ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಶಿವಮೊಗ್ಗ ಸುಬ್ಬಣ್ಣ ಅವರು ಸಾಹಿತ್ಯ, ಸಂಗೀತ, ಹಾಡುಗಾರಿಕೆಯಲ್ಲಿ ಪರಿಣಿತರಾಗಿದ್ದರು. ಹತ್ತು ಹಲವು ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ. ಇಂಥ ಮಹಾನ್ ಕಲಾವಿದರನ್ನು ಕಳೆದುಕೊಂಡು ಕನ್ನಡ ನಾಡು ಹಾಗೂ ಕನ್ನಡದ ಸಾಂಸ್ಕೃತಿಕ ಲೋಕ ಬಡವಾಗಿದೆ. ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ತಿಳಿಸಿದರು.
ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿ, ಕರ್ನಾಟಕದ ಮನೆ ಮನೆಗೆ ಹಾಡುಗಳನ್ನು ಮುಟ್ಟಿಸಿದ್ದಾರೆ. ಜನ ಅವರ ಹಾಡುಗಳನ್ನು ಕೇಳಿ ಆನಂದಿಸಿ ಪ್ರೇರಣೆ ಪಡೆದಿದ್ದಾರೆ ಎಂದರು.
ಗೃಹ ಸಚಿವ ಆರಗ ಜ್ಞಾನೇಂದ್ರ ಸಂತಾಪ:
ಶಿವಮೊಗ್ಗ ಜಿಲ್ಲೆಯವರಾದ ಸುಬ್ಬಣ್ಣ ನವರು, ಕರ್ನಾಟಕದ ಸಾಂಸ್ಕೃತಿಕ ಲೋಕದ ರಾಯಬಾರಿಗಳಲ್ಲಿ ಒಬ್ಬರಾಗಿದ್ದರು. ಸಂಗೀತ ಕ್ಷೇತ್ರದಲ್ಲಿ ತಮ್ಮ ಅದ್ಭುತ ಕಂಠಸಿರಿಗೆ ಹೆಸರಾಗಿದ್ದರು, ಕನ್ನಡ ಚಿತ್ರರಂಗಕ್ಕೆ ಪ್ರಪ್ರಥಮ ರಾಷ್ಟ್ರಮಟ್ಟದ ರಜತಕಮಲ ಪ್ರಶಸ್ತಿ ದೊರಕಿಸಿ ಕೊಟ್ಟವರು. ಸುಗಮ ಸಂಗೀತ ಹಾಗೂ ಚಲನ ಚಿತ್ರ ಹಿನ್ನಲೆ ಗಾಯಕರಾಗಿ ತಮ್ಮದೇ ಛಾಪು ಮೂಡಿಸಿದ್ದ ಸುಬ್ಬಣ್ಣನವರ ನಿಧನದಿಂದ, ಕನ್ನಡ ಸಾಂಸ್ಕೃತಿಕ ಲೋಕಕ್ಕೆ ಆದ ದೊಡ್ಡ ನಷ್ಟವಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ Araga Gnanendra ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
Also read: ಮೈಶುಗರ್ ಕಾರ್ಖಾನೆಯ ಬಾಯ್ಲರ್ ಗೆ ಅಗ್ನಿ ಸ್ಪರ್ಶ
ಭಗವಂತನು ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ. ಅವರ ಕುಟುಂಬ ಹಾಗೂ ಅಭಿಮಾನಿಗಳಿಗೆ ಈ ನೋವನ್ನು ಭರಿಸುವ ಶಕ್ತಿ ನೀಡಲಿ, ಎಂದು ಪ್ರಾರ್ಥಿಸುವುದಾಗಿ ಗೃಹ ಸಚಿವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ವಿಶ್ವೇಶ್ವರ ಹೆಗಡೆ ಕಾಗೇರಿ ಸಂತಾಪ:
ವಕೀಲ ವೃತ್ತಿಯಲ್ಲಿ ಹೆಸರು ಗಳಿಸಿದ್ದ ಇವರು ಸುಗಮ ಸಂಗೀತವನ್ನು ತಮ್ಮ ಪ್ರವೃತ್ತಿಯಾಗಿಟ್ಟುಕೊಂಡಿದ್ದರು. ಜನ-ಮನ ಗೆದ್ದಿದ್ದ ಅವರು ಹಿನ್ನೆಲೆ ಗಾಯನಕ್ಕಾಗಿ ರಾಷ್ಟ್ರಪ್ರಶಸ್ತಿ ಪಡೆದ ಮೊದಲ ಕನ್ನಡಿಗರಾಗಿದ್ದರು. ಅವರ ನಿಧನದಿಂದ ರಾಜ್ಯವು ಹಿರಿಯ ಚೇತನವನ್ನು ಕಳೆದುಕೊಂಡಂತಾಗಿದೆ ಎಂದು ವಿಧಾನ ಸಭೆ ಸಭಾಧ್ಯಕ್ಷರು ವಿಶ್ವೇಶ್ವರ ಹೆಗಡೆ ಕಾಗೇರಿ ಸಂತಾಪ ಸೂಚಿಸಿದ್ದಾರೆ.
ಶ್ರೀಯುತರ ಅಗಲಿಕೆಯಿಂದ ಅವರ ಕುಟುಂಬವರ್ಗದವರಿಗೆ ಹಾಗೂ ಅವರ ಅಭಿಮಾನಿ ಗಳಿಗೆ ಆಗಿರುವ ದುಃಖವನ್ನು ಭರಿಸುವ ಶಕ್ತಿಯನ್ನು ಹಾಗೂ ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.
ವರದಿ: ಡಿ.ಎಲ್. ಹರೀಶ್, ಬೆಂಗಳೂರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post