ, ವೀಣಾ ಅಚ್ಚಯ್ಯ ಮತ್ತು ಜೆಡಿಎಸ್‌ನ ರಮೇಶ್ ಗೌಡ, ನಾರಾಯಣ ಸ್ವಾಮಿ ಅವರ ಅವಧಿ ಜೂನ್ 14ಕ್ಕೆ ಕೊನೆಯಾಗಲಿದೆ.
Also read: ಖ್ಯಾತ ಸಂತೂರ್ ವಾದಕ ಪಂಡಿತ್ ಶಿವಕುಮಾರ್ ಶರ್ಮಾ ವಿಧಿವಶ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post