No Result
View All Result
Mysuru Ninada Griha Sangeet Concert On August 16th
English Articles

Mysuru to Host Hindustani Classical Vocal Concert on August 16

by kalpa News
August 11, 2026
1

Kalpa Media House  |  MYSURU | A Hindustani classical vocal concert by renowned Gwalior gharana musician Pandit M.P. Hegde of...

Read moreDetails
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
  • Advertise With Us
  • Grievances
  • About Us
  • Contact Us
Tuesday, August 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಕೋವಿಡ್ ಪ್ರಕರಣಗಳ ಸಂಖ್ಯೆ ಆಧರಿಸಿ ಶಾಲೆಗಳ ಭೌತಿಕ ತರಗತಿ ಸ್ಥಗಿತದ ನಿರ್ಧಾರ: ಸಚಿವ ಬಿ.ಸಿ. ನಾಗೇಶ್

kalpa News by kalpa News
January 13, 2022
in ಬೆಂಗಳೂರು ನಗರ
0
ಆಗಸ್ಟ್ 23ರಿಂದ 9ರಿಂದ 12ನೆಯ ತರಗತಿ ಆರಂಭ: ಶಿಕ್ಷಣ ಸಚಿವ ನಾಗೇಶ್

Internet Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಕೋವಿಡ್-19 ಪ್ರಕರಣಗಳ ಸಂಖ್ಯೆ, ಪಾಸಿಟಿವಿಟಿ ಪ್ರಮಾಣ ಆಧರಿಸಿ ತಾಲೂಕು, ಸ್ಥಳೀಯ ಮಟ್ಟದಲ್ಲಿ ಶಾಲೆ, ಪಿಯು ತರಗತಿಗಳ ಭೌತಿಕ ತರಗತಿಗಳನ್ನು ಸ್ಥಗಿತಗೊಳಿಸಿ ಆನ್‌ಲೈನ್ ಕ್ಲಾಸ್/ಪರ್ಯಾಯ ಬೋಧನಾ ವಿಧಾನದ ತರಗತಿ ನಡೆಸುವ ಕುರಿತು ಶಿಕ್ಷಣ ಇಲಾಖೆ ಅಧಿಕಾರಿಗಳ ಜೊತೆ ಚರ್ಚಿಸಿ ಜಿಲ್ಲಾಧಿಕಾರಿ, ತಹಸೀಲ್ದಾರ್‌ಗಳು ನಿರ್ಧಾರ ತೆಗೆದುಕೊಳ್ಳಬೇಕು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವ ಬಿ.ಸಿ ನಾಗೇಶ್ ತಿಳಿಸಿದರು.

ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿ ರಾಜ್ಯದ ಜಿಲ್ಲಾಧಿಕಾರಿಗಳು ಮತ್ತು ಶಿಕ್ಷಣ ಇಲಾಖೆ ಅಧಿಕಾರಿಗಳ ಜೊತೆ ಬುಧವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ ಬಳಿಕ ಸುದ್ದಿಗಾರರ ಜೊತೆ ಸಚಿವ ನಾಗೇಶ್ ಅವರು ಮಾತನಾಡಿದರು.

‘ರಾಜ್ಯದಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ಹೆಚ್ಚುತ್ತಿದ್ದರೂ, ಆಸ್ಪತ್ರೆಗೆ ದಾಖಲಾಗುವ ಪ್ರಮಾಣ  ಕಡಿಮೆ ಇದೆ. ಒಂದನೇ ಮತ್ತು 2ನೇ ಅಲೆಯಂತೆ ಆತಂಕ ಪಡುವ ಅಗತ್ಯವಿಲ್ಲ. ವಿದೇಶಗಳಲ್ಲಿ ಮತ್ತು ಭಾರತದಲ್ಲಿ ವರದಿಯಾಗಿರುವ ಪ್ರಕರಣಗಳನ್ನು ಗಮನಿಸಿದರೆ ತೀವ್ರತೆ, ಆಸ್ಪತ್ರೆಗೆ ದಾಖಲಾಗುವ ಪ್ರಮಾಣ ಮತ್ತು ಅಪಾಯ ಕಡಿಮೆ ಕಾಣಿಸುತ್ತಿದೆ ಎಂದು ತಜ್ಞರು ತಿಳಿಸುತ್ತಿದ್ದಾರೆ. ಅದರಲ್ಲೂ ಮಕ್ಕಳಲ್ಲಿ ಸೋಂಕು ಬಾಧಿಸುವ ಪ್ರಮಾಣ ಈವರೆಗಿನ ಮಾಹಿತಿ ಪ್ರಕಾರ ಕಡಿಮೆಯೇ ಇದೆ. ಹೀಗಾಗಿ, ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಭೌತಿಕ ತರಗತಿಗಳನ್ನು ಸ್ಥಗಿತಗೊಳಿಸುವ ಅಗತ್ಯತೆ ಕಂಡು ಬಂದಿಲ್ಲ. ಈ ಕುರಿತು ತಜ್ಞರ ಜೊತೆ ವಿವರವಾಗಿ ಚರ್ಚಿಸಲಾಗಿದೆ’ ಎಂದು ಸಚಿವ ನಾಗೇಶ್ ತಿಳಿಸಿದರು.

