ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಹಿಜಾಬ್-ಕೇಸರಿ ವಿವಾದ ರಾಜ್ಯದ ಹಲವು ಕಡೆಗಳಲ್ಲಿ ಹಿಂಸಾ ರೂಪಕ್ಕೆ ತಿರುಗಿರುವ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಶಾಲಾ ಕಾಲೇಜುಗಳಿಗೆ ಮೂರು ದಿನ ರಜೆ ಘೋಷಿಸಲಾಗಿದೆ.
ಈ ಕುರಿತಂತೆ ಮಾತನಾಡಿರುವ ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥ್ ನಾರಾಯಣ, ರಾಜ್ಯ ಸರ್ಕಾರ, ರಾಜ್ಯದಾದ್ಯಂತ ನಾಳೆಯಿಂದ ಮೂರು ದಿನಗಳ ಕಾಲ ರಜೆ ಘೋಷಿಸಲಾಗಿದೆ.
ಹಿಜಾಬ್-ಕೇಸರಿ ವಿವಾದ ಹಿಂಸಾತ್ಮಕ ರೂಪ ಪಡೆದುಕೊಂಡಿದ್ದು, ಇದು ಮತ್ತಷ್ಟು ಕಾಲೇಜು ಹಾಗೂ ನಗರಗಳಿಗೆ ಹಬ್ಬುವ ಆತಂಕ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಪದವಿ ಪೂರ್ವ, ಪದವಿ ಹಾಗೂ ಇಂಜಿನೀಯರಿಂಗ್ ಸೇರಿದಂತೆ ಎಲ್ಲ ಶಾಲೆ ಹಾಗೂ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post