No Result
View All Result
26 ವರ್ಷದ ಯುವಕನಿಗೆ ಮರುಜೀವ ಕೊಟ್ಟ ಮೆಡಿಕವರ್ ಆಸ್ಪತ್ರೆ | ಏನಾಗಿತ್ತು ಯುವಕನಿಗೆ?
English Articles

Critical Condition Turned Around with Timely Medical Intervention

by ಕಲ್ಪ ನ್ಯೂಸ್
March 27, 2026
0

Kalpa Media House  |  Bengaluru(WhiteFiled)  | A 26-year-old man from West Bengal, who had been suffering from a serious condition...

Read moreDetails
Yogada Satsang Society brings out Kannada version on Kriya Yoga today

Yogada Satsang Society brings out Kannada version on Kriya Yoga today

March 25, 2026
Sagara Engulfed In The Ocean of Music

Sagara Engulfed In The Ocean of Music

March 23, 2026
MAHE Introduces ‘MAGIC’ to Power AI-Driven Academic and Administrative Transformation

MAHE Introduces ‘MAGIC’ to Power AI-Driven Academic and Administrative Transformation

March 23, 2026
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

March 18, 2026
  • Advertise With Us
  • Grievances
  • About Us
  • Contact Us
Friday, March 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಪ್ರತಿಷ್ಠಿತ ಕಂಪನಿಗಳಿಂದ ಬಾಕಿಯಿರುವ ಸಾವಿರಾರು ರೂ. ಹಣ ವಸೂಲಿಗೆ ವಿಶೇಷ ತಂಡ

ಹಣ ವಸೂಲಿಗೆ ವಿಶೇಷ ತಂಡ, ಕಾನೂನು ಕೋಶ ರಚನೆ: ಈಶ್ವರ ಖಂಡ್ರೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 11, 2024
in ಬೆಂಗಳೂರು ನಗರ
0
ಕಸ್ತೂರಿರಂಗನ್ ವರದಿ ಜಾರಿಗೆ ಸರ್ಕಾರ ಬದ್ಧ ಎಂದು ಹೇಳಿಲ್ಲ: ಈಶ್ವರ ಖಂಡ್ರೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ರಾಜ್ಯದ ಕೊಡಗು, ಚಾಮರಾಜನಗರ ಮತ್ತಿತರ ಜಿಲ್ಲೆಗಳಲ್ಲಿ ಅರಣ್ಯ ಭೂಮಿಯನ್ನು ಸ್ವಾತಂತ್ರಪೂರ್ವದಿಂದಲೂ ಗುತ್ತಿಗೆಗೆ ಪಡೆದು ಕಾಫಿ, ಟೀ, ರಬ್ಬರ್ ಬೆಳೆಯುತ್ತಿರುವ ಪ್ರತಿಷ್ಠಿತ ಕಂಪನಿಗಳಿಂದ ಸುಮಾರು 2 ಸಾವಿರ ಕೋಟಿ ರೂ. ಗುತ್ತಿಗೆ ಹಣ ಮತ್ತು ಬಡ್ಡಿ ಬಾಕಿ ಬರಬೇಕಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ Minister Eshwar Khandre ತಿಳಿಸಿದ್ದಾರೆ.

