No Result
View All Result
RPF Mysuru Railway Theft Lost Mobile Recovered copy
English Articles

RPF Mysuru Cracks Railway Property Theft, Recovers Passenger’s Lost Mobile Phone

by kalpa News
August 31, 2026
0

Kalpa Media House  |  Mysuru  | The Railway Protection Force (RPF), Mysuru Division, has demonstrated prompt action and vigilance by...

Read moreDetails
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
  • Advertise With Us
  • Grievances
  • About Us
  • Contact Us
Tuesday, September 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

`ಸೂಪರ್-30’ ಯೋಜನೆಯಡಿ ಜಿಲ್ಲೆಗೊಂದು ಮಾದರಿ ಎಂಜಿನಿಯರಿಂಗ್ ಕಾಲೇಜು

ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ

kalpa News by kalpa News
October 23, 2021
in ಬೆಂಗಳೂರು ನಗರ
0
`ಸೂಪರ್-30’ ಯೋಜನೆಯಡಿ ಜಿಲ್ಲೆಗೊಂದು ಮಾದರಿ ಎಂಜಿನಿಯರಿಂಗ್ ಕಾಲೇಜು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ರಾಜ್ಯದ ಪ್ರತೀ ಜಿಲ್ಲೆಯಲ್ಲೂ ತಲಾ ಒಂದು ಮಾದರಿ ಎಂಜಿನಿಯರಿಂಗ್ ಕಾಲೇಜನ್ನು ಉತ್ಕೃಷ್ಟ ಗುಣಮಟ್ಟದಲ್ಲಿ  ಅಭಿವೃದ್ಧಿಪಡಿಸಲು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಕರಿಸಿದ್ದಪ್ಪ ಅವರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಲು ರಾಜ್ಯ ಸರಕಾರ ನಿರ್ಧರಿಸಿದೆ.

ಈ ಸಂಬಂಧವಾಗಿ ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಅಧ್ಯಕ್ಷತೆಯಲ್ಲಿ ಶುಕ್ರವಾರ ಇಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಈ ತೀರ್ಮಾನಕ್ಕೆ ಬರಲಾಗಿದೆ.


`ಸೂಪರ್-30 ಎಂಜಿನಿಯರಿಂಗ್ ಕಾಲೇಜು’ ಎನ್ನುವ ಈ ವಿಶಿಷ್ಟ ಪರಿಕಲ್ಪನೆಯ ಯೋಜನೆಗೆ, ಈಗಾಗಲೇ ಅಸ್ತಿತ್ವದಲ್ಲಿದ್ದು ಶೈಕ್ಷಣಿಕವಾಗಿ ಸಾಧಾರಣ ಸಾಧನೆ ಮಾಡುತ್ತಿರುವ ಕಾಲೇಜುಗಳನ್ನು ಆಯ್ಕೆ ಮಾಡಿಕೊಳ್ಳಲಾಗುವುದು. ಅದರಲ್ಲೂ ಸರಕಾರಿ ಎಂಜಿನಿಯರಿಂಗ್ ಕಾಲೇಜುಗಳಿಗೇ ಆದ್ಯತೆ ಕೊಡಲಾಗುವುದು; ಇಲ್ಲದಿದ್ದ ಕಡೆಗಳಲ್ಲಿ ಮಾತ್ರ ಖಾಸಗಿ ಕಾಲೇಜುಗಳನ್ನು ಆರಿಸಿಕೊಳ್ಳಲಾಗುವುದು. ಬೆಂಗಳೂರು ನಗರದಲ್ಲಿರುವ ಎಂಜಿನಿಯರಿಂಗ್ ಕಾಲೇಜುಗಳನ್ನು ಇದಕ್ಕೆ ಪರಿಗಣಿಸುವುದಿಲ್ಲ ಎಂದು ಅವರು ತಿಳಿಸಿದರು.

ಎಂಜಿನಿಯರಿಂಗ್ ಮಾಡಬೇಕೆಂಬ ಆಸೆಯುಳ್ಳ ವಿದ್ಯಾರ್ಥಿಗಳು ತಮ್ಮ ಜಿಲ್ಲೆಗಳಲ್ಲೇ ಉತ್ಕೃಷ್ಟ ಗುಣಮಟ್ಟದ ಶಿಕ್ಷಣ ಪಡೆಯುವಂತಾಗಬೇಕು. ಈ ಮೂಲಕ ಶಿಕ್ಷಣವು ದುಬಾರಿಯಾಗುವುದನ್ನು ಮತ್ತು ಉನ್ನತ ಶಿಕ್ಷಣಕ್ಕಾಗಿ ನಗರಗಳ ಕೆಲವೇ ಕಾಲೇಜುಗಳತ್ತ ವಿದ್ಯಾರ್ಥಿಗಳು ವಲಸೆ ಬರುವುದನ್ನು ತಡೆಯುವ ಆಶಯ ಸರಕಾರದ್ದು ಎಂದು ಸಚಿವರು ಪ್ರತಿಪಾದಿಸಿದ್ದಾರೆ.

