ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಡ್ರಗ್ಸ್ ಕೇಸ್ ನಲ್ಲಿ ಸಿಲುಕಿದ್ದ ಸ್ಯಾಂಡಲ್ ವುಡ್ ನಟಿ ರಾಗಿಣಿ ದ್ವಿವೇದಿ #Ragini Dwivedi ಮೇಲಿನ ಪ್ರಕರಣ ಸಾಕ್ಷ್ಯಾಧಾರ ಕೊರತೆಯಿಂದ ಖುಲಾಸೆಗೊಂಡಿದೆ. ಹಾಗೂ ನಿರಪರಾಧಿ ಎಂದು ಹೈಕೋರ್ಟ್ ತೀರ್ಪು ಪ್ರಕಟಿಸಿದೆ.
2020ರಲ್ಲಿ ಸ್ಯಾಂಡಲ್ ವುಡ್ ನಲ್ಲಿ #Sandalwood ಭಾರೀ ಸದ್ದು ಮಾಡಿದ್ದ ಡ್ರಗ್ಸ್ ಪ್ರಕರಣದಲ್ಲಿ #Drug Case ನಟಿ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿ ಇಬ್ಬರನ್ನೂ ಬಂಧಿಸಲಾಗಿತ್ತು. ಇಬ್ಬರೂ ನಟಿಯರು ಪರಪ್ಪನ ಅಗ್ರಹಾರದಲ್ಲಿ ಕೆಲವು ದಿನ ಕಳೆದಿದ್ದರು. ಇದಾದ ಬಳಿಕ ಜಾಮೀನು ಪಡೆದು ಹೊರಬಂದಿದ್ದರು. ಆದರೂ ಈ ಪ್ರಕರಣ ರಾಗಿಣಿ ವೃತ್ತಿ ಜೀವನಕ್ಕೂ ಸಾಕಷ್ಟು ಹೊಡೆತ ನೀಡಿತ್ತು. ಇದೀಗ ನಟಿಯ ವಿರುದ್ಧ ಯಾವುದೇ ಸಾಕ್ಷ್ಯಾಧಾರ ಸಿಗದ ಹಿನ್ನಲೆಯಲ್ಲಿ ನಿರಪರಾಧಿ ಎಂದು ಹೈಕೋರ್ಟ್ ಖುಲಾಸೆಗೊಳಿಸಿದೆ.
Also read: ಕರ್ತವ್ಯನಿರತರಾಗಿದ್ದ ಬಾಗಲಕೋಟೆ ಯೋಧ ಹೃದಯಾಘಾತದಿಂದ ಸಾವು
ಇದರೊಂದಿಗೆ ಅವರ ವೃತ್ತಿ ಜೀವನಕ್ಕೆ ಎದುರಾಗಿದ್ದ ದೊಡ್ಡ ಕಳಂಕ ತೊಳೆದು ಹೋದಂತಾಗಿದೆ. ಡ್ರಗ್ಸ್ ಮಾಫಿಯಾದೊಂದಿಗೆ ನಂಟು ಹೊಂದಿದ ಆರೋಪ ರಾಗಿಣಿ ಮೇಲೆ ಇತ್ತು. ಪಾರ್ಟಿ ಆಯೋಜಿಸಿ ಡ್ರಗ್ಸ್ ಬಳಕೆಗೂ ಅವರು ಅವಕಾಶ ಮಾಡಿಕೊಟ್ಟಿದ್ದರು ಎನ್ನಲಾಗಿತ್ತು. ಈ ಕಾರಣಕ್ಕೆ ಎನ್‌ಡಿಪಿಎಸ್ ಆ್ಯಕ್ಟ್ ಅಡಿಯಲ್ಲಿ ಅವರ ವಿರುದ್ಧ ಕೇಸ್ ದಾಖಲಿಸಲಾಗಿತ್ತು. ಆದರೆ ಈ ಬಗ್ಗೆ ಯಾವುದೇ ಸಾಕ್ಷ್ಯಾಧಾರ ಸಿಕ್ಕಿಲ್ಲ ಎನ್ನಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post