ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯದಲ್ಲಿರುವ ಎಲ್ಲ ಮುಜರಾಯಿ ಇಲಾಖೆ ದೇವಾಲಯಗಳಲ್ಲಿ 65 ವರ್ಷ ಮೇಲ್ಪಟ್ಟವರಿಗೆ ನೇರ ದರ್ಶನಕ್ಕೆ ಅವಕಾಶ ಕಲ್ಪಿಸುವಂತೆ ರಾಜ್ಯ ಸರ್ಕಾರ ಆದೇಶಿಸಲಾಗಿದೆ.
ಈ ಕುರಿತಂತೆ ಧಾರ್ಮಿಕ ದತ್ತಿ ಇಲಾಖೆ ಆಯುಕ್ತರು ಆದೇಶ ಸುತ್ತೋಲೆ ಹೊರಡಿಸಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಮುಜರಾಯಿ ಇಲಾಖೆ ದೇವಾಲಯಗಳಿಗೆ ಆಗಮಿಸುವ ಭಕ್ತರ ಸಂಖ್ಯೆ ಹೆಚ್ಚಾಗುತ್ತಿದೆ. ಪರಿಣಾಮವಾಗಿ ಹಿರಿಯ ನಾಗರಿಕರಿಗೆ ಸರತಿ ಸಾಲಿನಲ್ಲಿ ನಿಲ್ಲುವುದು ಕಷ್ಟವಾಗುತ್ತಿದೆ ಎಂದು ವರದಿಯಾಗಿದೆ.
ಈ ಹಿನ್ನೆಲೆಯಲ್ಲಿ ಇಲಾಖೆ ವ್ಯಾಪ್ತಿಗೆ ಒಳಪಡುವ ಎಲ್ಲ ದೇವಾಲಯಗಳಲ್ಲಿ 65 ವರ್ಷ ಮೇಲ್ಪಟ್ಟವರಿಗೆ ಪ್ರತ್ಯೇಕ ಶೀಘ್ರ ದರ್ಶನಕ್ಕೆ ವ್ಯವಸ್ಥೆ ಮಾಡಬೇಕು. ಹಿರಿಯ ನಾಗರಿಕರು ಅವರ ವಯಸ್ಸಿನ ದಾಖಲೆ ಅಥವಾ ಆಧಾರ್ ಕಾರ್ಡ್ ತೋರಿಸುವುದು ಅವಶ್ಯಕವಾಗಿರುತ್ತದೆ ಎಂದು ಉಲ್ಲೇಖಿಸಲಾಗಿದೆ.
ದಾಖಲೆ ತೋರಿಸುವ ಹಿರಿಯ ನಾಗರಿಕರಿಗೆ ದೇವಾಲಯದಲ್ಲಿ ಸ್ಥಳಾವಕಾಶ ಇದ್ದಲ್ಲಿ ಪ್ರತ್ಯೇಕ ಸ್ಥಳ ಸಹ ಕಾಯ್ದಿರಿಸಬೇಕು.
Also read: ಕಾಂಪೌಂಡ್ ಹತ್ತುವ ವೇಳೆ ಜಾರಿ ಬಿದ್ದು ವಿದ್ಯಾರ್ಥಿನಿ ಸಾವು
ದೇವಾಲಯಗಳಲ್ಲಿ ಹಿರಿಯ ನಾಗರಿಕರ ಸಹಾಯ ಕೇಂದ್ರ ಸ್ಥಾಪಿಸಿ, ಸೂಕ್ತ ಸಹಕಾರಕ್ಕೆ ವ್ಯವಸ್ಥೆ ಮಾಡಬೇಕು. ಇದಕ್ಕಾಗಿ ಸಿಬ್ಬಂದಿಯನ್ನು ನಿಯೋಜಿಸಬೇಕು ಎಂದು ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post