ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ #Renukaswamy Murder Case ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಆರೋಪಿ ನಟ ದರ್ಶನ್, #Darshan ತಾವೇ ಸ್ವತಃ ಕೋರಿದಂತೆ ಅವರಿಗೆ ಬೆಳಗ್ಗೆ ಹಾಗೂ ಸಂಜೆ ವಾಕಿಂಗ್ ಮಾಡಲು ಅವಕಾಶ ನೀಡಲಾಗಿದೆ.
ಈ ಕುರಿತಂತೆ ನಟ ದರ್ಶನ್ ಅವರ ಸ್ವತಃ ಮನವಿಯಂತೆ ಬೆಳಗ್ಗೆ ಹಾಗೂ ಸಂಜೆ 40 ನಿಮಿಷ ಬ್ಯಾರಕ್ ಹೊರಭಾಗದ ಕಾರಿಡಾರ್’ನಲ್ಲಿ ವಾಕಿಂಗ್ ಮಾಡಲು ಅವಕಾಶ ಕಲ್ಪಿಸಲಾಗಿದೆ.

ಜೈಲಿನಲ್ಲಿ ದರ್ಶನ್’ಗೆ ಕನಿಷ್ಠ ಸವಲತ್ತುಗಳನ್ನು ನೀಡುವಂತೆ ಕೋರ್ಟ್ ಸೂಚಿಸಿತ್ತು. ವಿಚಾರಣೆ ವೇಳೆ ನ್ಯಾಯಾಧೀಶರ ಎದುರು ನನಗೆ ವಿಷ ಕೊಟ್ಟು ಬಿಡಿ. ನನಗೆ ಜೈಲು ಜೀವನ ಸಾಕಾಗಿದೆ. ಬಿಸಿಲು ನೋಡಿ ತಿಂಗಳಾಗಿದೆ. ಫಂಗಸ್ ಸಮಸ್ಯೆ ಆಗುತ್ತಿದೆ ಎಂದು ದರ್ಶನ್ ಗೋಗರೆದಿದ್ದರು.

ಅದರ ಜೊತೆಗೆ ದರ್ಶನ್ ಸೆಲ್ ಬಳಿ ಕೆಲಸ ಮಾಡುವ ಎಲ್ಲಾ 15 ಸಿಬ್ಬಂದಿ ಕಡ್ಡಾಯವಾಗಿ ಬಾಡಿ ಕ್ಯಾಮೆರಾ ಹಾಕಿಕೊಂಡು ಕೆಲಸ ಮಾಡಲು ಮೇಲಾಧಿಕಾರಿಗಳು ಸೂಚಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post