`ಸೂಪರ್-30’ ಯೋಜನೆಯಡಿ ಆಯ್ಕೆಯಾಗುವ ಎಲ್ಲ ಕಾಲೇಜುಗಳಲ್ಲೂ ಉದ್ಯಮರಂಗದ ಬೇಡಿಕೆಗೆ ತಕ್ಕಂತೆ ಆರಂಭದಲ್ಲಿ ಕನಿಷ್ಠ ಒಂದು ವಿಭಾಗವನ್ನಾದರೂ (ಕಂಪ್ಯೂಟರ್ ಸೈನ್ಸ್ ಗೆ ಮೊದಲ ಆದ್ಯತೆ) ವಿಶ್ವ ದರ್ಜೆಯ ಗುಣಮಟ್ಟಕ್ಕೆ ತರಲಾಗುವುದು. ಈ ಉಪಕ್ರಮದಡಿ ಕಟ್ಟಡಗಳ ನಿರ್ಮಾಣಕ್ಕಾಗಲಿ, ಹೊಸ ಕಾಲೇಜುಗಳನ್ನು ತೆರೆಯುವುದಕ್ಕಾಗಲಿ ಅವಕಾಶವಿಲ್ಲ. ಕೇವಲ ಬೋಧನಾ ಗುಣಮಟ್ಟ ಸುಧಾರಣೆ, ಪ್ರಯೋಗಾಲಯಗಳ ಸ್ಥಾಪನೆ, ವಿದೇಶಿ ಶಿಕ್ಷಣ ಸಂಸ್ಥೆ ಹಾಗೂ ಉದ್ಯಮಗಳ ಸಹಭಾಗಿತ್ವಕ್ಕೆ ಮನ್ನಣೆ ಕೊಡಲಾಗುವುದು. ಮುಂದಿನ ಹಂತಗಳಲ್ಲಿ ಕಾಲೇಜುಗಳ ಉಳಿದ ವಿಭಾಗಗಳಿಗೂ ಇದನ್ನು ವಿಸ್ತರಿಸಲಾಗುವುದು ಎಂದು ಅಶ್ವತ್ಥನಾರಾಯಣ ನುಡಿದರು.

ಯೋಜನೆಯ ಜಾರಿಗೆ ರಚಿಸಲಾಗುವ ಸಮಿತಿಯಲ್ಲಿ ಶಿಕ್ಷಣ ತಜ್ಞರು ಮತ್ತು ಉದ್ಯಮಿಗಳು ಇರುತ್ತಾರೆ. ಇದಕ್ಕಾಗುವ ವೆಚ್ಚವನ್ನು ಕಂಪನಿಗಳ ಸಿಎಸ್ಆರ್ ನಿಧಿ, ವಿಟಿಯು ಮತ್ತು ಸ್ವತಃ ಆಯ್ಕೆಯಾದ ಸಂಸ್ಥೆಗಳು ಸಮನಾಗಿ ಭರಿಸಲಿವೆ. ಇದರ ಜೊತೆಗೆ ಆಯಾ ಸಂಸ್ಥೆಗಳ ಹಳೆಯ ವಿದ್ಯಾರ್ಥಿಗಳ ಮೂಲಕ ದೇಣಿಗೆ ಸಂಗ್ರಹಿಸುವ ಚಿಂತನೆಯೂ ಇದೆ ಎಂದು ಅವರು ಮಾಹಿತಿ ನೀಡಿದರು.

ಆಯ್ಕೆಯಾದ ಎಂಜಿನಿಯರಿಂಗ್ ಕಾಲೇಜುಗಳು ಸ್ಥಳೀಯ ಮಟ್ಟದಲ್ಲೇ ಇರುವ ಅತ್ಯುತ್ತಮ ಕೈಗಾರಿಕೆಗಳೊಂದಿಗೆ ಸಹಯೋಗ ಮಾಡಿಕೊಳ್ಳಲಿವೆ. ಅಲ್ಲದೆ, ಈ ಉದ್ದಿಮೆಗಳಿಗೇ ಕಾಲೇಜನ್ನು ಮುನ್ನಡೆಸುವ ಅವಕಾಶ ಕೊಡಲಾಗುತ್ತದೆ. ಬೇರೆ ಬೇರೆ ವಿಶ್ವವಿದ್ಯಾಲಯಗಳ ವ್ಯಾಪ್ತಿಯಲ್ಲಿರುವ ಅತ್ಯುತ್ತಮ ಬೋಧಕರನ್ನು ಕಾಲೇಜುಗಳು ಕರೆಸಿಕೊಳ್ಳಬಹುದು. ಈ ಮೂಲಕ ಖಾಸಗಿ ಸಹಭಾಗಿತ್ವದಲ್ಲಿ ಅತ್ಯುತ್ತಮ ಮಾದರಿ ಕಾಲೇಜುಗಳನ್ನು ಹೊಂದುವ ಗುರಿ ಇದೆ ಎಂದು ಅವರು ಹೇಳಿದರು.

