No Result
View All Result
ABB deepens Karnataka footprint with new investments to serve high growth emerging sectors
English Articles

ABB deepens Karnataka footprint with new investments to serve high growth emerging sectors

by ಕಲ್ಪ ನ್ಯೂಸ್
March 12, 2026
0

Kalpa Media House  |  BENGALURU | ABB, a global technology leader in electrification and automation, is expanding its manufacturing footprint...

Read moreDetails
“Rasamum Rasayanamum- Artistry meets Chemistry”

“Rasamum Rasayanamum- Artistry meets Chemistry”

March 11, 2026
ಕಾನಹಳ್ಳಿಯಲ್ಲಿ ಹಾನಗಲ್ಲಿನ ಕದಂಬ ಹೆಮ್ಮಾಡಿದೇವನ ಅವಧಿಯ ವೀರಗಲ್ಲು ಪತ್ತೆ

T20 World Cup Stars Suryakumar Yadav & Tilak Varma Make Strategic Investment in TRUZON Solar

March 11, 2026
ಸಾಂಕ್ರಾಮಿಕವಲ್ಲದ ಕಾಯಿಲೆಗಳ ಬಗ್ಗೆ ಎಚ್ಚರ ಅವಶ್ಯ : ಡಾ. ಸುಶ್ರುತ ಗೌಡ

Post-COVID Surge: Lifestyle Diseases Now Striking People in Their 40s, Warns Neurologist  Dr. Sushrutha Gowda

March 9, 2026
Yamaha Introduces XSR155 in ‘Metallic Black’ shade

Yamaha Introduces XSR155 in ‘Metallic Black’ shade

March 9, 2026
  • Advertise With Us
  • Grievances
  • About Us
  • Contact Us
Thursday, March 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಶಿಕ್ಷಣವೇ ಹವಾಮಾನ ಬದಲಾವಣೆಯನ್ನು ಎದುರಿಸಬಲ್ಲ ಪ್ರಬಲ ಸಾಧನ: ರಾಜೀವ್ ಗೌಡ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 2, 2025
in ಬೆಂಗಳೂರು ನಗರ
0
India can’t be in climate change denial mode warn experts
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಭಾರತದಲ್ಲಿ, ನಾವು ಹವಾಮಾನ ಬದಲಾವಣೆಗೆ ಸಂಬಂಧಿಸಿದ ವಿಷಯಗಳನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ. ಹವಾಮಾನ ಬದಲಾವಣೆಯ ಪರಿಣಾಮಗಳನ್ನು ತಗ್ಗಿಸಲು ಹವಾಮಾನ ಸಂಬಂಧಿತ ವಿಷಯಗಳನ್ನು ಶಿಕ್ಷಣದಲ್ಲಿ ಅಳವಡಿಸಿಕೊಳ್ಳುವುದು ಸರ್ವರಿಗೂ ಸುಸ್ಥಿರ ಭವಿಷ್ಯವನ್ನು ಭದ್ರಪಡಿಸುವ ನಿಟ್ಟಿನಲ್ಲಿ ನಾವು ಮಾಡಬಹುದಾದ ಅತ್ಯಂತ ಶಕ್ತಿಶಾಲಿ ಹೂಡಿಕೆಯಾಗಿದೆ ಎಂದು ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ)ಯ ಸಂಶೋಧನಾ ವಿಭಾಗದ ಅಧ್ಯಕ್ಷ ಹಾಗು ಮತ್ತು ಕರ್ನಾಟಕ ಯೋಜನಾ ಆಯೋಗದ ಮಾಜಿ ಅಧ್ಯಕ್ಷ ಡಾ. ರಾಜೀವ್ ಗೌಡ ಅಭಿಪ್ರಾಯಪಟ್ಟರು.

