ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ದೀಪಾವಳಿಗೂ ಮುನ್ನ ತನ್ನ ನೌಕರರಿಗೆ ಗುಡ್ ನ್ಯೂಸ್ ನೀಡಿರುವ ರಾಜ್ಯ ಸರ್ಕಾರ ತುಟ್ಟಿ ಭತ್ಯೆಯನ್ನು 21.50ಯಿಂದ 24.50ಗೆ ಏರಿಕೆ ಮಾಡಿ ಆದೇಶ ಹೊರಡಿಸಿದೆ.
ಈ ಕುರಿತಂತೆ ಇಂದು ಅಧಿಕೃತ ಆದೇಶ ಹೊರಡಿಸಿರುವ ಆರ್ಥಿಕ ಇಲಾಖೆ ಉಪಕಾರ್ಯದರ್ಶಿಗಳು, 2021ರ ಜುಲೈ 1ರಿಂದ ಪೂರ್ವಾನ್ವಯವಾಗುವಂತೆ ಮೂಲ ವೇತನದ ಮೇಲೆ 24.20ಗೆ ತುಟ್ಟಿಭತ್ಯೆಯನ್ನು ಪರಿಷ್ಕರಣೆ ಮಾಡಲಾಗಿದೆ.
ಈ ಆದೇಶ ಯುಜಿಸಿ, ಎಐಸಿಟಿಇ, ಐಸಿಎಆರ್ ವೇತನ ಶ್ರೇಣಿಗಳ ನಿವೃತ್ತ ಹಾಗೂ ಹಾಲಿ ನೌಕರರಿಗೆ, ಸರ್ಕಾರ ಮತ್ತು ಜಿಲ್ಲಾ ಪಂಚಾಯತ್‌ಗಳ ಪೂರ್ಣಾವಧಿ ನೌಕರರಿಗೆ ಸರ್ಕಾರದ ಸಹಾಯ ಅನುದಾನ ಪಡೆಯುತ್ತಿರುವ ಶಿಕ್ಷಣ ಸಂಸ್ಥೆಗಳು ಹಾಗೂ ವಿಶ್ವವಿದ್ಯಾಲಯಗಳಲ್ಲಿನ ಕಾಲಿಕ ವೇತನ ಶ್ರೇಣಿಯಲ್ಲಿರುವ ಪೂರ್ಣಾವಧಿ ನೌಕರರಿಗೆ ಅನ್ವಯಿಸುತ್ತದೆ.
ಇನ್ನು ಈ ಕುರಿತಂತೆ ಮಾತನಾಡಿರುವ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಾಕ್ಷರಿ, ದೀಪಾವಳಿಗೂ ಮುನ್ನ ತನ್ನ ನೌಕರರಿಗೆ ತುಟ್ಟಿ ಭತ್ಯೆ ಏರಿಕೆ ಮಾಡಿರುವ ರಾಜ್ಯ ಸರ್ಕಾರದ ನಿರ್ಧಾರ ಅಭಿನಂದನಾರ್ಹವಾದುದು. ನಮ್ಮ ಮನವಿಯನ್ನು ಪುರಸ್ಕರಿಸಿ ಈ ನಿರ್ಧಾರ ಕೈಗೊಂಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಎಲ್ಲಾ ಸಚಿವರು ಹಾಗೂ ಅಧಿಕಾರಿಗಳಿಗೆ ಎಲ್ಲಾ ಸರ್ಕಾರಿ ನೌಕರರ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹರ್ಷ ವ್ಯಕ್ತಪಡಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post