ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯದ ಎಲ್ಲ ಜಿಲ್ಲೆ ಹಾಗೂ ತಾಲೂಕು ಮಟ್ಟದಲ್ಲಿ ಕಟ್ಟಡ ಕಾರ್ಮಿಕರಿಗೆ ವಸತಿ ಸೌಕರ್ಯ ಕಲ್ಪಿಸುವ ಸಂಬಂಧ ನೀಲ ನಕ್ಷೆ ರೂಪಿಸಲು ತೀರ್ಮಾನಿಸಲಾಗಿದೆ.
ವಸತಿ ಸಚಿವ ಜಮೀರ್ ಅಹಮದ್ ಖಾನ್ Zameer Ahmed Khan ನೇತೃತ್ವದಲ್ಲಿ ವಿಧಾನಸೌಧದಲ್ಲಿ ಬುಧವಾರ ನಡೆದ ಸಭೆಯಲ್ಲಿ ವಸತಿ, ಕಾರ್ಮಿಕ ಹಾಗೂ ಪೌರಾಡಳಿತ ಇಲಾಖೆ ಜತೆಗೂಡಿ ಕಟ್ಟಡ ಕಾರ್ಮಿಕ ರಿಗಾಗಿ ಹೊಸ ವಸತಿ ಸಮುಚ್ಚಯ ಯೋಜನೆ ರೂಪಿಸಲು ನಿರ್ಧರಿಸಲಾಯಿತು.
ಜಿಲ್ಲಾ ಮತ್ತು ತಾಲೂಕು ಹಂತದಲ್ಲಿ ಲಭ್ಯವಿರುವ ಜಮೀನು, ಹಣಕಾಸು ಹೊಂದಾಣಿಕೆ, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಬ್ಸಿಡಿ ಪೌರಾಡಳಿತ ಹಾಗೂ ಕಾರ್ಮಿಕ ಇಲಾಖೆಗಳ ವ್ಯಾಪ್ತಿಯಲ್ಲಿ ದೊರೆಯಬಹುದಾದ ಸಹಾಯ ಕುರಿತು ಸಮಗ್ರ ಮಾಹಿತಿಯೊಂದಿಗೆ ಪ್ರಸ್ತಾವನೆ ಸಿದ್ದಪಡಿಸಲು ಸೂಚನೆ ನೀಡಲಾಯಿತು.

Also read: ಸದನದಿಂದ ಶಾಸಕರ ಅಮಾನತು ಪ್ರಜಾಪ್ರಭುತ್ವದ ಕಗ್ಗೊಲೆ: ಎಚ್.ಡಿ. ಕುಮಾರಸ್ವಾಮಿ ಕಿಡಿ
ಕಟ್ಟಡ ಕಾರ್ಮಿಕರಿಗೆ ವಸತಿ ಯೋಜನೆಗೆ ಬಡ್ಡಿ ರಹಿತ ಸಾಲ ದ ವ್ಯವಸ್ಥೆ ಸಿಗುವುದರಿಂದ ಫಲಾನುಭ ವಿಗಳಿಗೆ ಅನುಕೂಲ ಆಗಲಿದೆ. ಆದಷ್ಟು ಹೆಚ್ಚು ಜನರಿಗೆ ವಸತಿ ಸೌಲಭ್ಯ ಸಿಗುವಂತೆ ಮಾಡಿ ಎಂದು ಸಚಿವ ಜಮೀರ್ ಅಹಮದ್ ಖಾನ್ ಅಧಿಕಾರಿಗಳಿಗೆ ಸೂಚಿಸಿದರು.

ಕಾರ್ಮಿಕ ಸಚಿವ ಸಂತೋಷ್ ಲಾಡ್, ಪೌರಾಡಳಿತ ಸಚಿವ ರಹೀಮ್ ಖಾನ್, ಮುಖ್ಯಮಂತ್ರಿ ಯವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ವಸತಿ ಇಲಾಖೆ ಕಾರ್ಯದರ್ಶಿ ಮನೋಜ್ ಜೈನ್, ಪೌರಾಡಳಿತ ಇಲಾಖೆ ಕಾರ್ಯದರ್ಶಿ ಅಜಯ್ ನಾಗಭೂಷಣ್, ಕಾರ್ಮಿಕ ಇಲಾಖೆ ಆಯುಕ್ತ ನಾಗರಾಜ್, ಕೊಳಗೇರಿ ಅಭಿವೃದ್ಧಿ ಮಂಡಳಿ ಆಯುಕ್ತ ವೆಂಕಟೇಶ್, ಪ್ರಧಾನ ಅಭಿಯಂತರ ಬಾಲರಾಜು, ರಾಜೀವ್ ಗಾಂಧಿ ವಸತಿ ನಿಗಮ ವ್ಯವಸ್ಥಾಪಕ ನಿರ್ದೇಶಕರಾದ ಸುಶೀಲಮ್ಮ ಉಪಸ್ಥಿತರಿದ್ದರು.
(ವರದಿ: ಡಿ.ಎಲ್. ಹರೀಶ್, ಬೆಂಗಳೂರು)











Discussion about this post