ಅವರು ಇಂದು ಬೆಂಗಳೂರು ಅಂತರರಾಷ್ಟ್ರೀಯ ಕೇಂದ್ರದಲ್ಲಿ (ಬಿಐಸಿ) ನಡೆದ ಭಾರತದ ಹವಾಮಾನ ಶಿಕ್ಷಣ ಶೃಂಗಸಭೆಯ ಉದ್ಘಾಟನಾ ಸಮಾರಂಭದಲ್ಲಿ ವೀಡಿಯೊ ಮೂಲಕ ತಮ್ಮ ಸಂದೇಶವನ್ನು ರವಾನಿಸಿದರು.
ಹವಾಮಾನ ಶಿಕ್ಷಕರ ಜಾಲ (CEN), ಸ್ಕೂಲ್‌ ಆಫ್‌ ಪಾಲಿಸಿ ಆಂಡ್‌ ಗವರ್ನೆನ್ಸ್‌, ಟಿಆರ್‌ಒಪಿ ಐಸಿಎಸ್‌ಯು/TROP ICSU (ಹವಾಮಾನ ಬದಲಾವಣೆಯ ಬಗ್ಗೆ ಶೈಕ್ಷಣಿಕ ಸಂಪನ್ಮೂಲಗಳನ್ನು ಸಂಗ್ರಹಿಸುವ ಮತ್ತು ನಿರ್ವಹಿಸುವ ಪ್ರಾಜೆಕ್ಟ್‌)ಮತ್ತು ಸಾಮಾಜಿಕ ಪರಿಣಾಮ ಸಲಹೆಗಾರ ಸಂಸ್ಥೆ ಅಸರ್‌ ವತಿಯಿಂದ ಆಯೋಜಿಸಲಾದ ಈ ಎರಡು ದಿನಗಳ ಕಾರ್ಯಕ್ರಮವು ಶಿಕ್ಷಣದ ಮೂಲಕ ಹವಾಮಾನ ಬದಲಾವಣೆಯ ಸವಾಲುಗಳನ್ನು ಎದುರಿಸಲು ಅಳವಡಿಸಿಕೊಳ್ಳಬಹುದಾದ ಒಳನೋಟಗಳು ಮತ್ತು ನೀತಿ ನಿರೂಪಣೆಗೆ ಸಂಬಂಧಿಸಿದಂತೆ ನೀಡಬಹುದಾದ ಶಿಫಾರಸ್ಸುಗಳನ್ನು ರೂಪಿಸುವ ಗುರಿಯನ್ನು ಹೊಂದಿದೆ.

ಹವಾಮಾನ ಬದಲಾವಣೆ ಕುರಿತ ಪಠ್ಯವನ್ನು ಮುಖ್ಯವಾಹಿನಿಯ ಶಾಲಾಶಿಕ್ಷಣದೊಂದಿಗೆ ಸಂಯೋಜಿಸುವತ್ತ ಕೇಂದ್ರೀಕರಿಸಿದ ಎರಡು ದಿನಗಳ ಈ ಶೃಂಗಸಭೆಯು ದೇಶಾದ್ಯಂತ 100 ಕ್ಕೂ ಹೆಚ್ಚು ಪ್ರಮುಖ ಶಿಕ್ಷಣತಜ್ಞರು, ನೀತಿ ನಿರೂಪಕರು, ಯುವ ನಾಯಕರು ಮತ್ತು ಆಸಕ್ತರನ್ನು ಒಳಗೊಂಡಿತ್ತು.
“ಹವಾಮಾನ ಶಿಕ್ಷಣವನ್ನು ಪಠ್ಯದಲ್ಲಿ ಸಂಯೋಜಿಸಲು ಇರುವ ಮಾರ್ಗವೆಂದರೆ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಸೂಚಿಸಿದಂತೆ ವಿವಿಧ ಅಧ್ಯಯನ ಕ್ಷೇತ್ರಗಳನ್ನು ಒಳಗೊಳ್ಳುವ ಅಂತರಶಿಸ್ತೀಯ ಪಠ್ಯಕ್ರಮವನ್ನು ರಚಿಸುವುದು. ಉದಾಹರಣೆಗೆ, ಹವಾಮಾನ ಬದಲಾವಣೆಯು ವಿವಿಧ ಆಯಾಮಗಳನ್ನು ಅನ್ವೇಷಿಸುವುದು ಮತ್ತು ಅದು ವಿಶ್ವದ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂಬುದನ್ನು ಪ್ರದರ್ಶಿಸುವುದು ಮತ್ತು ಇದರಿಂದ ನೈತಿಕ ಮೌಲ್ಯಗಳ ಮೇಲಾಗುವ ಪರಿಣಾಮಗಳ ಕುರಿತ ಚರ್ಚೆಗಳು ಇವುಗಳನ್ನು ಈ ಪಠ್ಯಕ್ರಮದ ಚೌಕಟ್ಟಿನಲ್ಲಿ ಸೇರಿಸಿಕೊಳ್ಳಬಹುದು. ಈ ವಿಧಾನವು ವಿದ್ಯಾರ್ಥಿಗಳು ತಮ್ಮ ತರಗತಿಯ ಕಲಿಕೆಯನ್ನು ಪ್ರಪಂಚದ ನೈಜ ಸಮಸ್ಯೆಗಳೊಂದಿಗೆ ಹೋಲಿಸಿ ಅಭ್ಯಸಿಸಲು ಸಹಾಯ ಮಾಡುತ್ತದೆ, ಹವಾಮಾನ ಬದಲಾವಣೆ ಮತ್ತು ಅದರ ಪರಿಣಾಮಗಳ ಬಗ್ಗೆ ಆಳವಾದ ತಿಳುವಳಿಕೆಯನ್ನು ಬೆಳೆಸುತ್ತದೆ, ”ಎಂದು ರಾಜೀವ್‌ ಗೌಡ ಹೇಳಿದರು.

