No Result
View All Result
Record Budget: Chief Minister Must Fulfill Hometown Demands, Urges Dr. Shushrutha Gowda
English Articles

Record Budget: Chief Minister Must Fulfill Hometown Demands, Urges Dr. Shushrutha Gowda

by ಕಲ್ಪ ನ್ಯೂಸ್
March 2, 2026
0

Kalpa Media House  |  Mysuru | BJP leader and noted neurologist Dr. Shushrutha Gowda has urged Chief Minister Siddaramaiah to...

Read moreDetails
Hotel Management Students Participate in Tree Census

Hotel Management Students Participate in Tree Census

March 2, 2026
Minister Somanna Inspects & Inaugurates Road Under Bridges in Tumkur District eliminating level Crossing gates

Minister Somanna Inspects & Inaugurates Road Under Bridges in Tumkur District eliminating level Crossing gates

February 26, 2026
Le Méridien Dehradun in the Foothills of the Himalayas, Inviting Guests to Slow Down and Savour the Good Life

Le Méridien Dehradun in the Foothills of the Himalayas, Inviting Guests to Slow Down and Savour the Good Life

February 25, 2026
From Complex Revisions to Robotic Spine Care: Narayana Health City Marks 10,000 Surgery Milestone

From Complex Revisions to Robotic Spine Care: Narayana Health City Marks 10,000 Surgery Milestone

February 24, 2026
  • Advertise With Us
  • Grievances
  • About Us
  • Contact Us
Tuesday, March 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ನಿಮ್ಮ ಭಾವನೆಗಳಿಗೆ ವಿರುದ್ಧವಾಗಿ ನಿರ್ಧಾರ ಮಾಡಲ್ಲ, ಚನ್ನಪಟ್ಟಣ ಕಾರ್ಯಕರ್ತರಿಗೆ ಹೆಚ್‌ಡಿಕೆ ಭರವಸೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 23, 2024
in ಬೆಂಗಳೂರು ನಗರ
0
ನಿಮ್ಮ ಭಾವನೆಗಳಿಗೆ ವಿರುದ್ಧವಾಗಿ ನಿರ್ಧಾರ ಮಾಡಲ್ಲ, ಚನ್ನಪಟ್ಟಣ ಕಾರ್ಯಕರ್ತರಿಗೆ ಹೆಚ್‌ಡಿಕೆ ಭರವಸೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಚನ್ನಪಟ್ಟಣ ಟಿಕೆಟ್ ವಿಷಯಕ್ಕೆ ನೆಲದವರೆಗೂ ಬಗ್ಗಿದ್ದೇನೆ. ಇನ್ನೂ ಬಗ್ಗಿ ಎಂದರೆ ಎಲ್ಲಿಗೆ ಬಗ್ಗಲಿ. ನನ್ನ ತಾಳ್ಮೆ, ಸಹನೆಗೂ ಮಿತಿ ಇದೆ. ಅಭ್ಯರ್ಥಿ ವಿಷಯದಲ್ಲಿ ಕಾರ್ಯಕರ್ತರ ಭಾವನೆಗಳಿಗೆ ವಿರುದ್ಧವಾಗಿ ನಿರ್ಧಾರ ಕೈಗೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಕೇಂದ್ರ ಸಚಿವರು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್.ಡಿ. ಕುಮಾರಸ್ವಾಮಿ #H D Kumaraswamy ಅವರು ನೇರ ಮಾತುಗಳಲ್ಲಿ ಹೇಳಿದರು.

ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಕಾರ್ಯಕರ್ತರು ಮುಖಂಡರ ಸಭೆಯಲ್ಲಿ ಮಾತನಾಡಿದರು ಕೇಂದ್ರ ಸಚಿವರು.
ನನಗೆ ಭಯವೇ ಇಲ್ಲ

ಈ ರಾಜ್ಯದಲ್ಲಿ ನನ್ನಷ್ಟು ಉಪ ಚುನಾವಣೆಗಳನ್ನು #By-Election ಎದುರಿಸಿದ, ಯಶಸ್ವಿಯಾಗಿ ನಿಭಾಯಿಸಿದ ವ್ಯಕ್ತಿ ಇನ್ನೊಬ್ಬರಿಲ್ಲ, ಎಂತೆಂತಹ ಚುನಾವಣೆಗಳನ್ನು, ಅಗ್ನಿಪರೀಕ್ಷೆಗಳನ್ನು ಎದುರಿಸಿದ್ದೇನೆ. ಚನ್ನಪಟ್ಟಣ ಚುನಾವಣೆ ಎದುರಿಸುವುದಕ್ಕೆ ನನಗೆ ಭಯವೇ..? ಸಾಧ್ಯವೇ ಇಲ್ಲ ಎಂದು ಕೇಂದ್ರ ಸಚಿವರು ಗುಡುಗಿದರು.

ನಿಮ್ಮಂತ ಕಾರ್ಯಕರ್ತರು ಜೊತೆಯಲ್ಲಿ ಇರಬೇಕಾದರೆ ನಾವು ಹೆದುರುತ್ತೇವೆಯೇ? ನೆಲದವರಿಗೆ ಬಗ್ಗಿದ್ದೇನೆ, ಜೆಡಿಎಸ್ ಮುಗಿಸಲು ಅನೇಕರು ನಮ್ಮಿಂದಲೇ ಬೆಳೆದವರು ಎಂತೆತ ಮಾತಾಡಿದ್ದಾರೆ.
ಮೋದಿ, ಶಾ ಸಂಬಂಧ ಹಾಳು ಮಾಡಿಕೊಳ್ಳಲಾರೆ

ನಾನು ಬಗ್ಗಿರುವುದು ಅಧಿಕಾರಕ್ಕಾಗಿ ಅಲ್ಲಾ. ವೈಯಕ್ತಿಕವಾಗಿ ನಾನು ಮಾಡದಿರುವ ತಪ್ಪಿಗೆ ತಲೆಕೊಟ್ಟಿದ್ದೇನೆ. ಈ ದೇಶದಲ್ಲಿ ಕಾಂಗ್ರೆಸ್ ಪಕ್ಷವನ್ನು ಮೂಲೋತ್ಪಾಟನೆ ಮಾಡಬೇಕು ಎನ್ನುವ ಪ್ರಧಾನಿ ಮೋದಿ ಸಂಕಲ್ಪಕ್ಕೆ ಹೆಗಲಾಗಿ ನಿಂತಿದ್ದೇನೆ ಎಂದು ಅವರು ಹೇಳಿದರು.

Also read: ಗುಡ್ ನ್ಯೂಸ್ | ರಾಯಚೂರು ವಿಮಾನ ನಿಲ್ದಾಣಕ್ಕೆ ಕೇಂದ್ರ ಅನುಮತಿ: ಸಚಿವ ಭೋಸರಾಜು

ನಾಲ್ಕು ತಿಂಗಳಾಯಿತು ನಾನು ಮಂತ್ರಿಯಾಗಿ. ಆರೋಗ್ಯ ಹಾಳು ಮಾಡಿಕೊಂಡು ಏತಕ್ಕಾಗಿ ಇಷ್ಟೆಲ್ಲಾ ಮಾಡಬೇಕು. ನನ್ನಿಂದ ಜನರಿಗೆ ಅಲ್ಪಸ್ವಲ್ಪವಾದರೂ ಸಹಾಯ ಆಗುತ್ತದೆಯೇ ಎಂದು ಒಡ್ಡಾಡುತ್ತಿದ್ದೇನೆ. ಎನ್ ಡಿಎ ಮೈತ್ರಿ ಭದ್ರವಾಗಿದೆ. ಪ್ರಧಾನಿ ಮೋದಿ ಅವರು ದೇವೇಗೌಡರಿಗೆ ಕೊಡುವ ಗೌರವವನ್ನು ಯಾರಿಗೂ ಕೊಡಲ್ಲ. ಅವರಿಬ್ಬರ ನಡುವಿನ ಗೌರವಭಾವ ಎಂತದ್ದು ಎನ್ನುವುದನ್ನು ನಾನು ನೋಡಿದ್ದೇನೆ. ಆ ಸಂಬಂಧಕ್ಕೆ ಚ್ಯುತಿ ಬರಬಾರದು. ಅದಕ್ಕಾಗಿ ಬಗ್ಗಿದ್ದೇನೆ, ಇನ್ನೂ ಬಗ್ಗಿ ಎಂದರೆ ನನ್ನಿಂದ ಸಾಧ್ಯವಿಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದರು.

