ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಐತಿಹಾಸಿಕ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ಭಾವನಾತ್ಮಕವಾಗಿ ಗಳಗಳನೆ ಕಣ್ಣೀರು ಸುರಿಸಿರುವ ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಗೆಲುವನ್ನು ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರಿಗೆ ಅರ್ಪಿಸಿದ್ದಾರೆ.
ತಮ್ಮ ನಿವಾಸದಲ್ಲಿ ಮಾತನಾಡಿರುವ ಅವರು, ಈ ಗೆಲುವನ್ನು ಪಕ್ಷದ ಕಾರ್ಯಕರ್ತರು, ಕೇಂದ್ರ ನಾಯಕರು ಹಾಗೂ ರಾಜ್ಯ ನಾಯಕರಿಗೆ ನೀಡಲು ಬಯಸುತ್ತೇನೆ. ಜನರು ಕಾಂಗ್ರೆಸ್ ಮೇಲೆ ವಿಶ್ವಾಸವಿಟ್ಟು ಮತ ನೀಡಿದ್ದಾರೆ. ಒಗ್ಗಟ್ಟಿನಿಂದ ಕಾಂಗ್ರೆಸ್ ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧಿಸಿತ್ತು. ಇದೇ ವೇಳೆ ಜೈಲಿನಲ್ಲಿದ್ದ ದಿನಗಳನ್ನು ನೆನೆದು ಅವರು ಕಣ್ಣೀರಿಟ್ಟಿದ್ದಾರೆ.
Also read: ಸಾಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬೇಳೂರು ಗೋಪಾಲಕೃಷ್ಣ ಗೆಲುವು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post