ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರೇಣುಕಾಸ್ವಾಮಿ ಹತ್ಯೆ ಪ್ರಕರಣದ #Renukaswamy Murder Case ಎ2 ಆರೋಪಿ ನಟ ದರ್ಶನ್ #Darshan ಬಳ್ಳಾರಿ ಜೈಲಿನಲ್ಲಿದ್ದು, ಈ ನಡುವೆಯೇ ತಮ್ಮ ವಕೀಲರ ಮೂಲಕ ಹೈಕೋರ್ಟ್ ಮೆಟ್ಟಿಲೇರಿದ್ದಾರೆ ಎಂದು ಹೇಳಲಾಗಿದೆ.
ಈ ಕುರಿತಂತೆ ಮಾಹಿತಿ ತಿಳಿದುಬಂದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಲಾಗಿರುವ ಚಾರ್ಜ್ ಶೀಟ್’ನಲ್ಲಿರುವ ಅಂಶಗಳನ್ನು ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ನಿರ್ಬಂಧ ಹೇರಬೇಕು ಎಂದು ಮನವಿ ಸಲ್ಲಿಸಿದ್ದಾರೆ ಎಂದು ಹೇಳಲಾಗಿದೆ.
Also read: ಶಿವಮೊಗ್ಗ: ಗೌರಿ-ಗಣೇಶ, ಈದ್ ಮಿಲಾದ್ ಹಿನ್ನೆಲೆ ಪೊಲೀಸ್ ಪಥಸಂಚಲನ
ತಮ್ಮ ವಿರುದ್ಧ ಸಲ್ಲಿಕೆ ಮಾಡಲಾಗಿರುವ ಚಾರ್ಜ್ ಶೀಟ್’ನಲ್ಲಿ ಉಲ್ಲೇಖವಾಗಿರುವ ಅಂಶಗಳನ್ನು ಯಾವುದೇ ಮಾಧ್ಯಮಗಳು ಪ್ರಸಾರ ಮಾಡಿ, ಬಹಿರಂಗಪಡಿಸದಂತೆ ತಡೆ ನೀಡಬೇಕು ಎಂದು ಕೋರಿದ್ದಾರೆ ಎಂದು ಹೇಳಲಾಗಿದ್ದು, ಅಧಿಕೃತ ಮಾಹಿತಿ ತಿಳಿದುಬರಬೇಕಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post