ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ದುಷ್ಮನ್ ಕಹಾ ಹೈ ಅಂದ್ರೆ, ಕಾಂಗ್ರೆಸ್ ಪಾರ್ಟಿ ತುಂಬಾ ಹೈ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ #CM Siddaramaiah ವಿರುದ್ಧ ವಿಪಕ್ಷ ನಾಯಕ ಆರ್. ಅಶೋಕ್ #R Ashok ವ್ಯಂಗ್ಯವಾಡಿದ್ದಾರೆ.
ಈ ಬಗ್ಗೆ ಪತ್ರಿಕೆಯೊಂದರ ವರದಿಯನ್ನು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿರುವ ಅವರು, ಸಿಎಂ ಸಿದ್ದರಾಮಯ್ಯನವರೇ, ನಿಮ್ಮ ಬೆನ್ನಿಗೆ ನಿಲ್ಲುತ್ತೇವೆ ಎನ್ನುತ್ತಲೇ ಬೆನ್ನಿಗೆ ಚೂರಿ ಹಾಕುವ ಹಿತಶತ್ರುಗಳು ನಿಮ್ಮ ಪಕ್ಷದಲ್ಲೇ ಬಹಳ ಮಂದಿ ಇದ್ದಾರೆ. ಇಡೀ ರಾಜ್ಯ ತಮ್ಮ ರಾಜೀನಾಮೆಗಾಗಿ ಕಾತುರದಿಂದ ಎದುರು ನೋಡುತ್ತಿದೆ. ಕನ್ನಡಿಗರ ತಾಳ್ಮೆ ಪರೀಕ್ಷೆ ಮಾಡಬೇಡಿ. ಆದಷ್ಟು ಬೇಗ ರಾಜೀನಾಮೆ ಕೊಟ್ಟು ಗೌರವ ಉಳಿಸಿಕೊಳ್ಳಿ ಎಂದು ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ.
Also read: ಬೆಂಗಳೂರು | ಜಯನಗರ ರಾಯರ ಮಠದಲ್ಲಿ ಮಧ್ಯಾರಾಧನೆ ವೈಭವದಲ್ಲಿ ಮಿಂದೆದ್ದ ಭಕ್ತವೃಂದ
ಸಿಎಂ ಸಿದ್ದರಾಮಯ್ಯ ನವರಿಗೆ ನಮ್ಮ ಸಂಪೂರ್ಣ ಬೆಂಬಲ ಇದೆ ಅಂತ ಬಹಿರಂಗವಾಗಿ ಹೇಳಿಕೆ ಕೊಡುತ್ತಿರುವ ಬಹುತೇಕ ಕಾಂಗ್ರೆಸ್ ನಾಯಕರು ಅಂತರಂಗದಲ್ಲಿ ಬೇರೆಯದೇ ಲೆಕ್ಕಾಚಾರ ಹಾಕುತ್ತಿದ್ದಾರೆ ಎಂದು ಹೇಳಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post