ಈ ಕುರಿತಂತೆ ಮಾತನಾಡಿರುವ ಅವರು, ಅರಣ್ಯ ಇಲಾಖೆಯ ಒಳಹೊರಗನ್ನು ತಿಳಿಯಲು ಅಧ್ಯಯನ ಮಾಡಲು ಆರಂಭಿಸಿದಾಗ 2 ಸಾವಿರ ಕೋಟಿ ರೂ. ಬಾಕಿ ಇರುವುದು ಗಮನಕ್ಕೆ ಬಂದಿದ್ದು, ಇದರ ವಸೂಲಿಗೆ ಪ್ರಸ್ತುತ ಪರಿಸರ ಇಲಾಖೆಯ ಪ್ರಧಾನ ಕಾರ್ಯದರ್ಶಿ ಆಗಿರುವ ಬಿ.ಪಿ. ರವಿ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲು ತೀರ್ಮಾನಿಸಲಾಗಿದೆ. ಜೊತೆಗೆ ಈ ಸಂಬಂಧ ನ್ಯಾಯಾಲಯದಲ್ಲಿರುವ ಪ್ರಕರಣಗಳನ್ನು ಶೀಘ್ರ ಇತ್ಯರ್ಥಪಡಿಸಲು ಕಾನೂನು ಹೋರಾಟ ನಡೆಸಲು ವಿಶೇಷ ಕಾನೂನು ಕೋಶ ರಚಿಸಲಾಗುವುದು ಎಂದು ತಿಳಿಸಿದರು.
ನಮ್ಮ ರಾಜ್ಯದ ವನ ಪ್ರದೇಶದಲ್ಲಿ ಸುಮಾರು 5500 ಎಕರೆಗೂ ಹೆಚ್ಚು ಅರಣ್ಯ ಭೂಮಿಯನ್ನು ಎಕರೆಗೆ 2 ರೂ. 7. ರೂ.ನಂತೆ ಬ್ರಿಟಿಷರ ಆಡಳಿತ ಕಾಲದಲ್ಲಿ ವಿವಿಧ ಕಂಪನಿಗಳಿಗೆ ಮತ್ತು ವ್ಯಕ್ತಿಗಳಿಗೆ 99 ವರ್ಷ ದೀರ್ಘಾವಧಿ ಗುತ್ತಿಗೆ ನೀಡಲಾಗಿತ್ತು. ಕೆಲವು ಗುತ್ತಿಗೆಯನ್ನು ಸ್ವಾತಂತ್ರ್ಯಾ ನಂತರ ಅರಣ್ಯ ಸಂರಕ್ಷಣಾ ಕಾಯಿದೆ ಜಾರಿಗೆ ಮುನ್ನ ನವೀಕರಿಸಲಾಗಿದೆ ಎಂದರು.

1997ರಲ್ಲಿ ಗುತ್ತಿಗೆ ದರವನ್ನು ಹೆಕ್ಟೇರ್ ಗೆ 5 ಸಾವಿರ ರೂಪಾಯಿ ಹೆಚ್ಚಳ ಮಾಡಲಾಗಿದ್ದು, ಈ ಹೆಚ್ಚಳವನ್ನು ಪ್ರಶ್ನಿಸಿ ಮತ್ತು ಬಡ್ಡಿ ಹಣ ನೀಡುವ ವಿಚಾರದಲ್ಲಿ ಕಂಪನಿಗಳು ನ್ಯಾಯಾಲಯಕ್ಕೆ ಹೋಗಿವೆ. ದಶಕಗಳಿಂದ ಈ ಕಂಪನಿಗಳು ಗುತ್ತಿಗೆ ಹಣ ಪಾವತಿಸಿಲ್ಲ ಎಂದು ತಿಳಿಸಿದರು.

