ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸಾಮಾಜಿಕ ನ್ಯಾಯ ದೊರೆತಾಗ ಪ್ರಜಾಪ್ರಭುತ್ವ ಸಂಪೂರ್ಣ ಯಶಸ್ವಿಯಾಗುತ್ತದೆ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಖಾತೆ ಸಚಿವ ಈಶ್ವರ ಖಂಡ್ರೆ Minister Eshwar Khandre ಅಭಿಪ್ರಾಯಪಟ್ಟಿದ್ದಾರೆ.
ಬೆಂಗಳೂರಿನಲ್ಲಿಂದು ಶಿವಾರ್ಚಕರ ಕ್ಷೇಮಾಭಿವೃದ್ಧಿ ಟ್ರಸ್ಟ್ ನ 4ನೇ ವಾರ್ಷಿಕೋತ್ಸವದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು ಶಿವಾರ್ಚಕ ಸಮುದಾಯದವರು ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಮತ್ತು ಆರ್ಥಿಕವಾಗಿ ತೀರಾ ಹಿಂದುಳಿದಿದ್ದರೂ, ಹಿಂದುಳಿದ ವರ್ಗಗಳ ಯಾವುದೇ ಆಯೋಗದ ವರದಿಯ ಜಾತಿಯ ಪಟ್ಟಿಯಲ್ಲಿ ಅಧಿಕೃತವಾಗಿ ಸೇರ್ಪಡೆಯಾಗಿಲ್ಲ ಎಂದು ನನಗೆ ತಿಳಿಸಲಾಗಿದೆ. ಈ ಸಮುದಾಯಕ್ಕೆ ನ್ಯಾಯ ಕೊಡಿಸಲು ಶ್ರಮಿಸುವುದಾಗಿ ತಿಳಿಸಿದರು.
ಶಿವಾರ್ಚಕರು ಮೂಲತಃ ಶಿವನನ್ನು ಪೂಜಿಸುವ ಸಮುದಾಯದವರಾಗಿದ್ದು, ವೀರಶೈವ ಲಿಂಗಾಯಿತ ಸಮುದಾಯಕ್ಕೆ ಸೇರಿದವರಾಗಿದ್ದಾರೆ ಮತ್ತು ಬಹಳ ಮಂದಿ, ಬಾಳೆ ಹೊನ್ನೂರು ರಂಬಾಪುರಿ ಪೀಠಕ್ಕೆ ನಡೆದುಕೊಳ್ಳುತ್ತಿದ್ದಾರೆ. ಈ ಸಮುದಾಯದ ಎಲ್ಲರಿಗೂ ಬರುವ ಡಿಸೆಂಬರ್ ನಲ್ಲಿ ನಡೆಯಲಿರುವ ವೀರಶೈವ ಲಿಂಗಾಯತ ಮಹಾಸಭಾದ 24ನೇ ಮಹಾಧಿವೇಶನಕ್ಕೆ ಆಗಮಿಸುವಂತೆ ಆಹ್ವಾನಿಸುವುದಾಗಿ ಸಭಾದ ಮಹಾ ಪ್ರಧಾನ ಕಾರ್ಯದರ್ಶಿಗಳೂ ಆದ ಈಶ್ವರ ಖಂಡ್ರೆ ತಿಳಿಸಿದರು.
Also read: ಮುಂದಿನ 2 ವರ್ಷಗಳಲ್ಲಿ ಎಡಪಂಥೀಯ ಉಗ್ರವಾದವನ್ನು ಸಂಪೂರ್ಣ ನಿರ್ಮೂಲನೆ ಮಾಡಲಾಗುವುದು: ಅಮಿತ್ ಶಾ ಪ್ರತಿಜ್ಞೆ
ಸಮಾರಂಭದಲ್ಲಿ ಶಿವಗಂಗೆಯ ಮೇಲಣ ಗವಿಸಿಂಹಾಸದ ಸಂಸ್ಥಾನ ಮಠದ ಶ್ರೀ ಶಾಂತಮುನಿ ದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ, ಟ್ರಸ್ಟ್ ನ ಅಧ್ಯಕ್ಷ ಪುಟ್ಟಬಸಪ್ಪ ಮತ್ತಿತರರು ಪಾಲ್ಗೊಂಡಿದ್ದರು.
ವರದಿ: ಡಿ.ಎಲ್. ಹರೀಶ್, ಬೆಂಗಳೂರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post