ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಕೋವಿಡ್-19 ದೃಢಪಟ್ಟಿರುವ ಹಿನ್ನಲೆ ಅವರ ಪತ್ನಿ ರಾಮನಗರ ಶಾಸಕಿ ಅನಿತಾ ಕುಮಾರಸ್ವಾಮಿಯವರಿಗೂ ಹೋಂ-ಕ್ವಾರಂಟೈನ್ ಆಗುವಂತೆ ವೈದ್ಯರು ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
ವೈದ್ಯರ ಮುಂದಿನ ಸೂಚನೆ ಬರುವವರೆಗೂ ಅನಿತಾ ಅವರು ಹೋಂ ಕ್ವಾರಂಟೈನ್‌ನಲ್ಲೇ ಇರುವಂತೆ ವೈದ್ಯರು ಸಲಹೆ ನೀಡಿದ್ದಾರೆ ಎನ್ನಲಾಗಿದೆ.
ಕೋವಿಡ್ ಅತೀ ವೇಗವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಕೆಲವು ದಿನಗಳ ಕಾಲ ಜೆಪಿ ನಗರದ ಗೃಹಕಛೇರಿ ಬಳಿಯೂ ಸಾರ್ವಜನಿಕರ ಪ್ರವೇಶ ಬೇಡವೆಂದು ವೈದ್ಯರು ಸಲಹೆ ನೀಡಿರುವ ಹಿನ್ನೆಲೆಯಲ್ಲಿ ಅನ್ಯತಾ ಭಾವಿಸದೆ ಕಾರ್ಯಕರ್ತರು ಮುಖಂಡರುಗಳು ಸಹಕರಿಸಬೇಕು. ಹಾಗೂ ಪ್ರತಿಯೊಬ್ಬರು ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಂಡು ಕೋವಿಡ್ ಸೊಂಕು ಹರಡದಂತೆ ಮುಂಜಾಗ್ರತಾ ಕ್ರಮಗಳನ್ನ ಅನುಸರಿಸಬೇಕೆಂದು ಮನವಿ ಅನಿತಾ ಕುಮಾರಸ್ವಾಮಿ ಮನವಿ ಮಾಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post