ಈ ಶೃಂಗ ಸಭೆಯಲ್ಲಿ ತಮಿಳುನಾಡು ಗ್ರೀನ್ ಮಿಷನ್‌ನ ನಿರ್ದೇಶಕಿ ಮಾಧವಿ ಯಾದವ್, ಐಎಫ್‌ಎಸ್; ಎನ್‌ಸಿಇಆರ್‌ಟಿಯ ವಿಜ್ಞಾನ ಮತ್ತು ಗಣಿತ ಶಿಕ್ಷಣ ವಿಭಾಗದ ಸಹ ಪ್ರಾಧ್ಯಾಪಕ ಡಾ. ಚೊಂಗ್ ಶಿಮ್ರೇ; ಶಿಕ್ಷಣತಜ್ಞ, ಲೇಖಕ ಮತ್ತು ಹವಾಮಾನ ಬದಲಾವಣೆ ಚಿಂತನೆಯ ನೇತಾರ ಮ್ಯಾಥ್ಯೂ ಪೈ; ಅಸರ್ ಸಾಮಾಜಿಕ ಪರಿಣಾಮ ಸಲಹೆಗಾರ ಸಂಸ್ಥೆಯಸಂವಹನ ಮುಖ್ಯಸ್ಥ ಬ್ರಿಕೇಶ್ ಸಿಂಗ್; ಮತ್ತು ಹಿರಿಯ ಪರಿಸರ ಪತ್ರಕರ್ತೆ ಜಯಶ್ರೀ ನಂದಿ ಮುಂತಾದ ತಜ್ಷರು ಭಾಗವಹಿಸಿದ್ದರು.

“ನಾಳೆಗಾಗಿ ಕಲಿಕೆ: ಹವಾಮಾನ ಕುರಿತ ಯೋಜನೆಗಳನ್ನು ಕಾರ್ಯರೂಪಕ್ಕೆ ಪರಿವರ್ತಿಸುವಲ್ಲಿ ಶಿಕ್ಷಣದ ಪಾತ್ರ ” ಎಂಬ ವರದಿಯನ್ನು ಶೃಂಗಸಭೆಯಲ್ಲಿ ಬಿಡುಗಡೆ ಮಾಡಲಾಯಿತು. ಈ ವರದಿಯು ಹವಾಮಾನ ಬದಲಾವಣೆಗಾಗಿ ರಾಷ್ಟ್ರೀಯ ಕ್ರಿಯಾ ಯೋಜನೆ (NAPCC) ಮತ್ತು ಕರ್ನಾಟಕ, ತಮಿಳುನಾಡು, ಮಹಾರಾಷ್ಟ್ರ, ಪಶ್ಚಿಮ ಬಂಗಾಳ ಮತ್ತು ದೆಹಲಿಯ ಹವಾಮಾನ ಬದಲಾವಣೆಗಾಗಿ ರಾಜ್ಯ ಕ್ರಿಯಾ ಯೋಜನೆಗಳು (SAPCCs), ಹವಾಮಾನ ಶಿಕ್ಷಣವನ್ನು ಹವಾಮಾನ ಬದಲಾವಣೆಗೆ ಒಗ್ಗಿಕೊಳ್ಳಲು ಹೇಗೆ ಬಳಸಿಕೊಳ್ಳುತ್ತವೆ ಎಂಬುದನ್ನು ವಿಶ್ಲೇಷಿಸುತ್ತದೆ.

ಈ ವರದಿಯು, ಹವಾಮಾನ ಬದಲಾವಣೆಗಾಗಿ ರಾಷ್ಟ್ರೀಯ ಕ್ರಿಯಾ ಯೋಜನೆ (NAPCC)ಯು ಹವಾಮಾನ ಬದಲಾವಣೆ ಕುರಿತಾಗಿ ಸಾರ್ವಜನಿಕ ಜಾಗೃತಿ ಮತ್ತು ಸಾರ್ವಜನಿಕರ ಸಾಮರ್ಥ್ಯ ವೃದ್ಧಿಯನ್ನು ಉಲ್ಲೇಖಿಸುತ್ತದೆಯಾದರೂ, ಹವಾಮಾನ ಶಿಕ್ಷಣವನ್ನು ನೀಡಲು ಅಗತ್ಯವಿರುವ ಸಮಗ್ರ ಕಾರ್ಯತಂತ್ರವನ್ನು ರೂಪಿಸುವಲ್ಲಿ ರಾಷ್ಟ್ರೀಯ ಕ್ರಿಯಾ ಯೋಜನೆ ವಿಫಲಗೊಂಡಿದೆ ಎಂಬ ಅಂಶವನ್ನು ಉಲ್ಲೇಖಿಸುತ್ತದೆ. ಜೊತೆಗೆ ರಾಷ್ಟ್ರೀಯ ಕ್ರಿಯಾ ಯೋಜನೆಯು ಶಿಕ್ಷಣಕ್ಕೆ ಸಂಬಂಧಿಸಿದ ಕಾರ್ಯತಂತ್ರಗಳನ್ನು ರೂಪಿಸುವಲ್ಲಿ ಶಾಲೆಗಳ ಪಾತ್ರ, ಶಿಕ್ಷಕರ ತರಬೇತಿ ಮತ್ತು ಹವಾಮಾನ ಶಿಕ್ಷಣದ ಏಕೀಕರಣವನ್ನು ಹವಾಮಾನ ಶಿಕ್ಷಣದ ತಂತ್ರಗಳ ಪ್ರಮುಖ ಅಂಶವಾಗಿ ಪರಿಗಣಿಸುವುದನ್ನು ಕಡೆಗಣಿಸಿದೆ ಎಂಬುದನ್ನು ವರದಿಯಲ್ಲಿ ಗಮನಿಸಲಾಗಿದೆ. ಅದೇ ರೀತಿ, ರಾಜ್ಯಕ್ರಿಯಾ ಯೋಜನೆಗಳು, ಜಾಗೃತಿಯ ಮಹತ್ವವನ್ನು ಒಪ್ಪಿಕೊಳ್ಳುವಾಗ, ಮರ ನೆಡುವಂತಹ ಪಠ್ಯೇತರ ಚಟುವಟಿಕೆಗಳಿಗೆ ತಮ್ಮ ವಿಧಾನವನ್ನು ಸೀಮಿತಗೊಳಿಸಿವೆ ಎಂಬುದನ್ನು ವರದಿಯು ಉಲ್ಲೇಖಿಸುತ್ತದೆ.
ವರದಿಯು ಹವಾಮಾನ ಶಿಕ್ಷಣವನ್ನು ಬಲಪಡಿಸಲು ಹವಾಮಾನ ಶಿಕ್ಷಣಕ್ಕಾಗಿ ರಾಷ್ಟ್ರೀಯ ಚೌಕಟ್ಟು, ಬಜೆಟ್ ಹಂಚಿಕೆ, ಇತರೆ ಪಠ್ಯೇತರ ಚಟುವಟಿಕೆಗಳ ಅಳವಡಿಕೆ, ಶಿಕ್ಷಕರ ತರಬೇತಿ, ಉನ್ನತ ಶಿಕ್ಷಣದ ಏಕೀಕರಣ ಇವೇ ಮೊದಲಾದ ಇತರ ಕ್ರಮಗಳನ್ನು ಶಿಫಾರಸ್ಸು ಮಾಡುತ್ತದೆ.