http://kalpa.news/wp-content/uploads/2024/04/VID-20240426-WA0008.mp4

ಜೆಡಿಎಸ್ ನಿಂದಲೇ ಟಿಕೆಟ್ ಕೊಡಿ ಎಂದಿದ್ದರು ನಡ್ಡಾ

ನವದೆಹಲಿಯಲ್ಲಿ ಭೇಟಿಯಾಗಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ಅವರಿಗೆ (ಯೋಗೇಶ್ವರ್) ರಾಜೀನಾಮೆ ಕೊಟ್ಟು ಜೆಡಿಎಸ್ ನಿಂದ ಚುನಾವಣೆಗೆ ನಿಲ್ಲುವುದಕ್ಕೆ ಹೇಳುತ್ತೇವೆ ಎಂದು ಹೇಳಿದ್ದರು. ನಾನು ಈ ಸಂಬಂಧ ಉಳಿಯಬೇಕು, ಒಂದು ಸ್ಥಾನ ಮುಖ್ಯವಲ್ಲ, ಎನ್ ಡಿಎ ಮೈತ್ರಿ ಗೆಲ್ಲಬೇಕು ಎಂದು ಹೇಳುತ್ತಲೇ ಇದ್ದೇನೆ. ಮೋದಿ, ಅಮಿತ್ ಶಾ, ನಡ್ಡಾ ಅವರಂತಹ ನಾಯಕರ ಜತೆ ಸಂಬಂಧ ಕಡಿದುಕೊಳ್ಳಬೇಕಾ? ಎಂದು ಅವರು ಕಿಡಿಕಾರಿದರು.

ದೆಹಲಿಯ ಬಿಜೆಪಿ ನಾಯಕರು ಜೆಡಿಎಸ್ ಪಕ್ಷಕ್ಕೆ ಬಹಳ ಗೌರವ ಕೊಟ್ಟಿದ್ದಾರೆ. ನನಗೆ ಕೆಲಸ ಮಾಡಲು ಮುಕ್ತ ಅವಕಾಶ ನೀಡಿದ್ದಾರೆ. ಏನೇ ಮನವಿ ಮಾಡಿದರೂ ತಕ್ಷಣ ಸ್ಪಂದಿಸುತ್ತಿದ್ದಾರೆ. ನಿಮ್ಮ ಭಾವನೆಗಳಿಗೆ ಧಕ್ಕೆ ಆಗದಂತೆ ನಿರ್ಧಾರ ಮಾಡುತ್ತೇನೆ. ನಿಮ್ಮ ಮಾತಿಗೆ ಗೌರವ ನೀಡುತ್ತೇನೆ. ಕಾರ್ಯಕರ್ತರು ಒಟ್ಟಾಗಿರಿ, ಯಾರಿಗೂ ತಲೆಬಾಗಬೇಕಿಲ್ಲ. ಗೌರವಕ್ಕೆ ತಲೆಬಾಗೊಣ,‌ ಇನ್ನು ಮೂರು ದಿನ‌ ಸಮಯ ಇದೆ. ನನ್ನ ಕಾರ್ಯಕರ್ತರ ಭಾವನೆಯೇ ಅಂತಿಮ. ಸಮಯ ಕೊಡಿ ಎಂದು ಕುಮಾರಸ್ವಾಮಿ ಅವರು ಕಾರ್ಯಕರ್ತರನ್ನು ಮನವಿ ಮಾಡಿಕೊಂಡರು.

