ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಸರ್ಕಾರಿ ನೌಕರರ ವೇತನ ಶೇ.17ರಷ್ಟು ಹೆಚ್ಚಳ ಮಾಡಲು ನಿರ್ಧರಿಸಲಾಗಿದ್ದು, ಈ ಕುರಿತು ಆದೇಶ ಹೊರಡಿಸಲಾಗುವುದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ಹೇಳಿದ್ದಾರೆ.
7ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಸರ್ಕಾರಿ ನೌಕರರು ಮುಷ್ಕರ ನಡೆಸುತ್ತಿರುವ ಹಿನ್ನೆಲೆ ಹಣಕಾಸು ಇಲಾಖೆ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಗಳವಾರ ನೌಕರರ ಜೊತೆ ಚರ್ಚೆ ಆದ ಬಳಿಕ ಹಣಕಾಸು ಇಲಾಖೆ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದೆ. ಈ ವೇಳೆ ಒಂದು ಒಪ್ಪಂದಕ್ಕೆ ಬಂದಿದ್ದೇವೆ. ಶೇ.17 ಹೆಚ್ಚಳಕ್ಕೆ ಒಪ್ಪಿಗೆ ನೀಡಲಾಗಿದೆ. ಸರ್ಕಾರಿ ನೌಕಕರು ಮುಷ್ಕರ ಕೈಬಿಡ್ತಾರೆ ಎಂಬ ವಿಶ್ವಾಸ ಇದೆ ಎಂದು ತಿಳಿಸಿದರು.
ಎನ್ಪಿಎಸ್ ರದ್ದು ಬಗ್ಗೆ ಸಮಿತಿ ರಚನೆ ಬಳಿಕ ಸರ್ಕಾರದಿಂದ ಮಹತ್ವದ ನಿರ್ಣಯ ಕೈಗೊಳ್ಳಲಾಗುವುದು. ರಾಷ್ಟ್ರೀಯ ಪಿಂಚಣಿ ಯೋಜನೆ ರದ್ದು ಮಾಡುವ ಬೇಡಿಕೆ ಪರಾಮರ್ಶೆ ಮಾಡುತ್ತೇವೆ. ಎಸಿಎಸ್ ನೇತೃತ್ವದಲ್ಲಿ ಸಮಿತಿ ರಚಿಸುತ್ತೇವೆ. ಬೇರೆ ರಾಜ್ಯಗಳಲ್ಲಿ ಯಾವ ರೀತಿ ಪರಿಸ್ಥಿತಿ ಇದೆ ಎಂದು ಅಧ್ಯಯನ ನಡೆಸಿ ವರದಿ ಕೊಡಲು ಸೂಚಿಸುತ್ತೇವೆ ಎಂದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















