ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಬಕ್ರೀದ್ ಹಬ್ಬದ Bakrid ಸಮಯದಲ್ಲಿ ಜಾನುವಾರು ಬಲಿ ನೀಡುವ ಬದಲಾಗಿ ಅವುಗಳನ್ನು ನಾವೆಲ್ಲೆರೂ ಸಂರಕ್ಷಣೆ ಮಾಡೋಣ ಎಂದು ಪಶುಸಂಗೋಪನೆ ಸಚಿವ ಪ್ರಭು ಬಿ.ಚವ್ಹಾಣ್ Minister Prabhu Chouhan ಮನವಿ ಮಾಡಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ರಾಜ್ಯದಲ್ಲಿ ಈಗಾಗಲೇ ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಲ್ಲಿದೆ. ರಾಜ್ಯದಿಂದ ಹೊರಗಡೆ ಅಥವಾ ಹೊರ ರಾಜ್ಯದಿಂದ ನಮ್ಮ ರಾಜ್ಯಕ್ಕೆ ಯಾವುದೇ ಮಾರ್ಗದಿಂದ ಅಕ್ರಮ ಗೋವುಗಳು ಮತ್ತು ಗೋಮಾಂಸ ಸಾಗಿಸುವುದರ ಮೇಲೆ ಪಶುಸಂಗೋಪನೆ ಇಲಾಖೆ ಮತ್ತು ಪೊಲೀಸ್ ಇಲಾಖೆಯ ಅಧಿಕಾರಿಗಳು ಹದ್ದಿನ ಕಣ್ಣಿಟ್ಟು, ಗೋಹತ್ಯೆ ತಡೆಗಟ್ಟುವಲ್ಲಿ ಸಕ್ರೀಯರಾಗಿರುವಂತೆ ಅಧಿಕಾರಿಗಳಿಗೆ ಸಚಿವ ಪ್ರಭು ಚವ್ಹಾಣ್ ಸೂಚನೆ ನೀಡಿದ್ದಾರೆ.

ರಾಜ್ಯದ ಎಲ್ಲಾ ಗಡಿ ಭಾಗಗಳಲ್ಲಿ ಪಶುಸಂಗೋಪನೆ ಇಲಾಖೆಯ ಅಧಿಕಾರಿಗಳು ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳು ಕಟ್ಟೆಚ್ಚರ ವಹಿಸಿ, ಗೋಹತ್ಯೆ ನಿಷೇಧ ಕಾಯ್ದೆಯ ಉಲ್ಲಂಘನೆ ಆಗದಂತೆ ಜಾಗೃತೆ ವಹಿಸಬೇಕು. ಗೋಹತ್ಯೆ ಮಾಡುವುದು ಕಂಡು ಬಂದರೆ ಕೂಡಲೇ ಸ್ಥಳೀಯ ಪೊಲೀಸ್ ಠಾಣೆಗಳಲ್ಲಿ ಎಫ್.ಐ.ಆರ್ ದಾಖಲಿಸಿ, ತಪಿತಸ್ಥರ ವಿರುದ್ಧ ಕಠಿಣ ಕೈಗೊಳ್ಳಲಾಗುವುದು. ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಅಧಿನಿಯಮ 2020ರಡಿ ಗೋಹತ್ಯೆಗಾಗಿ ಜಾನುವಾರು ಮಾರಾಟ ಮಾಡುವುದು ಮತ್ತು ಕೊಂಡುಕೊಳ್ಳುವವರ ವಿರುದ್ಧ ಪ್ರಕರಣ ದಾಖಲಿಸಬಹುದಾಗಿದ್ದು, ಈ ಬಗ್ಗೆ ಸಾರ್ವಜನಿಕರು ಜಾಗೃತೆ ವಹಿಸಬೇಕು ಎಂದು ಸಚಿವ ಪ್ರಭು ಚವ್ಹಾಣ್ ಮನವಿ ಮಾಡಿದ್ದಾರೆ.

Also read: ಹಸಿರು ಕ್ರಾಂತಿಯ ಹರಿಕಾರ ಬಾಬು ಜಗಜೀವನ್ ರಾಮ್ ಚಿರಸ್ಥಾಯಿ: ಸಿಎಂ ಬೊಮ್ಮಾಯಿ
ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಗೋಹತ್ಯೆ ತಡೆಗಟ್ಟಲು ಬಿಬಿಎಂಪಿ ವಲಯ ಹಾಗೂ ನಗರ ಜಿಲ್ಲೆಯ ತಾಲ್ಲೂಕುಗಳಲ್ಲಿ ಟಾಸ್ಕ್ ಪೋರ್ಸ್ ನೇಮಕ ಮಾಡಲಾಗಿದ್ದು, ಜಾನುವಾರುಗಳ (ಗೋವು, ಹಸು, ಎತ್ತು, ಹೋರಿ, ಕರು, ಒಂಟೆಗಳು ಮತ್ತು ಹದಿಮೂರು ವರ್ಷದ ಎಮ್ಮೆ-ಕೋಣ ಒಳಗೊಂಡಂತೆ) ವಧೆ ಮಾಡುವುದು ಕಂಡು ಬಂದರೆ ಕೂಡಲೇ ಅವರ ವಿರುದ್ಧ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ಸಚಿವ ಪ್ರಭು ಚವ್ಹಾಣ್ ಎಚ್ಚರಿಕೆ ನೀಡಿದ್ದಾರೆ.










Discussion about this post