ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಸಾರ್ವಜನಿಕ ಸ್ಥಳಗಳಲ್ಲಿ ಜಾಹೀರಾತುಗಳಿಗೆ ಸಂಬಂಧಪಟ್ಟ ಪ್ಲೇಕ್ಸ್‌ಗಳನ್ನು ಹಾಕುವುದನ್ನು ನಿಷೇಧಿಸಿ ಕೋಟ್ ಆದೇಶಿಸಿದ್ದರೂ, ರಾಜರಾಜೇಶ್ವರಿ ನಗರದ ಮೆಟ್ರೋ ನಿಲ್ದಾಣದಿಂದ ಕೊಗಳತೆ ದೊರದಲ್ಲಿ ಇರುವ ಪಾದಚಾರಿ ಮಾರ್ಗದ ಮೇಲೆ ಇರುವ ಕಂಬಗಳಿಗೆ ಹುಟ್ಟುಹಬ್ಬದ ಶುಭಾಶಯ ಕೋರುವ ರಾಜಕೀಯ ಮುಖಂಡರ ಕಾರ್ಯಕ್ರಮಗಳಿಗೆ ಸಂಬಂಧ ಪಟ್ಟ ಫ್ಲೆಕ್ಸ್‌ಗಳನ್ನು ಕಟ್ಟಲಾಗಿದ್ದು, ಸಾರ್ವಜನಿಕರು ತೀವ್ರ ಕಿರಿಕಿರಿ ಅನುಭವಿಸುತ್ತಿದ್ದಾರೆ.
ರಾಜರಾಜೇಶ್ವರಿ ನಗರದ ಕಮಾನು ಮುಂಭಾಗದಲ್ಲಿ ಪಾದಚಾರಿ ಮಾರ್ಗದ ಮೇಲೆ ಹುಟ್ಟು ಹಬ್ಬದ ಶುಭಾಶಯ ಕೋರುವ ಫ್ಲೆಕ್ಸ್ ಹಾಕಿ ಪಾದಚಾರಿಗಳಿಗೆ ಮಾರ್ಗ ವಿಲ್ಲದೆ, ರಸ್ತೆಯ ತುಂಬಾ ವಾಹನಗಳು, ಕೆಲಸಕ್ಕೆ, ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳು ಫ್ಲೆಕ್ಸ್ ಅನ್ನು ನೋಡಿ ಹಿಡಿ ಶಾಪ ಹಾಕುತ್ತ ಸಾಗುತ್ತಿದ್ದ ದೃಶ್ಯ ಕಂಡು ಬಂತು.
ಸಾರ್ವಜನಿಕ ಸ್ಥಳಗಳಲ್ಲಿ ಪ್ರದರ್ಶನ ಫಲಕ ನಿಷೇಧ:
ರಾಜಕಾರಣಿಗಳು ಮತ್ತು ಸರ್ಕಾರಿ ಅಧಿಕಾರಿಗಳ ಚಿತ್ರಗಳನ್ನು ಪ್ರಕಟಿಸದಂತೆ ನಿರ್ಬಂಧ ವಿಧಿಸಿದ್ದ ಸುಪ್ರೀಂ ಕೋರ್ಟ್‌ನ ಕಾಮನ್ ಕಾಸ್ ತೀರ್ಪನ್ನು ನ್ಯಾಯಾಲಯ ಉಲ್ಲೇಖಿಸಿದೆ. ಸಾರ್ವಜನಿಕ ಸ್ಥಳಗಳಲ್ಲಿ ಪ್ರದರ್ಶನ ಫಲಕಗಳು ಅಥವಾ ರಾಜಕೀಯ ನಾಯಕರ ಅನಧಿಕೃತ ಜಾಹೀರಾತು/ಹೋರ್ಡಿಂಗ್‌ಗಳನ್ನು ಹಾಕದಂತೆ ಖಾತರಿಪಡಿಸುವಂತೆ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ನಿರ್ದೇಶಿಸಿದೆ.