ಕಾಂಗ್ರೆಸ್ ಪಕ್ಷದವರು ಕುತಂತ್ರ ಮಾಡಿ ನಮ್ಮ ಪಕ್ಷವನ್ನು ಪಾತಾಳಕ್ಕೆ ತುಳಿದಿದ್ದಾರೆ. ಅವರು ತುಳಿದಷ್ಟೂ ನಾವು ಪ್ರಬಲವಾಗಿ ಎದ್ದು ಬಂದಿದ್ದೇವೆ. ಲೋಕಸಭೆ ಚುನಾವಣೆಗೆ ಮೊದಲು ಜೆಡಿಎಸ್ ಮುಗಿದೇ ಹೋಯಿತು ಎಂದು ಜಾಗಟೆ ಹೊಡೆಯುತ್ತಿದ್ದರು. ಈಗ ಇದೇ ಕುಮಾರಸ್ವಾಮಿ ಏನು ಎನ್ನುವುದು ಅವರಿಗೆ ಅರ್ಥವಾಗಿದೆ. ಇಂಥ ಕಾಂಗ್ರೆಸ್ ನವರಿಗೆ ನಾನು ಹೆದರಲ್ಲ. ಚಿನ್ನದಂತಹ ಕಾರ್ಯಕರ್ತರು ಇದ್ದೀರಿ. ಧೈರ್ಯವಾಗಿ ಚುನಾವಣೆ ಎದುರಿಸೋಣ. ಇದೊಂದು ಅಗ್ನಿಪರೀಕ್ಷೆ ನಿಜ, ಹಾಗಂತ ಎದೆಗುಂದಬೇಕಿಲ್ಲ ಎಂದು ಕಾರ್ಯಕರ್ತರಿಗೆ ಮನವಿ ಮಾಡಿದರು ಕೇಂದ್ರ ಸಚಿವರು.

ಕಾರ್ಯಕರ್ತರ ಆಗ್ರಹಕ್ಕೆ ಮಣಿದು ಭಾಷಣ ಮೊಟಕುಗೊಳಿಸಿದ HDK

ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರಿಗೆ ಟಿಕೆಟ್ ಕೊಡಬೇಕು, ಯಾವುದೇ ಕಾರಣಕ್ಕೂ ಯೋಗೇಶ್ವರ್ ಅವರಿಗೆ ಕೊಡಬಾರದು ಎಂದು ಚನ್ನಪಟ್ಟಣ ಕಾರ್ಯಕರ್ತರು ಗದ್ದಲ ಎಬ್ಬಿಸಿದರು. ನಿಖಿಲ್ ಕುಮಾರಸ್ವಾಮಿ ಅವರು ಭಾಷಣ ಮಾಡುವಾಗಲೂ ಪದೇಪದೆ ಅಡ್ಡಿಪಡಿಸಿ, ನಿಖಿಲ್ ಅವರ ಹೆಸರನ್ನು ಘೋಷಣೆ ಮಾಡುವಂತೆ ಒತ್ತಾಯಿಸಿದರು.