Also read: ಮಲೆನಾಡು, ಕರಾವಳಿ ಬಡ ಜೀವಗಳಿಗೆ ಬೆಲೆ ಇಲ್ವಾ: ಅನಿಲ್ ಹೊಸಕೊಪ್ಪ

ಲಭ್ಯ ಮಾಹಿತಿಯ ರೀತ್ಯ ವೀರಾಜಪೇಟೆಯ ಮರ್ಕೆರಾ ರಬ್ಬರ್ ಲಿ 1074 ಎಕರೆ ಭೂಮಿ ಗುತ್ತಿಗೆ ಪಡೆದಿದ್ದು 2015ರ ಮಾರ್ಚ್’ವರೆಗೆ ಬಡ್ಡಿ ಸಹಿತ 454 ಕೋಟಿ ರೂಪಾಯಿ ಪಾವತಿಸಬೇಕಿದ್ದರೆ, ಥಾಮ್ಸನ್ ರಬ್ಬರ್ ಇಂಡಿಯಾ ಲಿಮಿಟೆಡ್ 625 ಎಕರೆ ಗುತ್ತಿಗೆ ಪಡೆದಿದ್ದು 91 ಕೋಟಿ 29 ಲಕ್ಷ ರೂಪಾಯಿ ಪಾವತಿಸಬೇಕಿದೆ, ನಿಲಂಬೂರು ರಬ್ಬರ್ ಕಂಪನಿ ಲಿಮಿಟೆಡ್ 713 ಎಕರೆ ಗುತ್ತಿಗೆ ಪಡೆದಿದ್ದು 130 ಕೋಟಿ 22 ಲಕ್ಷ ರೂಪಾಯಿ ಪಾವತಿಸಬೇಕು ಹಾಗೂ ಪೋರ್ಟ್ ಲ್ಯಾಂಡ್ ರಬ್ಬರ್ ಎಸ್ಟೇಟ್ ಲಿಮಿಟೆಡ್ 1288 ಎಕರೆ ಗುತ್ತಿಗೆ ಪಡೆದಿದ್ದು 2022 ರವರೆಗೆ 536 ಕೋಟಿ 66 ಲಕ್ಷ ರೂಪಾಯಿ ಬಾಕಿ ಉಳಿಸಿಕೊಂಡಿದೆ ಎಂದು ವಿವರಿಸಿದರು.
Kalahamsa Infotech private limitedಇದರ ಜೊತೆಗೆ ಗ್ಲೆನ್ ಲಾರೆನ್ ಪ್ಲಾಂಟೇಷನ್ ಪ್ರೈ ಮತ್ತು ಟಾಟಾ ಕಾಫಿ ಲಿಮಿಟೆಡ್ ಸಂಸ್ಥೆ ಸೇರಿ 943 ಎಕರೆ ಅರಣ್ಯ ಭೂಮಿ ಗುತ್ತಿಗೆ ಪಡೆದಿದ್ದು ಗುತ್ತಿಗೆ ಹಣ, ಬಡ್ಡಿ ಮತ್ತು ದಂಡ ಮೊತ್ತ ಸೇರಿ 524 ಕೋಟಿ ರೂಪಾಯಿ ಬಾಕಿ ಪಾವತಿಸಬೇಕಿದೆ. ಚಾಮರಾಜನಗರದ ಹೊನ್ನಮಟ್ಟಿ ನೀಲಗಿರಿ ಪ್ಲಾಂಟೇಷನ್ ಲಿಮಿಟೆಡ್ ಮತ್ತಿತರರಿಂದ 2015ರವರೆಗೆ 25 ಕೋಟಿ ರೂಪಾಯಿ 36 ಲಕ್ಷ ರೂಪಾಯಿ ಬರಬೇಕಿದೆ. ಈ ಎಲ್ಲ ಕಂಪನಿಗಳು ಪಾವತಿಸಬೇಕಿರುವ ಗುತ್ತಿಗೆಹಣ, ಬಡ್ಡಿ, ಚಕ್ರಬಡ್ಡಿ, ದಂಡ ಮೊತ್ತ ಸೇರಿದರೆ ಒಟ್ಟು 2000 ಕೋಟಿ ರೂಪಾಯಿಗೂ ಹೆಚ್ಚು ಹಣ ಅರಣ್ಯ ಇಲಾಖೆಗೆ ಬರಬೇಕು. ಕೊಡಗು ಜಿಲ್ಲೆಯೊಂದರಲ್ಲೇ ಇಲಾಖೆಗೆ ಗುತ್ತಿಗೆ ಮೊತ್ತ 1601 ಕೋಟಿ ರೂಪಾಯಿ ಬರಬೇಕು ಎಂದು ಆಡಿಟ್ ವರದಿ ತಿಳಿಸಿದೆ ಎಂಬ ಅಂಕಿ ಅಂಶ ನೀಡಿದರು.

ಇದರಲ್ಲಿ ಥಾಮ್ಸನ್ ರಬ್ಬರ್ ಅರಣ್ಯ ಗುತ್ತಿಗೆ ಭೂಮಿಯನ್ನೇ ಸಾಗು ಜಮೀನು ಎಂದು ಬ್ಯಾಂಕ್’ನಲ್ಲಿ ಅಡಮಾನ ಇಟ್ಟು ಸಾಲ ಪಡೆದಿದ್ದು, ಸಾಲ ಕಟ್ಟದ ಕಾರಣ ಬ್ಯಾಂಕ್ ನವರು ಅದನ್ನು ಹರಾಜು ಹಾಕಿದ್ದಾರೆ ಎಂಬ ಅಂಶವೂ ಬೆಳೆಕಿಗೆ ಬಂದಿದೆ ಎಂದರು.

ಗುತ್ತಿಗೆ ಅವಧಿ ಮುಗಿದ ಅರಣ್ಯಭೂಮಿ ಹಿಂಪಡೆಯಲು ಮತ್ತು ಕಂಪನಿಗಳಿಂದ ಬರಬೇಕಾದ ಬಾಕಿ ವಸೂಲಿ ಮಾಡಲು ಸರ್ಕಾರ ಎಲ್ಲ ಅಗತ್ಯ ಕ್ರಮ ಕೈಗೊಳ್ಳುವುದು ಎಂದು ತಿಳಿಸಿದರು.

