ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಬೆಳಗಾವಿ ಜಿಲ್ಲೆಯಲ್ಲಿ ನಾಲ್ಕು ಕೋಟಿಗಳ ಕಾಮಗಾರಿಗೆ ಹಣ ಬಿಡುಗಡೆ ಮಾಡಲು ಕಮೀಷನ್ ನೀಡಬೇಕು ಎಂದು ಒತ್ತಾಯಿಸಿದ್ದಾರೆ ಎಂಬ ಆರೋಪವನ್ನು ಸಂತೋಷ್ ಕೆ ಪಾಟೀಲ್ ಎಂಬ ವ್ಯಕ್ತಿಯು ಆರೋಪ ಮಾಡಿ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವರಿಗೆ ಬರೆದಿರುವ ಪತ್ರಕ್ಕೆ ಸಂಬಂಧಿಸಿದಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರು ಸ್ಪಷ್ಟೀಕರಣ ನೀಡಿದ್ದಾರೆ ಎಂದು ಸಚಿವ ಈಶ್ವರಪ್ಪ Minister Eshwarappa ಹೇಳಿದ್ದಾರೆ.
ನಗರದಲ್ಲಿಂದು ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಸಂತೋಷ್ ಕೆ ಪಾಟೀಲ್ ಉಲ್ಲೇಖಿಸಿರುವ ಕಾಮಗಾರಿಗೆ ಅನುಮೋದನೆ ಕೋರಿಲ್ಲ ಮತ್ತು ಸರ್ಕಾರವು ಯಾವುದೇ ಕಾಮಗಾರಿಯನ್ನು ಮಂಜೂರು ಮಾಡಿಲ್ಲ. ಈ ಕಾಮಗಾರಿಯ ಸಂಬಂಧ ಇಲಾಖೆಯು ಯಾವುದೇ ಕಾರ್ಯಾದೇಶವನ್ನು ನೀಡಿಲ್ಲ ಮತ್ತು ಆಡಳಿತಾತ್ಮಕ ಅನುಮೋದನೆಯನ್ನು ಸಹಾ ನೀಡಿಲ್ಲ ಎಂದರು.
ಹಿಂಡಲಗಾ ಗ್ರಾಮದಲ್ಲಿ ಸಂತೋಷ್ ಕೆ ಪಾಟೀಲ್ ಹೇಳುವಂತಹ ಕಾಮಗಾರಿಯು ಇಲಾಖಾ ವತಿಯಿಂದ ಅನುಷ್ಠಾನಗೊಂಡಿಲ್ಲ. ಯಾವುದೇ ಸರ್ಕಾರಿ ಏಜೆನ್ಸಿಗಳು ಈ ಕಾಮಗಾರಿಗೆ ತಾಂತ್ರಿಕ ಅನುಮೋದನೆ ನೀಡಿಲ್ಲ ಅಥವಾ ಉಸ್ತುವಾರಿ ಮಾಡಿಲ್ಲ. ಹೀಗಾಗಿ ಹಣ ಬಿಡುಗಡೆ ಮಾಡುವ ಪ್ರಶ್ನೆಯೇ ಉದ್ಬವವಾಗುವುದಿಲ್ಲ ಎಂಬ ಸ್ಪಷ್ಟವಾದ ಸ್ಪಷ್ಟೀಕರಣವನ್ನು ಇಲಾಖೆಯ ಮುಖ್ಯಸ್ಥರು ಈಗಾಗಲೇ ನೀಡಿದ್ದಾರೆ ಎಂದು ಹೇಳಿದರು.
Also read: ಸಚಿವ ಗೋಪಾಲಯ್ಯರಿಂದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಮಾಸ್ಕ್, ಸ್ಯಾನಿಟೈಸರ್, ಪೆನ್ನುಗಳ ವಿತರಣೆ
ದಿನಾಂಕ: 9.3.2022ರಂದು ನ್ಯೂಸ್ 18 ಸುದ್ದಿ ವಾಹಿನಿಯಲ್ಲಿ ಸಂತೋಷ್ ಕೆ ಪಾಟೀಲ್ ಸಂದರ್ಶನ ನೀಡಿ ಮಾಡಿದ ಕಪೋಲಕಲ್ಪಿತ ಆರೋಪವು ನನ್ನ ಗಮನಕ್ಕೆ ಬಂದ ಕೂಡಲೇ ದಿನಾಂಕ: 10.3.2022ರಂದು ಸಂತೋಷ್ ಕೆ ಪಾಟೀಲ್ ವಿರುದ್ಧ 6ನೇ ಅಪರ ಮುಖ್ಯ ಮೆಟ್ರೋಪಾಲಿಟನ್ ನ್ಯಾಯಾಲಯ ಸಮಕ್ಷಮ ಮಾನನಷ್ಟ ಮೊಕದ್ದಮೆ ಸಲ್ಲಿಸಲಾಗಿದೆ ಎಂದು ಸ್ಪಷ್ಟನೆ ನೀಡಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post