ನಮ್ಮನ್ನು ಯೋಗೇಶ್ವರ್ ಹಿಂಸಿಸಿದ್ದಾರೆ. ನೀವು ಶಾಸಕರಾಗಿದ್ದಾಗಲೇ ನಮಗೆ ಕೊಡಬಾರದ ಕಾಟ ಕೊಟ್ಟರು. ಆ ವ್ಯಕ್ತಿಯೇ ಶಾಸಕರಾಗಿದ್ದಾಗ ಜೆಡಿಎಸ್ ಕಾರ್ಯಕರ್ತರು ಪ್ರತಿದಿನವೂ ಪೊಲೀಸ್ ಠಾಣೆಗೆ ಅಲೆಯಬೇಕಾಗಿತ್ತು. ಒಂದು ವೇಳೆ ನೀವು ನಿಖಿಲ್ ಅವರನ್ನು ಬಿಟ್ಟು ಯೋಗೇಶ್ವರ್ ಗೆ ಮಣೆ ಹಾಕಿದರೆ ನಮ್ಮ ಆಕ್ರೋಶವನ್ನು ಎದುರಿಸಬೇಕಾಗುತ್ತದೆ ಎಂದು ಹಠ ಹಿಡಿದರು ಕಾರ್ಯಕರ್ತರು.

ಕಾರ್ಯಕರ್ತರ ಕೂಗಾಟ, ಆಕ್ರೋಶದ ಕಾರಣದಿಂದ ಕುಮಾರಸ್ವಾಮಿ ಅವರು ಭಾಷಣ ಮುಂದುವರಿಸಲು ಆಗಲಿಲ್ಲ. ಮೊದಲು ನಿಖಿಲ್ ಅವರ ಹೆಸರು ಘೋಷಣೆ ಮಾಡಿ, ಆಮೇಲೆ ಬೇಕಾದರೆ ನಿಮ್ಮ ಭಾಷಣ ಕೇಳುತ್ತೇವೆ ಎಂದರು. ಕೊನೆಗೆ, ನನ್ನ ಆರೋಗ್ಯ ಸರಿ ಇಲ್ಲ. ಮಾತನಾಡಲು ಅವಕಾಶ ಕೊಡಿ ಎಂದರೂ ಕಾರ್ಯಕರ್ತರು ಕೇಳಲಿಲ್ಲ. ಕೊನೆಗೂ ಗದ್ದಲದಲ್ಲಿಯೇ ಕೇಂದ್ರ ಸಚಿವರು ಭಾಷಣ ಮೊಟಕು ಮಾಡಿದರು.

ಮಾಜಿ ಪ್ರಧಾನಿಗಳು, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ.ದೇವೇಗೌಡರು, ಶಾಸಕಾಂಗ ಪಕ್ಷದ ನಾಯಕರಾದ ಸಿ.ಬಿ.ಸುರೇಶ್ ಬಾಬು, ಮಾಜಿ ಸಚಿವರಾದ ಸಾ ರಾ ಮಹೇಶ್, ವೆಂಕಟರಾವ್ ನಾಡಗೌಡ, ಶಾಸಕ ಶರಣು ಗೌಡ ಕಂದಕೂರ, ವಿಧಾನ ಪರಿಷತ್ ಸದಸ್ಯ ಮಂಜೇಗೌಡ, ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ, ಚನ್ನಪಟ್ಟಣ ತಾಲೂಕು ಅಧ್ಯಕ್ಷ ಜಯಮುತ್ತು, ಹಾಪಕಾಮ್ಸ್ ದೇವರಾಜು, ಹಿರಿಯ ಮುಖಂಡ ಪ್ರಸನ್ನ, ಜಯರಾಂ ಮುಂತಾದವರು ವೇದಿಕೆಯ ಮೇಲಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      

Tags: BangaloreBy ElectionH D KumaraswamyKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_Kannadaಉಪ ಚುನಾವಣೆಬೆಂಗಳೂರುಹೆಚ್.ಡಿ. ಕುಮಾರಸ್ವಾಮಿ
Share196Tweet123Send
Previous Post