`ಸೂಪರ್-30’ ಯೋಜನೆಯ ರೂಪುರೇಷೆ ಇತ್ಯಾದಿಗಳನ್ನು ಸಿದ್ಧಪಡಿಸಲು ರಚಿಸಲು ಉದ್ದೇಶಿಸಿರುವ ಸಮಿತಿಯು ಶೀಘ್ರದಲ್ಲೇ ಅಸ್ತಿತ್ವಕ್ಕೆ ಬರಲಿದೆ. ಕಾಲೇಜುಗಳನ್ನು ಆಯ್ಕೆ ಮಾಡುವಲ್ಲಿ ಈ ಸಮಿತಿಯ ತೀರ್ಮಾನವೇ ಅಂತಿಮ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

ಪೂರ್ವಭಾವಿ ಸಭೆಯಲ್ಲಿ ರಾಜ್ಯ ಸರ್ಕಾರದ ಸ್ಟಾರ್ಟ್ ಅಪ್ ವಿಷನ್ ಗ್ರೂಪ್ ನ ಮುಖ್ಯಸ್ಥ ಪ್ರಶಾಂತ್ ಪ್ರಕಾಶ್, ಉನ್ನತ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಕುಮಾರ್ ನಾಯಕ್, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಆಯುಕ್ತ ಪ್ರದೀಪ್ ಪಿ, ವಿಟಿಯು ಕುಲಪತಿ ಪ್ರೊ.ಕರಿಸಿದ್ದಪ್ಪ, ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಕಾರ್ಯನಿರ್ವಾಹಕ ನಿರ್ದೇಶಕ ಗೋಪಾಲ ಜೋಶಿ, ಐಟಿ, ಬಿಟಿ ಇಲಾಖೆ ನಿರ್ದೇಶಕಿ ಮೀನಾ ನಾಗರಾಜ್ ಉಪಸ್ಥಿತರಿದ್ದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BanagaloreKannada NewsKannada News LiveKannada News OnlineKannada News WebsiteKannada WebsiteLatest News KannadaMinister AshwathnarayanNews in KannadaNews KannadaState NewsSuper-30 engineering Collegeಬೆಂಗಳೂರುಸಚಿವ ಅಶ್ವತ್ಥನಾರಾಯಣಸೂಪರ್-30 ಎಂಜಿನಿಯರಿಂಗ್ ಕಾಲೇಜು
Share220Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಗಮನಿಸಿ! ಅ.23ರಂದು ಶಿವಮೊಗ್ಗದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ

Next Post

ಜೆಡಿಎಸ್‌ ವಿರುದ್ಧ ಅಪಪ್ರಚಾರ ಹಿನ್ನೆಲೆ ಸಿದ್ದರಾಮಯ್ಯ ಬಹಿರಂಗ ಚರ್ಚೆಗೆ ಬರಲಿ: ಹೆಚ್‌ಡಿಕೆ ನೇರ ಸವಾಲು

kalpa News

kalpa News

Next Post
ಚುನಾವಣಾ ಫಲಿತಾಂಶದ ನಂತರ ರಾಗಾ ಫಾರ್ ಪಿಎಂ ಮಿಷನ್: ಕುಮಾರಸ್ವಾಮಿ

ಜೆಡಿಎಸ್‌ ವಿರುದ್ಧ ಅಪಪ್ರಚಾರ ಹಿನ್ನೆಲೆ ಸಿದ್ದರಾಮಯ್ಯ ಬಹಿರಂಗ ಚರ್ಚೆಗೆ ಬರಲಿ: ಹೆಚ್‌ಡಿಕೆ ನೇರ ಸವಾಲು

Leave a Reply Cancel reply

Your email address will not be published. Required fields are marked *

No Result
View All Result
RPF Mysuru Railway Theft Lost Mobile Recovered copy
English Articles

RPF Mysuru Cracks Railway Property Theft, Recovers Passenger’s Lost Mobile Phone

by kalpa News
August 31, 2026
0

Kalpa Media House  |  Mysuru  | The Railway Protection Force (RPF), Mysuru Division, has demonstrated prompt action and vigilance by...

Read moreDetails
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL