ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ನಿನ್ನೆ ನಿಧನರಾದ ಹಿರಿಯ ನಟ ದ್ವಾರಕೀಶ್ #Dwarkeesh ಅವರ ಅಂತ್ಯಕ್ರಿಯೆ ಇಂದು ನಡೆದಿದ್ದು, ಬ್ರಾಹ್ಮಣ ಸಂಪ್ರದಾಯದಂತೆ ವಿಧಿವಿಧಾನಗಳು ನೆರವೇರಿದವು.
ದ್ವಾರಕೀಶ್ ಹಿರಿಯ ಪುತ್ರ ಸಂತೋಷ್ ಅವರು ದ್ವಾರಕೀಶ್ ಚಿತೆಗೆ ಸಂಪ್ರದಾಯದಂತೆ ಅಗ್ನಿಸ್ಪರ್ಶ ಮಾಡಿದರು.
ಅಂತ್ಯಸಂಸ್ಕಾರಕ್ಕೂ ಮುನ್ನ ಸಕಲ ಸರ್ಕಾರಿ ಗೌರವಗಳನ್ನು ಸಲ್ಲಿಸಲಾಯಿತು.
ಆನಂತರ, ಬ್ರಾಹ್ಮಣ ವಿಧಿವಿಧಾನದ ಪ್ರಕಾರ ಮೊದಲಿಗೆ ಪ್ರೇತ ಸಂಸ್ಕಾರ. ಆನಂತರ ಕಿವಿಯಲ್ಲಿ ನಾರಾಯಣ ಸ್ಮರಣೆ. ಚಿತಾ ಅಗ್ನಿ ಹೋಮದ ನಂತರ ಚಿತಾ ಶುದ್ಧಿ , ಭೂ ಸ್ಪರ್ಶ ದಹನ ಮಾಡಿ, ಆಮೇಲೆ ಅಗ್ನಿ ದಿಗ್ಬಂಧನ ಮಾಡಲಾಯಿತು.
Also read: ಯುಪಿಎಸ್‌ಸಿ ಪರೀಕ್ಷೆ ಫಲಿತಾಂಶ: ಶಿವಮೊಗ್ಗದ ಮೇಘನಾಗೆ 589ನೇ ರ‍್ಯಾಂಕ್
ನಿನ್ನೆ ಬೆಳಗ್ಗೆ ಕಾಫಿ ಕುಡಿದು ಕುಳಿತಿದ್ದ ದ್ವಾರಕೀಶ್ ಅವರು ತೀವ್ರ ಹೃದಯಾಘಾತದಿಂದ ತಮ್ಮ ಸ್ವಗೃಹದಲ್ಲಿ ಕೊನೆಯುಸಿರೆಳೆದಿದ್ದರು.
ನಿನ್ನೆಯಿಂದ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಕನ್ನಡ ಚಿತ್ರೋದ್ಯಮದ ಗಣ್ಯರು ಸಂತಾಪ ವ್ಯಕ್ತ ಪಡಿಸಿದ್ದರು.
ಪ್ರಮುಖವಾಗಿ ಪ್ರಧಾನಿ ನರೇಂದ್ರ ಮೋದಿ, #PM Narendra Modi ಸೂಪರ್ ಸ್ಟಾರ್ ರಜನಿಕಾಂತ್ #Rajnikanth ಸೇರಿದಂತೆ ವಿವಿಧ ಕ್ಷೇತ್ರದ ಗಣ್ಯರು ದ್ವಾರಕೀಶ್ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post