ಗುಡ್ ನ್ಯೂಸ್ | ರಾಯಚೂರು ವಿಮಾನ ನಿಲ್ದಾಣಕ್ಕೆ ಕೇಂದ್ರ ಅನುಮತಿ: ಸಚಿವ ಭೋಸರಾಜು

Next Post

ಪಕ್ಷದ ಸಿದ್ಧಾಂತ, ಸಂವಿಧಾನದ ಮೌಲ್ಯ ಒಪ್ಪಿ ಬರುವ ಎಲ್ಲರಿಗೂ ಕಾಂಗ್ರೆಸ್ಸಿಗೆ ಸ್ವಾಗತ: ಸಿಎಂ ಸಿದ್ಧರಾಮಯ್ಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ರಾಮೇಶ್ವರಂ ಕೆಫೆ-ಮಂಗಳೂರು ಕುಕ್ಕರ್ ಬ್ಲಾಸ್ಟ್’ಗೆ ಸಾಮ್ಯತೆ? ಸಿದ್ದರಾಮಯ್ಯ ಮಹತ್ವದ ಹೇಳಿಕೆ

ಪಕ್ಷದ ಸಿದ್ಧಾಂತ, ಸಂವಿಧಾನದ ಮೌಲ್ಯ ಒಪ್ಪಿ ಬರುವ ಎಲ್ಲರಿಗೂ ಕಾಂಗ್ರೆಸ್ಸಿಗೆ ಸ್ವಾಗತ: ಸಿಎಂ ಸಿದ್ಧರಾಮಯ್ಯ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
Record Budget: Chief Minister Must Fulfill Hometown Demands, Urges Dr. Shushrutha Gowda

Record Budget: Chief Minister Must Fulfill Hometown Demands, Urges Dr. Shushrutha Gowda

March 2, 2026
ಸಿಎಂ ಸಿದ್ಧರಾಮಯ್ಯ ದಾಖಲೆಯ ಬಜೆಟ್ | ತವರು ಜಿಲ್ಲೆಯ ಬೇಡಿಕೆ ಈಡೇರಿಸಲಿ: ಡಾ. ಸುಶ್ರುತಗೌಡ ಆಗ್ರಹ

ಸಿಎಂ ಸಿದ್ಧರಾಮಯ್ಯ ದಾಖಲೆಯ ಬಜೆಟ್ | ತವರು ಜಿಲ್ಲೆಯ ಬೇಡಿಕೆ ಈಡೇರಿಸಲಿ: ಡಾ. ಸುಶ್ರುತಗೌಡ ಆಗ್ರಹ

March 2, 2026
ಮಧ್ಯಪ್ರಾಚ್ಯದ ಉದ್ವಿಗ್ನತೆ | ಭಾರತದಲ್ಲಿ ಹಿಂಸಾಚಾರದ ಸಾಧ್ಯತೆ | ಎಲ್ಲ ರಾಜ್ಯಗಳಿಗೆ ಕೇಂದ್ರ ಎಚ್ಚರಿಕೆ ಪತ್ರ

ಮಧ್ಯಪ್ರಾಚ್ಯದ ಉದ್ವಿಗ್ನತೆ | ಭಾರತದಲ್ಲಿ ಹಿಂಸಾಚಾರದ ಸಾಧ್ಯತೆ | ಎಲ್ಲ ರಾಜ್ಯಗಳಿಗೆ ಕೇಂದ್ರ ಎಚ್ಚರಿಕೆ ಪತ್ರ

March 2, 2026
ಮಾರಿಹಬ್ಬದ ಪ್ರಯುಕ್ತ ವಿಶೇಷ ರೈಲು ಸಂಚಾರ | ಸಂಸದ ರಾಘವೇಂದ್ರರವರಿಗೆ ಅಭಿನಂದನೆ

ಮಾರಿಹಬ್ಬದ ಪ್ರಯುಕ್ತ ವಿಶೇಷ ರೈಲು ಸಂಚಾರ | ಸಂಸದ ರಾಘವೇಂದ್ರರವರಿಗೆ ಅಭಿನಂದನೆ

March 2, 2026
Hotel Management Students Participate in Tree Census

Hotel Management Students Participate in Tree Census

March 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL