ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಡಿಜಿಪಿ ರಾಮಚಂದ್ರ ರಾವ್ #DGP Ramachandra Rao ಅವರು ತಮ್ಮ ಕಚೇರಿಯಲ್ಲಿ ಇರುವಾಗಲೇ ರಾಸಲೀಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತ ವೀಡಿಯೋವೊಂದು ವೈರಲ್ ಆಗಿದೆ.
ಸಮವಸ್ತ್ರದಲ್ಲಿರುವಾಗಲೇ ರಾಮಚಂದ್ರರಾವ್ ತನ್ನ ಕಚೇರಿಯ ಒಳಗಡೆಯೇ ಮಹಿಳೆಯನ್ನು ತಪ್ಪಿಕೊಂಡಿದ್ದಾರೆ ಎನ್ನಲಾಗಿದೆ.
4-5 ತಿಂಗಳಲ್ಲಿ ರಾಮಚಂದ್ರ ರಾವ್ ಪೊಲೀಸ್ ಇಲಾಖೆಯಿಂದ ನಿವೃತ್ತರಾಗಲಿದ್ದು, ಈ ಸಮಯದಲ್ಲಿ ಅವರು ರಹಸ್ಯ ಕ್ಯಾಮೆರಾದ ಮುಂದೆ ಬೆತ್ತಲಾಗಿದ್ದಾರೆ ಎಂದು ಆರೋಪಿಸಲಾಗಿದೆ.
ರಾಮಚಂದ್ರರಾವ್ ಅವರ ರಾಸಲೀಲೆ ವಿಡಿಯೋ ಬಿಡುಗಡೆ ಆಗಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಸರ್ಕಾರ ಯಾವ ರೀತಿಯ ಕ್ರಮವನ್ನು ಕೈಗೊಳ್ಳಲಿದೆ ಎಂಬ ಕುತೂಹಲ ಹೆಚ್ಚಾಗಿದೆ.
ಈ ಹಿಂದೆ ಚಿನ್ನ ಕಳ್ಳ ಸಾಗಾಣಿಕೆಯ ಪ್ರಕರಣದಲ್ಲಿ ಪುತ್ರಿ ರನ್ಯ ರಾವ್ಗೆ #Ranya Rao ಶಿಷ್ಟಾಚಾರ ಉಲ್ಲಂಘಿಸಿ ವಿಮಾನ ನಿಲ್ದಾಣದಲ್ಲಿ ವಿಐಪಿ ಟ್ರೀಟ್ಮೆಂಟ್ ನೀಡಿದ್ದಕ್ಕೆ ಸುದ್ದಿಯಾಗಿದ್ದರು.
ಇನ್ನು, ಮಾಧ್ಯಮಗಳಿಗೆ ಫಸ್ಟ್ ರಿಯಾಕ್ಷನ್ ನೀಡಿರುವ ರಾಮಚಂದ್ರ ರಾವ್, ಇದು ಎಐ ಬಳಸಿಕೊಂಡು ಸೃಷ್ಠಿಸಲಾಗಿರುವ ವೀಡಿಯೋ. ಇದರಲ್ಲಿ ಇರುವುದು ನಾನಲ್ಲ. ನನ್ನ ವಿರೋಧ ಕೃತ್ಯವಾಗಿದೆ ಎಂದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 



















