ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಸಿನಿಮಾ ತಾರೆಯರ ಜನ್ಮದಿನ ಎಂದರೆ ಹಾಗೆಯೇ… ಅವರ ಮನೆ ಮುಂದೆ ಅಭಿಮಾನಿಗಳು ಸೇರಿ, ಶುಭಾಶಯ ಕೋರುವ ಜೊತೆಯಲ್ಲಿ ಅದ್ದೂರಿಯಾಗಿ ಕೇಕ್ ಕತ್ತರಿಸುವುದು ಸೇರಿದಂತೆ ಹಲವು ರೀತಿಯಲ್ಲಿ ಜನ್ಮದಿನ ಆಚರಿಸುತ್ತಾರೆ. ಆದರೆ, ಈ ಬಾರಿ ಗೋಲ್ಡನ್ ಸ್ಟಾರ್ ಗಣೇಶ್ #Golden Star Ganesh ಮಾತ್ರ ತಮ್ಮ ಜನ್ಮದಿನದಂದು ಮನೆ ಬಳಿ ಬರಬೇಡಿ ಎಂದು ಅಭಿಮಾನಿಗಳಿಗೆ ಹೇಳಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿರುವ ಗಣೇಶ್, ಹುಟ್ಟುಹಬ್ಬದ ಕುರಿತಾಗಿ ಅಭಿಮಾನಿಗಳಿಗೆ ಮನವಿ ಮಾಡಿಕೊಂಡಿದ್ದಾರೆ. ಮನೆಯಲ್ಲಿ ಇರೋದಿಲ್ಲ. ಯಾರೂ ಮನೆ ಹತ್ತಿರ ಬರಬೇಡಿ ಎಂದಿದ್ದಾರೆ. ಬದಲಾಗಿ ಕಷ್ಟದಲ್ಲಿದ್ದವರಿಗೆ ಸಹಾಯ ಮಾಡಿ, ಅದೇ ನನಗೆ ಕೊಡುವ ಉಡುಗೊರೆ ಎಂದಿದ್ದಾರೆ. ಹೀಗಾಗಿ ಈ ಬಾರಿ ಗಣೇಶ್ ಅಭಿಮಾನಿಗಳೊಂದಿಗೆ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿಲ್ಲ ಎಂದಿದ್ದಾರೆ.
ಪಿನಾಕ ಹಾಗೂ ಯುವರ್ ಸಿನ್ಸಿಯರ್ಲಿ ರಾಮ್ ಸಿನಿಮಾದ ಚಿತ್ರೀಕರಣಕ್ಕಾಗಿ ಬೇರೆ ಊರಿನಲ್ಲಿರುವ ಕಾರಣಕ್ಕೆ ಗಣೇಶ್ ಅಭಿಮಾನಿಗಳಿಗೆ ಮನೆ ಹತ್ರ ಬರಬೇಡಿ ಎಂದಿದ್ದಾರೆ.
`ಕೃಷ್ಣಂ ಪ್ರಣಯ ಸಖಿ’ ಚಿತ್ರದ ಯಶಸ್ಸಿನ ಬಳಿಕ ಗಣೇಶ್ ಚಿತ್ರಗಳಿಗೆ ಮತ್ತೆ ಪುಷ್ಠಿ ಸಿಕ್ಕಿದ್ದು ಬಲು ಬೇಡಿಕೆ ಹೊಂದಿದ್ದಾರೆ. ಹೀಗಾಗಿ ಈ ವರ್ಷದಲ್ಲಿ ಪಿನಾಕ ಹಾಗೂ ಯುವರ್ ಸಿನ್ಸಿಯರ್ಲಿ ರಾಮ್ ಚಿತ್ರವನ್ನ ತೆರೆಗೆ ತರಲು ಪ್ರಯತ್ನಸುತ್ತಿರುವ ಗಣೇಶ್ ನಿರಂತರ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post