“ಹವಾಮಾನ ಶಿಕ್ಷಕರ ಜಾಲ (CEN)ವನ್ನು ಹವಾಮಾನ ಬಿಕ್ಕಟ್ಟಿಗೆ ಪ್ರತಿಕ್ರಿಯೆಯಾಗಿ ರಚಿಸಲಾಗಿದೆ. ಶಿಕ್ಷಣ ಎಂದರೆ ಕೇವಲ ಜ್ಞಾನಗಳಿಕೆ ಅಲ್ಲ – ಇದು ಸಮುದಾಯಗಳನ್ನು ನಿರ್ಮಿಸುವುದು, ಕೌಶಲ್ಯಗಳನ್ನು ಅಭಿವೃದ್ಧಿಪಡಿಸುವುದು ಮತ್ತು ಈ ಬಿಕ್ಕಟ್ಟನ್ನು ಒಟ್ಟಾಗಿ ಎದುರಿಸಲು ನಮಗೆ ಅಗತ್ಯವಿರುವ ಸಾಮರ್ಥ್ಯಗಳನ್ನು ಬೆಳೆಸುವುದು ಎಂಬ ಕಲ್ಪನೆಯ ಮೇಲೆ ಈ ಶೃಂಗಸಭೆಯನ್ನು ಆಯೋಜಿಸಲಾಗಿದೆ. ಈ ಶೃಂಗಸಭೆಯು ಪ್ರಮುಖ ಚರ್ಚೆಗಳಿಗೆ ಮತ್ತು ಸಮುದಾಯಗಳು ಪರಿವರ್ತನೆಯ ದಿಕ್ಕಿನಲ್ಲಿ ಕಾರ್ಯಪ್ರವೃತ್ತರಾಗಲು ವೇದಿಕೆಯನ್ನು ಒದಗಿಸುವ ನಮ್ಮ ಪ್ರಯತ್ನವಾಗಿದೆ, ”ಎಂದು ಹವಾಮಾನ ಶಿಕ್ಷಣ ಜಾಲದ ಸಹ-ಸಂಸ್ಥಾಪಕಿ ಸುನಯನ ಗಂಗೂಲಿ ಹೇಳಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      

Tags: BangaloreKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_Kannadaಬೆಂಗಳೂರು
Share196Tweet123Send
Previous Post

ಸಮಾಜದ ಅಗತ್ಯ ಕ್ಷೇತ್ರಗಳನ್ನೇ ಕಡೆಗಣಿಸಿದ ಬಜೆಟ್ | ಜರ್ಮನಿ ಪ್ರಾಧ್ಯಾಪಕಿ, ಆರ್ಥಿಕ ವಿಶ್ಲೇಷಕಿ ಡಾ.ನವ್ಯಾ ಗುಬ್ಬಿ

Next Post

ದಿಢೀರ್ ಅನಾರೋಗ್ಯ | ಸಿಎಂ ಸಿದ್ಧರಾಮಯ್ಯ ಆಸ್ಪತ್ರೆಗೆ ದಾಖಲು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ನಾಡಹಬ್ಬ ದಸರಾ ಜನರ ಉತ್ಸವವಾಗಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

ದಿಢೀರ್ ಅನಾರೋಗ್ಯ | ಸಿಎಂ ಸಿದ್ಧರಾಮಯ್ಯ ಆಸ್ಪತ್ರೆಗೆ ದಾಖಲು

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಾ.14ರಂದು ಭಕ್ತಿ-ಭಾವ ಕುಸುಮಾಂಜಲಿ | ದಾಸ ಪರಂಪರೆಯ ಶ್ರೇಷ್ಠ ಕೃತಿಗಳ ಗಾನೋತ್ಸವ

ಮಾ.14ರಂದು ಭಕ್ತಿ-ಭಾವ ಕುಸುಮಾಂಜಲಿ | ದಾಸ ಪರಂಪರೆಯ ಶ್ರೇಷ್ಠ ಕೃತಿಗಳ ಗಾನೋತ್ಸವ

March 12, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಅಳ್ನಾವರ-ದಾಂಡೇಲಿ ಡೆಮು ರೈಲು ಸಂಚಾರದ ದಿನ ಹಾಗೂ ವೇಳಾಪಟ್ಟಿ ಬದಲಾವಣೆ

March 12, 2026
ಸೊರಬ | ಮಾರ್ಚ್ 14ರವರೆಗೂ ಬಾಡದಬೈಲು ಶನೈಶ್ಚರ, ಅನ್ನಪೂರ್ಣೇಶ್ವರಿ ವರ್ಧಂತಿ ಉತ್ಸವ

ಸೊರಬ | ಮಾರ್ಚ್ 14ರವರೆಗೂ ಬಾಡದಬೈಲು ಶನೈಶ್ಚರ, ಅನ್ನಪೂರ್ಣೇಶ್ವರಿ ವರ್ಧಂತಿ ಉತ್ಸವ

March 12, 2026
ಮೂತ್ರಪಿಂಡದ ಕಾಯಿಲೆ | ಒಂದು ನಿಶಬ್ದ ಹಂತಕ, ಇದನ್ನು ನೀವು ತಡೆಯಬಹುದು | ಹೇಗೆ?

ಮೂತ್ರಪಿಂಡದ ಕಾಯಿಲೆ | ಒಂದು ನಿಶಬ್ದ ಹಂತಕ, ಇದನ್ನು ನೀವು ತಡೆಯಬಹುದು | ಹೇಗೆ?

March 12, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL