ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಪ್ರಸಕ್ತ ಸಾಲಿನ ಡಿ. ದೇವರಾಜ ಅರಸು ರಾಜ್ಯಮಟ್ಟದ ಪ್ರಶಸ್ತಿಗೆ #D Devaraju Arasu State Award ಹಿರಿಯ ರಾಜಕಾರಣಿ, ಮಾಜಿ ಸಚಿವ ಎಸ್ . ಕೆ. ಕಾಂತ #S K Kantha ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಎಸ್. ತಂಗಡಗಿ #Shivaraj Thangadagi ಅವರು ತಿಳಿಸಿದ್ದಾರೆ.
ವಿಕಾಸ ಸೌಧ ತಮ್ಮ ಕಚೇರಿಯಲ್ಲಿ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಸಚಿವರು, ಸಾಹಿತಿ ಅಲ್ಲಮಪ್ರಭು ಬೆಟ್ಟದೂರ ಅವರ ನೇತೃತ್ವದ ಆಯ್ಕೆ ಸಮಿತಿ ಪ್ರಶಸ್ತಿ ಪುರಸ್ಕೃತರನ್ನು ಆಯ್ಕೆ ಮಾಡಿದೆ. ಪ್ರಶಸ್ತಿಯು ಐದು ಲಕ್ಷ ನಗದು ಹಾಗೂ ಫಲಕವನ್ನು ಒಳಗೊಂಡಿದೆ. ಆ.20ರಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಬೆಳಗ್ಗೆ 11 ಗಂಟೆಗೆ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ 109ನೇ ಜನ್ಮದಿನಾಚರಣೆ ಕಾರ್ಯಕ್ರಮ ನಡೆಯಲಿದೆ ಎಂದರು.
Also read: ಏಸೂರು ಕೊಟ್ಟರು ಈಸೂರು ಕೊಡೆವು | ಸ್ವಯಂ ಸ್ವಾತಂತ್ರ್ಯ ಘೋಷಿಸಿಕೊಂಡ ಗ್ರಾಮ
ಈ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ #CM Siddaramaiah ಅವರು ಎಸ್. ಕೆ .ಕಾಂತ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆʼ ಎಂದು ಸಚಿವ ಶಿವರಾಜ್ ತಂಗಡಗಿ ಅವರು ತಿಳಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post