ಮಕ್ಕಳು ಶೈಕ್ಷಣಿಕವಾಗಿ ಈಗಾಗಲೇ ಸಾಕಷ್ಟು ಕಳೆದುಕೊಂಡಿದ್ದಾರೆ. ಮತ್ತಷ್ಟು ಕಳೆದುಕೊಳ್ಳುವುದು ಬೇಡ. ಆನ್‌ಲೈನ್ ಕ್ಲಾಸ್‌ಗಳು ಭೌತಿಕ ತರಗತಿಗಳಷ್ಟು ಪರಿಣಾಮಕಾರಿಯಾಗಿರುವುದಿಲ್ಲ ಎಂಬುದು ಈಗಾಗಲೇ ಸಾಬೀತಾಗಿದೆ. ಅದರಲ್ಲೂ ಗ್ರಾಮಾಂತರ ಪ್ರದೇಶಗಳ ಮಕ್ಕಳು ಹೆಚ್ಚಿನ ಪ್ರಮಾಣದಲ್ಲಿ ಓದು, ಬರಹ ಕಳೆದುಕೊಂಡು ಹಿಂದುಳಿದಿದ್ದಾರೆ. ಹೀಗಾಗಿ, ಭೌತಿಕ ತರಗತಿಗಳನ್ನು ನಿಲ್ಲಿಸುವ ಆತುರದ ನಿರ್ಧಾರ ತೆಗೆದುಕೊಳ್ಳುವುದು ಬೇಡ’ ಎಂದು ಸಚಿವರು ಹೇಳಿದರು.

ಶಾಲೆ, ಪಿಯು ಕಾಲೇಜುಗಳಲ್ಲಿ ಒಂದೇ ಒಂದು ಪಾಸಿಟಿವ್ ಪ್ರಕರಣ ಬಂದರೂ ಎಲ್ಲ ಮಕ್ಕಳಿಗೆ ಪರೀಕ್ಷೆ ಮಾಡಿಸಬೇಕು. ಮಕ್ಕಳಿಗೆ ಅಗತ್ಯ ಚಿಕಿತ್ಸೆ ಸಿಗುವಂತೆ ನೋಡಿಕೊಳ್ಳಬೇಕು. ಶಾಲೆಯನ್ನು ಸ್ವಚ್ಛಗೊಳಿಸಿ ನಿಯಮದಂತೆ ಭೌತಿಕ ತರಗತಿಗಳಿಗೆ ರಜೆ ಘೋಷಿಸಬೇಕು. ಮಕ್ಕಳು ಕೋವಿಡ್-19 ಸುರಕ್ಷತಾ ಕ್ರಮಗಳನ್ನು ಪಾಲಿಸುವಂತೆ ನೋಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ಶಿಕ್ಷಕರು ಹೆಚ್ಚಿನ ಗಮನ ಹರಿಸಬೇಕು’ ಎಂದು ಶಿಕ್ಷಣ ಇಲಾಖೆ ಉಪ ನಿರ್ದೇಶಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.