ಸ್ಥಳೀಯರ ದೂರು:
ನಾಗರಿಕರಿಗೆ ಪಾದಚಾರಿ ಮಾರ್ಗದಲ್ಲಿ ನಡೆದು ಹೋಗಲು ಅವಕಾಶ ಇಲ್ಲದೆ ಓಡಾಡಲು ತೊಂದರೆ ಅನುಭವಿಸುತ್ತಿದ್ದರೂ, ಸಂಬಂಧ ಪಟ್ಟ ಬಿಬಿಎಂಪಿ ಇಲಾಖೆ ಅಧಿಕಾರಿಗಳು ಮಾತ್ರ ತಮಗೆ ಸಂಬಂಧವೆ ಇಲ್ಲ ಅನ್ನುವ ಹಾಗೇ ಇದ್ದಾರೆ ಎಂಬುದು ಸ್ಥಳೀಯರ ದೂರು.
ಬಿಬಿಎಂಪಿ ಆಯುಕ್ತರ ಗಮನಕ್ಕೆ
ಆರ್‌ಆರ್ ನಗರದ ಕಮಾನು ಮುಂಭಾಗದ ಪುಟ್ ಪಾತ್ ಮೇಲೆ ಫ್ಲೆಕ್ಸ್ ಹಾಕಿ ಹೈಕೋರ್ಟ್ ಆದೇಶ ಉಲ್ಲಂಘನೆ ಮಾಡಿರುವ ಬಗ್ಗೆ ಬಿಬಿಎಂಪಿ ಆಯುಕ್ತರ ಗಮನಕ್ಕೆ ಬಂದಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂಬುದು ಸಾರ್ವಜನಿಕರ ದೂರು.
ಸರ್ಕಾರಿ ಜಾಹೀರಾತು ಫಲಕಗಳನ್ನೇ ಹಾಕಬಾರದು ಎಂದು ಹೈಕೋರ್ಟ್ ಆದೇಶ ನೀಡಿದೆ. ಬಿಬಿಎಂಪಿ ಕೂಡ ಜಾಹೀರಾತು ಪ್ರದರ್ಶನ ನಿಷೇಧಿಸಿದೆ. ಈ ಯಾವ ನಿಯಮಗಳು ಆರ್.ಆರ್.ನಗರ ಕ್ಷೇತ್ರಕ್ಕೆ ಅನ್ವಯಿಸುವುದಿಲ್ಲವೇ ಸ್ಥಳೀಯರು ಪ್ರಶ್ನಿಸುತ್ತಿದ್ದಾರೆ.
ಹೈಕೋರ್ಟ್ ಆದೇಶ ಉಲ್ಲಂಘನೆ ಎಂದು ಗೊತ್ತಿದ್ದರೂ ವಲಯ ಬಿಬಿಎಂಪಿ ಅಧಿಕಾರಿಗಳು ಕೈಕಟ್ಟಿ ಕೂತಿದ್ದಾರೆ. ಸ್ಥಳೀಯ ಶಾಸಕರು ಅಥವಾ ಅವರ ಬೆಂಬಲಿಗರ ವಿರುದ್ಧ ಬಿಬಿಎಂಪಿ ಅಧಿಕಾರಿಗಳು ಏಕೆ ಕ್ರಮ ಜರುಗಿಸುತ್ತಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪಾದಚಾರಿ ಮಾರ್ಗವಿದ್ದರೂ ಪಾದಚಾರಿಗಳು ರಸ್ತೆಯ ಮಧ್ಯದಲ್ಲಿ ಸಾಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಆರ್ ಆರ್‌ಆರ್ ನಗರದಲ್ಲಿ ಹೆಚ್ಚಿನ ವಾಹನ ದಟ್ಟಣೆ ಇರುವ ಈ ಸ್ಥಳದಲ್ಲಿ ಅಪಘಾತ ಸಂಭವಿಸುವ ಮುನ್ನ ಬಿಬಿಎಂಪಿ ಹಾಗೂ ರಾಜ್ಯ ಸರ್ಕಾರ ಎಚ್ಚೆತುಕೊಳ್ಳಲಿ ಎಂಬುದು ಸಾರ್ವಜನಿಕರ ಆಶಯವಾಗಿದೆ.
ಚಿತ್ರ-ವರದಿ : ತೀರ್ಥಹಳ್ಳಿ ಅನಂತ ಕಲ್ಲಾಪುರ, ಬೆಂಗಳೂರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post