ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ನಿನ್ನೆ ಇಹಲೋಕ ತ್ಯಜಿಸಿದ ಸ್ಯಾಂಡಲ್ ವುಡ್ ಹಿರಿಯ ನಟ, ನಿರ್ದೇಶಕ, ನಿರ್ಮಾಪಕ ದ್ವಾರಕೀಶ್ #Dwarkeesh ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಸುವಂತೆ ರಾಜ್ಯ ಸರ್ಕಾರ ಆದೇಶಿಸಿದೆ.
ಈ ಕುರಿತಂತೆ ಆದೇಶ ಹೊರಡಿಸಿರುವ ರಾಜ್ಯ ಸರ್ಕಾರ, ದ್ವಾರಕೀಶ ನಿಧನಕ್ಕೆ ತೀವ್ರ ಸಂತಾಪು ಸೂಚಿಸಿದೆ. ಅಲ್ಲದೇ ಸಕಲ ಸರ್ಕಾರಿ, ಪೊಲೀಸ್ ಗೌರವಗಳೊಂಧಿಗೆ ಅಂತ್ಯಕ್ರಿಯೆ ನಡೆಸಿ ಎಂದು ಪೊಲೀಸ್ ಮಹಾನಿರ್ದೇಶಕರಿಗೆ ಅಧಿಸೂಚನೆ ಹೊರಡಿಸಲಾಗಿದೆ.
ಕೆಲವೇ ಕ್ಷಣಗಳಲ್ಲಿ ಅಂತ್ಯಕ್ರಿಯೆ ನಡೆಯಲಿದ್ದು, ಟಿಆರ್’ಮಿಲ್ ಹಿಂದೂ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಬ್ರಾಹ್ಮಣ ವಿಧಿವಿಧಾನದ ಪ್ರಕಾರ ಅಂತ್ಯಕ್ರಿಯೆ ನಡೆಯಲಿದ್ದು, ಮೊದಲಿಗೆ ಪ್ರೇತ ಸಂಸ್ಕಾರ, ಆನಂತರ ಕಿವಿಯಲ್ಲಿ ನಾರಾಯಣ ಸ್ಮರಣೆ, ಚಿತಾ ಅಗ್ನಿ ಹೋಮದ ನಂತರ ಚಿತಾ ಶುದ್ಧಿ, ಭೂ ಸ್ಪರ್ಶ ದಹನ ಮಾಡಿ, ಆಮೇಲೆ ಅಗ್ನಿ ದಿಗ್ಬಂಧನ ಮಾಡಲಾಗುತ್ತಿದೆ. ಕೊನೆಯಲ್ಲಿ ಹಿರಿ ಮಗನಿಂದ ಅಗ್ನಿ ಸ್ಪರ್ಶ ಮಾಡಲಾಗುತ್ತದೆ.
ಬೆಳಗ್ಗೆ ಎಂಟು ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಬೆಳಗ್ಗೆ 7 ಗಂಟೆಗೆ ಮನೆಯಲ್ಲಿ ಕಾರ್ಯಗಳು ನಡೆದಿವೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news




