ಬೆಂಗಳೂರು ನಗರ ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ಹೆಚ್ಚಾಗಿವೆ. ಈ ಹಿನ್ನೆಲೆಯಲ್ಲಿ ಜನವರಿ 31ರವರೆಗೆ 1ರಿಂದ 9ನೇ ತರಗತಿಗಳ ಭೌತಿಕ ತರಗತಿಗಳನ್ನು ಬೆಂಗಳೂರು ನಗರ ಜಿಲ್ಲೆಯಲ್ಲಿ ಮಾತ್ರ ಸ್ಥಗಿತಗೊಳಿಸಲಾಗುತ್ತದೆ. ಆನ್‌ಲೈನ್ ಹಾಗೂ ಪರ್ಯಾಯ ಬೋಧನೆ ಮುಂದುವರೆಯಲಿದೆ’ ಎಂದು ಸಚಿವರು ತಿಳಿಸಿದರು.

ಲಸಿಕೆಗೆ ವೇಗ ನೀಡಿ:
15ರಿಂದ 18 ವರ್ಷದೊಳಗಿನ ಮಕ್ಕಳಿಗೆ ಲಸಿಕೆ ನೀಡಲು ಹೆಚ್ಚಿನ ಒತ್ತು ನೀಡಬೇಕು ಎಂದು ಸಚಿವರು ಸೂಚಿಸಿದರು.

ಲಸಿಕೆಯಿಂದ 3ನೇ ಅಲೆಯಲ್ಲಿ ಸೋಂಕಿನ ತೀವ್ರತೆ ಕಡಿಮೆಯಾಗಿದೆ ಎನ್ನುವುದು ಗೊತ್ತಾಗುತ್ತಿದೆ. ನಿಗದಿತ ಗುರಿಯಂತೆ ಎಲ್ಲ ಅರ್ಹ ಮಕ್ಕಳಿಗೆ ಲಸಿಕೆ ಕೊಡಿಸಬೇಕು. ಮಕ್ಕಳು ಲಸಿಕೆಯಿಂದ ವಂಚಿತರಾಗಬಾರದು. ಈ ಕುರಿತು ಮಕ್ಕಳು, ಪಾಲಕರಲ್ಲಿ ಜಾಗೃತಿ ಮೂಡಿಸಬೇಕು’ ಎಂದು ಅಧಿಕಾರಿಗಳಿಗೆ ಸಚಿವರು ಸಲಹೆ ನೀಡಿದರು.

ಸಭೆಯಲ್ಲಿ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್. ಸೆಲ್ವಕುಮಾರ್, ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರಾದ ಆರ್. ವಿಶಾಲ್ ಹಾಗೂ ಪಿಯು ಮಂಡಳಿ ನಿರ್ದೇಶಕರಾದ ಆರ್. ಸ್ನೇಹಲ್ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreCovidKannada NewsKannada News LiveKannada News OnlineKannada News WebsiteKannada WebsiteLatest News KannadaMinister BC NageshNews in KannadaNews KannadaState Newsಕೋವಿಡ್ಬೆಂಗಳೂರುಸಚಿವ ಬಿ.ಸಿ ನಾಗೇಶ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಪಡಿತರ ಅಕ್ಕಿ ಅಕ್ರಮ ದಾಸ್ತಾನು ಗೋಡನ್ ಮೇಲೆ ಪೊಲೀಸ್ ದಾಳಿ

Next Post

ವೈಕುಂಠ ಏಕಾದಶಿಯ ವಿಶೇಷ ಅಲಂಕಾರದ ಫೋಟೋಗಳು ಇಲ್ಲಿವೆ ನೋಡಿ…

kalpa News

kalpa News

Next Post
ವೈಕುಂಠ ಏಕಾದಶಿಯ ವಿಶೇಷ ಅಲಂಕಾರದ ಫೋಟೋಗಳು ಇಲ್ಲಿವೆ ನೋಡಿ…

ವೈಕುಂಠ ಏಕಾದಶಿಯ ವಿಶೇಷ ಅಲಂಕಾರದ ಫೋಟೋಗಳು ಇಲ್ಲಿವೆ ನೋಡಿ...

Leave a Reply Cancel reply

Your email address will not be published. Required fields are marked *

No Result
View All Result
Mysuru Ninada Griha Sangeet Concert On August 16th
English Articles

Mysuru to Host Hindustani Classical Vocal Concert on August 16

by kalpa News
August 11, 2026
1

Kalpa Media House  |  MYSURU | A Hindustani classical vocal concert by renowned Gwalior gharana musician Pandit M.P. Hegde of...

Read moreDetails
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL