ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಭದ್ರಾವತಿಯ ವಿಐಎಸ್’ಎಲ್ ಕಾರ್ಖಾನೆಯನ್ನು ಮುಚ್ಚುವ ಕೇಂದ್ರ ಸರ್ಕಾರದ ನಿರ್ಧಾರ ಖಂಡನೀಯವಾಗಿದ್ದು, ಕಾರ್ಖಾನೆಯನ್ನು ರಾಜ್ಯ ಸರ್ಕಾರವೇ ವಹಿಸಿಕೊಳ್ಳಬೇಕು ಎಂದು ಕಾಂಗ್ರೆಸ್ ನಾಯಕರು ಒತ್ತಡ ಹೇರಿದ್ದಾರೆ.
ವಿಧಾನಸಭೆಯಲ್ಲಿ ವಿಐಎಸ್’ಎಲ್ ಕುರಿತಾಗಿ ಶಾಸಕ ಬಿ.ಕೆ. ಸಂಗಮೇಶ್ವರ್ ಅವರು ಪ್ರಸ್ತಾಪಿಸದ ವೇಳೆ ಮಾತನಾಡಿದ ಯು.ಟಿ. ಖಾದರ್, ಕಾರ್ಖಾನೆಯನ್ನು ಮುಚ್ಚುವ ನಿರ್ಧಾರವನ್ನು ನಾವು ಬಲವಾಗಿ ಖಂಡಿಸುತ್ತೇವೆ. ನಿರ್ಣಯ ಕೈಗೊಂಡು, ಕೇಂದ್ರದ ಮೇಲೆ ಒತ್ತಡ ಹೇರಿ, ಕಾರ್ಖಾನೆಯನ್ನು ರಾಜ್ಯ ಸರ್ಕಾರವೇ ವಹಿಸಿಕೊಳ್ಳಬೇಕು. ರಾಜ್ಯದಿಂದಲೇ ಬಂಡವಾಳ ಹೂಡಿ, ಮರುಸ್ಥಾಪಿಸಿ, ಉತ್ಪಾದನೆಯನ್ನು ಮುಂದುವರೆಸಬೇಕು ಎಂದು ಆಗ್ರಹಿಸಿದರು.

Also read: ವಿಐಎಸ್’ಎಲ್ ಉಳಿಸುವ ವಿಚಾರದಲ್ಲಿ ವಿಧಾನಸಭೆಯಲ್ಲಿ ಯಡಿಯೂರಪ್ಪ ಹೇಳಿದ್ದೇನು?
ಈ ವೇಳೆ ಮಾತನಾಡಿದ ಶಾಸಕ ಪ್ರಿಯಾಂಕ್ ಖರ್ಗೆ, ಕಾರ್ಖಾನೆಯನ್ನು ಮುಚ್ಚುವುದಿಲ್ಲ ಎಂದು ರಾಜ್ಯ ಸರ್ಕಾರ ಹೇಳುತ್ತದೆ. ಆದರೆ, ಕಾರ್ಖಾನೆಯನ್ನು ಮುಚ್ಚಲಾಗುತ್ತದೆ ಎಂದು ಕೇಂದ್ರ ಸಚಿವ ಜ್ಯೋತಿರಾರಾಧ್ಯ ಸಿಂಧ್ಯಾ ಅವರು ಲೋಕಸಭೆಯಲ್ಲಿ ಹೇಳಿದ್ದಾರೆ.











Discussion about this post