ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಉಡುಪಿಯಲ್ಲಿ ಹಿಂದೂ ಯುವತಿಯರ ಸ್ನಾನ ಮಾಡುವ ವೀಡಿಯೋಗಳನ್ನು ಮಾಡಿದ ಮುಸ್ಲಿಂ ಯುವತಿಯರನ್ನು ತತಕ್ಷಣವೇ ಬಂಧಿಸಬೇಕು ಎಂದು ಆಗ್ರಹಿಸಿ ರಾಜ್ಯ ಬಿಜೆಪಿ ಭರ್ಜರಿ ಹೋರಾಟಕ್ಕೆ ಸಿದ್ದತೆ ಮಾಡಿಕೊಂಡಿದೆ.
ಈ ಕುರಿತಂತೆ ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಬಿಜೆಪಿ ಎಂಎಲ್’ಸಿ ರವಿಕುಮಾರ್, ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಮತಿಭ್ರಮಣೆಯಾಗಿದೆ. ಇವರಿಗೆ ಕನಿಷ್ಠ ಕಾಮನ್ ಸೆನ್ಸ್ ಇಲ್ಲ ಎಂದು ಕಿಡಿ ಕಾರಿದ್ದಾರೆ.
ಹಿಂದೂ ಯುವತಿಯರು ಸ್ನಾನ ಮಾಡುವ ವೀಡಿಯೋವನ್ನು ಹಿಡನ್ ಕ್ಯಾಮೆರಾಗಳ ಮೂಲಕ ರೆಕಾರ್ಡ್ ಮಾಡಿದ್ದ ಮೂವರು ವಿದ್ಯಾರ್ಥಿನಿಯರನ್ನು ಕೇವಲ ಕಾಲೇಜಿನಿಂದ ಡಿಬಾರ್ ಮಾಡಲಾಗಿದೆ. ಆದರೆ, ಇಂತಹ ಕೃತ್ಯ ಮಾಡಿರುವ ವಿದ್ಯಾರ್ಥಿನಿಯರನ್ನು ತತಕ್ಷಣವೇ ಬಂಧಿಸಬೇಕು ಎಂದು ಆಗ್ರಹಿಸಿದರು.
ಮೂವರು ವಿದ್ಯಾರ್ಥಿನಿಯರನ್ನು ತತಕ್ಷಣವೇ ಬಂಧಿಸಿ, ತನಿಖೆಗೆ ಒಳಪಡಿಸಬೇಕು. ಈ ವಿದ್ಯಾರ್ಥಿನಿಯರು ವೀಡಿಯೋಗಳನ್ನು ಯಾರಿಗೆ ಕಳುಹಿಸಿದ್ದಾರೋ ಅಂತಹ ಯುವಕರನ್ನೂ ಸಹ ವಿಚಾರಣೆಗೆ ಒಳಪಡಿಸಬೇಕು. ಇದರ ಹಿಂದೆ ಯಾವ ಜಾಲವಿದೆ ಎಂಬುದನ್ನು ಬಯಲಿಗೆ ಎಳೆಯಬೇಕು ಎಂದು ಆಗ್ರಹಿಸಿದ್ದಾರೆ.
ವೀಡಿಯೋ ಮಾಡಿರುವ ಮೂವರು ವಿದ್ಯಾರ್ಥಿನಿಯರನ್ನು ಬಂಧಿಸಬೇಕು ಎಂದು ಆಗ್ರಹಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ರಾಜ್ಯದಾದ್ಯಂತ ಜುಲೈ 27ರಂದು ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post