ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಆನೆಯನ್ನು ಕೊಂದ ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಚ್ಚಿ ಹಾಕುವಂತೆ ಒತ್ತಡ ಹಾಕುತ್ತಿದ್ದಾರೆ ಎಂದು ಸಂಸದ ಪ್ರಜ್ವಲ್ ರೇವಣ್ಣ MP Prajwal Revanna ವಿರುದ್ಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ಅವರಿಗೆ ಸಂಸದೆ, ಪ್ರಾಣಿ ಹಕ್ಕುಗಳ ಹೋರಾಟಗಾರ್ತಿ ಮನೇಕಾ ಗಾಂಧಿ Maneka Gandhi ಪತ್ರ ಬರೆದಿದ್ದಾರೆ.
ಈ ಕುರಿತಂತೆ ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿದ್ದು, ವಿದ್ಯುತ್ ತಂತಿ ತಗುಲಿ ಆನೆ ಸಾವನ್ನಪ್ಪಿರುವ ಪ್ರಕರಣದಲ್ಲಿ ಆನೆ ಕೊಂದ ಆರೋಪಿಗಳು ಜೆಡಿಎಸ್ ಬೆಂಬಲಿಗರಾಗಿದ್ದಾರೆ. ಹೀಗಾಗಿ, ಪ್ರಕರಣವನ್ನು ಮುಚ್ಚಿ ಹಾಕುವಂತೆ ಸ್ಥಳೀಯ ಸಂಸದ ಪ್ರಜ್ವಲ್ ರೇವಣ್ಣ ಅರಣ್ಯ ಇಲಾಖೆ ಅಧಿಕಾರಿಗಳ ಮೇಲೆ ಒತ್ತಡ ಹೇರಲು ಯತ್ನಿಸಿದ್ದಾರೆ ಎಂದು ಪತ್ರದಲ್ಲಿ ಆರೋಪಿಸಿದ್ದಾರೆ ಎಂದು ವರದಿಯಾಗಿದೆ.
2021ರಲ್ಲಿ ಹಾಸನದ ರೈತನೊಬ್ಬ ಆನೆಗೆ ಕರೆಂಟ್ ಶಾಕ್ ಕೊಟ್ಟು ಹತ್ಯೆ ಮಾಡಿ ದಂತ ತೆಗೆದು ಹೂತು ಹಾಕಿದ್ದರು. ಅಲ್ಲಿ ಜೆಸಿಬಿಯಿಂದ ಅಗೆದು ನೋಡಿದಾಗ 10 ಅಡಿಯಲ್ಲಿ ಆನೆಯ ದೇಹ ಪತ್ತೆಯಾಗಿತ್ತು. ಸದ್ಯ ಹಾಸನ ಆರ್’ಎಫ್’ಒ ವಿರುದ್ದ ಕ್ರಮ ತೆಗೆದುಕೊಳ್ಳುವಂತೆ ತಮ್ಮ ದೂರಿನಲ್ಲಿ ಮನೇಕಾ ಗಾಂಧಿ ಉಲ್ಲೇಖ ಮಾಡಿದ್ದಾರೆ. ಮಾತ್ರವಲ್ಲದೆ ಹಾಸನ ರೇಂಜ್ ಆಫೀಸರ್ ಬಗ್ಗೆ ಸೂಕ್ತ ತನಿಖೆ ಮಾಡಲು ಮನವಿ ಕೂಡ ಮಾಡಿದ್ದಾರೆ ಎಂದು ಹೇಳಲಾಗಿದೆ.
Also read: ಹತ್ತು ವರ್ಷದಿಂದ ದೂರಾಗಿದ್ದ ಶಿವಮೊಗ್ಗ-ಧಾರವಾಡದ ದಂಪತಿಯನ್ನು ಒಂದು ಮಾಡಿದ ಕಾನೂನು ಸೇವಾ ಸಮಿತಿ
ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಮಧ್ಯಪ್ರವೇಶಿಸಿ, ಕಾನೂನಾತ್ಮಕವಾಗಿ ಕ್ರಮ ಕೈಗೊಳ್ಳಬೇಕು ಎಂದು ಮನೇಕಾ ಮನವಿ ಮಾಡಿರುವುದಾಗಿ ತಿಳಿದುಬಂದಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















