ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕೆಎಸ್’ಆರ್’ಟಿಸಿ ಬಸ್’ನಲ್ಲಿ #KSRTC Bus ವೈದ್ಯೆಗೆ ಲೈಂಗಿಕ ಕಿರುಕುಳ #Sexual Harassment ನೀಡಿದ ಆರೋಪದಲ್ಲಿ ಪೊಲೀಸರು ಬಂಧಿಸಿ, ಠಾಣಾ ಜಾಮೀನಿನ ಆಧಾರದಲ್ಲಿ ಬಿಡುಗಡೆ ಮಾಡಿದ್ದಾರೆ.
ಬೆಂಗಳೂರಿನ ದಾಸರಹಳ್ಳಿಯ ಭುವನೇಶ್ವರಿ ನಗರದ ವೈದ್ಯೆ ನೀಡಿದ ದೂರಿನ ಮೇರೆಗೆ ದೊಡ್ಡಬಳ್ಳಾಪುರದ ಫೈರೋಜ್ ಖಾನ್ (46) ಎಂಬುವವರನ್ನು ಸಂಜಯನಗರ ಪೊಲೀಸರು ಬಂಧಿಸಿ, ಹೇಳಿಕೆ ದಾಖಲಿಸಿಕೊಂಡು ಠಾಣಾ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ವರದಿಯಾಗಿದೆ.
ಸಂತ್ರಸ್ತ ವೈದ್ಯೆಯು ಅ.2ರಂದು ಸಂಜೆ ದೊಡ್ಡಬಳ್ಳಾಪುರದಿಂದ ಬೆಂಗಳೂರಿಗೆ ಬಸ್’ನಲ್ಲಿ ಪ್ರಯಾಣಿಸುತ್ತಿದ್ದರು. ಆಗ ಅದೇ ಬಸ್ಗೆ ಹತ್ತಿದ್ದ ಫೈರೋಜ್ ಖಾನ್, ವೈದ್ಯೆಯ ಪಕ್ಕದ ಸೀಟಿನಲ್ಲಿ ಕುಳಿತಿದ್ದರು. ಬಸ್ ಹೆಬ್ಬಾಳದ ಎಸ್ಟೀಮ್ ಮಾಲ್ ಬಳಿ ಬಂದಾಗ ಆರೋಪಿ, ವೈದ್ಯೆಯೊಂದಿಗೆ ಅಸಭ್ಯವಾಗಿ ವರ್ತಿಸಿದದಾರೆ. ಸಾರ್ವಜನಿಕವಾಗಿ ಅವರ ಮುಂಗೈ ಮತ್ತು ತೊಡೆಯ ಭಾಗವನ್ನು ಮುಟ್ಟಿ, ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಸಂತ್ರಸ್ಥೆ ಆರೋಪಿಸಿದ್ದಾರೆ ವರದಿಯಾಗಿದೆ.
ಆರೋಪಿಯ ಅನುಚಿತ ವರ್ತನೆಯಿಂದ ಕಸಿವಿಸಿಗೊಂಡ ವೈದ್ಯೆ, ಸಹೋದರನಿಗೆ ಕರೆ ಮಾಡಿ ಈ ವಿಷಯ ತಿಳಿಸಿದ್ದಾರೆ. ಜತೆಗೆ, ಬಸ್ ಚಾಲಕನಿಗೂ ಮಾಹಿತಿ ನೀಡಿದ್ದಾರೆ. ನಂತರ ವೈದ್ಯೆಯ ಸಹೋದರ, ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಮಾಡಿ ಫೈರೋಜ್ ಖಾನ್ ದುರ್ವತನೆಯ ವಿಚಾರ ತಿಳಿಸಿದ್ದಾರೆ.
ಇದರ ಬೆನ್ನಲ್ಲೇ ಪೊಲೀಸ್ ನಿಯಂತ್ರಣ ಕೊಠಡಿಯ ಸಿಬ್ಬಂದಿ ಹೊಯ್ಸಳ ಪೊಲೀಸರಿಗೆ ಮಾಹಿತಿ ರವಾನಿಸಿದ್ದಾರೆ. ನಂತರ ಹೊಯ್ಸಳ ಸಿಬ್ಬಂದಿಯು ಬ್ಯಾಪ್ಟಿಸ್ಟ್ ಆಸ್ಪತ್ರೆ ಬಳಿ ಬಸ್ ನಿಲ್ಲಿಸಿ, ಆರೋಪಿಯನ್ನು ಬಂಧಿಸಿದ್ದಾ. ಬಂಧಿತ ಫೈರೋಜ್ ಖಾನ್ ವಿರುದ್ಧ ಲೈಂಗಿಕ ಕಿರುಕುಳ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post