(ವರದಿ: ಡಿ.ಎಲ್. ಹರೀಶ್)   

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
  

Tags: BangaloreKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews Kannadaಬೆಂಗಳೂರು
Share202Tweet123Send
Previous Post

ಮಲೆನಾಡು, ಕರಾವಳಿ ಬಡ ಜೀವಗಳಿಗೆ ಬೆಲೆ ಇಲ್ವಾ: ಅನಿಲ್ ಹೊಸಕೊಪ್ಪ

Next Post

ಬಳ್ಳಾರಿ, ಕೊಪ್ಪಳ | ಕರ್ನಾಟಕ ಸ್ಟೇಟ್ ಸೇಫ್ಟಿ ಇನ್ಸ್ಟಿಟ್ಯೂಟ್’ನಿಂದ ಸುರಕ್ಷತಾ ಸೆಮಿನಾರ್ ಸಂಪನ್ನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಬಳ್ಳಾರಿ, ಕೊಪ್ಪಳ | ಕರ್ನಾಟಕ ಸ್ಟೇಟ್ ಸೇಫ್ಟಿ ಇನ್ಸ್ಟಿಟ್ಯೂಟ್’ನಿಂದ ಸುರಕ್ಷತಾ ಸೆಮಿನಾರ್ ಸಂಪನ್ನ

ಬಳ್ಳಾರಿ, ಕೊಪ್ಪಳ | ಕರ್ನಾಟಕ ಸ್ಟೇಟ್ ಸೇಫ್ಟಿ ಇನ್ಸ್ಟಿಟ್ಯೂಟ್'ನಿಂದ ಸುರಕ್ಷತಾ ಸೆಮಿನಾರ್ ಸಂಪನ್ನ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಉದ್ಯೋಗಖಾತ್ರಿ ಯೋಜನೆ ರದ್ದು | ಗ್ರಾಪಂ ಮಟ್ಟದಿಂದ ಕಾಂಗ್ರೆಸ್ ಹೋರಾಟ | ಸಚಿವ ಮಧುಬಂಗಾರಪ್ಪ

SSLC ಪರೀಕ್ಷೆ ಅಂತಿಮ ಅಂಕ ಕುರಿತು ಶಿಕ್ಷಣ ಸಚಿವರ ಬಿಗ್ ಸ್ಟೇಟ್ಮೆಂಟ್

March 27, 2026
ಶೋಚನೀಯ ಸ್ಥಿತಿಯಲ್ಲಿ ಪಶ್ಚಿಮಘಟ್ಟದ ಪ್ರವಾಸಿತಾಣಗಳು: ಡಿ.ಎಸ್. ಅರುಣ್ ಆಕ್ರೋಶ

ಮರಳು ಮಾಫಿಯಾ ದಬ್ಬಾಳಿಕೆ, ಜನರಿಗೆ ಸಂಕಷ್ಟ: ತಕ್ಷಣ ಕ್ರಮಕ್ಕೆ ಡಿ.ಎಸ್. ಅರುಣ್ ಒತ್ತಾಯ

March 27, 2026
ಮುಸ್ಲಿಂರ ಪರವಾಗಿ ಮಾತನಾಡಿದರೆ ಕೋಮುವಾದವಲ್ಲವೇ? ಮಾಜಿ ಡಿಸಿಎಂ ಈಶ್ವರಪ್ಪ ಪ್ರಶ್ನೆ

ಮುಸ್ಲಿಂರ ಪರವಾಗಿ ಮಾತನಾಡಿದರೆ ಕೋಮುವಾದವಲ್ಲವೇ? ಮಾಜಿ ಡಿಸಿಎಂ ಈಶ್ವರಪ್ಪ ಪ್ರಶ್ನೆ

March 27, 2026
2025-26 ನೇಯ ಸಾಲಿನ ಹವ್ಯಕ ವಿಶೇಷ ಪ್ರಶಸ್ತಿ ಪ್ರಕಟ | ಯಾರಿಗೆಲ್ಲಾ ಒಲಿಯಿತು ಗೌರವ?

2025-26 ನೇಯ ಸಾಲಿನ ಹವ್ಯಕ ವಿಶೇಷ ಪ್ರಶಸ್ತಿ ಪ್ರಕಟ | ಯಾರಿಗೆಲ್ಲಾ ಒಲಿಯಿತು ಗೌರವ?

March 27, 2026
ಮಾರ್ಚ್ 28 – ಎಪ್ರಿಲ್ 3 | ಬೆಂಗಳೂರಿನ ಕೆಂಗೇರಿ ಮಠದಲ್ಲಿ ಭಾಗವತ ಪ್ರವಚನ

ಮಾರ್ಚ್ 28 – ಎಪ್ರಿಲ್ 3 | ಬೆಂಗಳೂರಿನ ಕೆಂಗೇರಿ ಮಠದಲ್ಲಿ ಭಾಗವತ ಪ್ರವಚನ

March 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL