No Result
View All Result
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji
English Articles

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

by ಕಲ್ಪ ನ್ಯೂಸ್
April 13, 2026
0

Kalpa Media House  |  Mysuru | Stressing the importance of dharma, Sri Mad Yadugiri Yatiraja Jeeyar Swamiji of Sri Yatiraja...

Read moreDetails
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
An Immaculate Demonstration on Confluence of Architecture Design & Music

An Immaculate Demonstration on Confluence of Architecture Design & Music

April 13, 2026
Rani KoHEnur Calls Transgender Bill “Absurd”, Questions Lawmakers in Explosive Podcast Interview

Rani KoHEnur Calls Transgender Bill “Absurd”, Questions Lawmakers in Explosive Podcast Interview

April 9, 2026
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
  • Advertise With Us
  • Grievances
  • About Us
  • Contact Us
Monday, April 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ವಸತಿ ಸಮುಚ್ಛಯ ಸೇರಿ ದೊಡ್ಡ ಕಟ್ಟಡಗಳಲ್ಲಿ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಕಡ್ಡಾಯ: ಡಿಸಿಎಂ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 22, 2021
in ಬೆಂಗಳೂರು ನಗರ, ರಾಜಕೀಯ
0
ವಸತಿ ಸಮುಚ್ಛಯ ಸೇರಿ ದೊಡ್ಡ ಕಟ್ಟಡಗಳಲ್ಲಿ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಕಡ್ಡಾಯ: ಡಿಸಿಎಂ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಬೆಂಗಳೂರು: ವಸತಿ ಸಮುಚ್ಛಯಗಳು ಸೇರಿದಂತೆ ದೊಡ್ಡ ಕಟ್ಟಡಗಳು ಎಲೆಕ್ಟ್ರಿಕ್ ವಾಹನಗಳನ್ನು ಚಾರ್ಜ್ ಮಾಡಿಕೊಳ್ಳುವ ವ್ಯವಸ್ಥೆಯನ್ನು ಕಡ್ಡಾಯವಾಗಿ ಹೊಂದಿರಬೇಕು. ಅದಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದರು.

ಬೆಂಗಳೂರಿನಲ್ಲಿ ಇಂದು ಬೆಳಿಗ್ಗೆ ಎಲೆಕ್ಟ್ರಿಕ್ ವಾಹನಗಳ ಬಳಕೆಯ ಬಗ್ಗೆ ಹಾರ್ವರ್ಡ್ ಇಂಡಿಯಾ ಕಾನ್ಫರೆನ್ಸ್ ವತಿಯಿಂದ ಏರ್ಪಡಿಸಲಾಗಿದ್ದ ಭವಿಷ್ಯದತ್ತ ಸುಸ್ಥಿರ ಸಾರಿಗೆ ವರ್ಚುಯಲ್ ಗೋಷ್ಠಿಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಎಲೆಕ್ಟ್ರಿಕ್ ವಾಹನಗಳನ್ನು ಒದಗಿಸಿದರಷ್ಟೇ ಸಾಲದು. ಎಲ್ಲೆಡೆಯೂ ಸುಲಭವಾಗಿ ಚಾರ್ಜ್ ಮಾಡಿಕೊಳ್ಳುವಂಥ ವ್ಯವಸ್ಥೆ ಇರಲೇಬೇಕು ಎಂದು ಹೇಳಿದರು.

ಮುಂದಿನ ದಿನಗಳಲ್ಲಿ ಬ್ಯಾಟರಿ ವಾಹನಗಳು ಮಾರುಕಟ್ಟೆಗೆ ಬರಲಿವೆ. ಗ್ರಾಹಕರು ಬ್ಯಾಟರಿಗಳನ್ನು ಬಾಡಿಗೆಗೆ ಪಡೆದು ಆ ವಾಹನಗಳನ್ನು ಚಲಾಯಿಸಿಕೊಂಡು ಹೋಗಬಹುದು. ಎಲ್ಲೆಡೆ ಪೆಟ್ರೋಲ್ ಬಂಕ್‌ಗಳಂತೆ ಬ್ಯಾಟರಿ ಬಂಕ್‌ಗಳೂ ತಲೆಎತ್ತಲಿವೆ. ಆಗ ಗ್ರಾಹಕನಿಗೆ ಕಡಿಮೆ ದರದಲ್ಲಿ ವಾಹನವೂ ದೊರೆಯಲಿದೆ. ತನ್ನ ಅನುಕೂಲಕ್ಕೆ ತಕ್ಕಂತೆ ಗ್ರಾಹಕನು ಬ್ಯಾಟರಿಯನ್ನು ಬಳಕೆ ಮಾಡಿಕೊಳ್ಳಬಹುದು ಎಂದು ಅವರು ವಿವರಿಸಿದರು.

ಸಬ್ಸಿಡಿ ನೀಡಲಾಗಿದೆ:
ವಾಹನ ಮಾಲಿನ್ಯವನ್ನು ಸಂಪೂರ್ಣ ತೊಡೆದುಹಾಕಲು ಎಲೆಕ್ಟ್ರಿಕ್ ವಾಹನಗಳ ಬಳಕೆ ಹೆಚ್ಚಲೇಬೇಕು. ಅದಕ್ಕೆ ಬೇಕಾದ ಸಬ್ಸಿಡಿ, ರಿಯಾಯಿತಿ ವಿದ್ಯುತ್ ಸೇರಿದಂತೆ ಎಲ್ಲ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ದೇಶದಲ್ಲೇ ಮೊತ್ತ ಮೊದಲಿಗೆ ಎಲೆಕ್ಟ್ರಿಕ್ ವಾಹನ ನೀತಿಯನ್ನು ಅನುಷ್ಠಾನಕ್ಕೆ ತಂದಿರುವ ಕರ್ನಾಟಕವು ಹೊಗೆರಹಿತ ವಾಹನಗಳ ಬಳಕೆಗೆ ಹೆಚ್ಚು ಒತ್ತು ನೀಡುತ್ತಿದೆ ಎಂದರು.

ರಾಜ್ಯದಲ್ಲಿ ವಿದ್ಯುತ್ ಕೊರತೆ ಇಲ್ಲ. ಎಲೆಕ್ಟ್ರಿಕ್ ವಾಹನಗಳಿಗೆ ವಾಣಿಜ್ಯ ಬಳಕೆ ವಿದ್ಯುತ್‌ಗಿಂತ ಅಗ್ಗದ ದರದಲ್ಲಿ ವಿದ್ಯುತ್ ನೀಡಲಾಗುತ್ತಿದೆ. ಮುಂದೆಯೂ ಈ ಸೌಲಭ್ಯ ಇರುತ್ತದೆ. ರಾಜ್ಯದಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಗಣನೀಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ರಸ್ತೆ, ವಿದ್ಯುತ್, ನೀರು ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ವ್ಯಾಪಕ ಸುಧಾರಣೆಗಳನ್ನು ತರಲಾಗಿದೆ ಎಂದು ಡಿಸಿಎಂ ಹೇಳಿದರು.

ಎಲೆಕ್ಟ್ರಿಕ್ ವಾಹನ ತಯಾರಿಕೆ ಹಾಗೂ ಅದಕ್ಕೆ ಪೂರಕವಾದ ಕೈಗಾರಿಕೆಗಳನ್ನು ಸ್ಥಾಪನೆಗೆ ಸರಕಾರ ಹೆಚ್ಚು ಬೆಂಬಲ ನೀಡುತ್ತಿದೆ. ಈಗಾಗಲೇ ರಾಜ್ಯದಲ್ಲಿ ಈ ಕ್ಷೇತ್ರಕ್ಕೆ ಸಂಬಂಧಿಸಿ ಕೈಗಾರಿಕೆಗಳು ಸ್ಥಾಪನೆಯಾಗುತ್ತಿವೆ ಎಂದ ಅವರು, ಜಾಗತಿಕ ತಾಪಮಾನ ನಿಯಂತ್ರಣಕ್ಕೆ ಕರ್ನಾಟಕವು ತನ್ನದೇ ಆದ ಕೊಡುಗೆ ನೀಡುತ್ತಿದೆ ಎಂದರು.

ಗೋಷ್ಠಿಯಲ್ಲಿ ಸಿಡಿಪಿಕ್ಯೂ ಗ್ಲೋಬಲ್ ಸಂಸ್ಥೆಯ ಕಾರ್ಯಕಾರಿ ಉಪಾಧ್ಯಕ್ಷೆ ಅನಿತಾ ಜಾರ್ಜ್, ಉದ್ಯಮಿ ವಿಘ್ನೇಶ್ ನಂದಕುಮಾರ್ ಹಾಗೂ ಬಿನಾಯ್ ಟೆಕ್ನಾಲಜೀಸ್ ಸಂಸ್ಥೆಯ ಸಹ ಸಂಸ್ಥಾಪಕ ವಿಭು ಬಿನಾಯ್ ಪಾಲ್ಗೊಂಡು ತಮ್ಮ ಅಭಿಪ್ರಾಯಗಳನ್ನು ಮಂಡಿಸಿದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Bangalore NewsDCM Ashwath NarayanKannada News WebsiteKarnatakaLatest Kannada NewsPolitical NewsState Newsಬೆಂಗಳೂರು
Share199Tweet123Send
Previous Post

ರಾಮಮಂದಿರ ನಿರ್ಮಾಣಕ್ಕೆ ಸಿದ್ದರಾಮಯ್ಯ ಸಹ ದೇಣಿಗೆ ನೀಡಿರುತ್ತಾರೆ; ಸಚಿವ ಸೋಮಶೇಖರ್

Next Post

ಶಿವಮೊಗ್ಗ: ದೇವಸ್ಥಾನದ ಹುಂಡಿ ಕಳವು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶಿವಮೊಗ್ಗ: ದೇವಸ್ಥಾನದ ಹುಂಡಿ ಕಳವು

ಶಿವಮೊಗ್ಗ: ದೇವಸ್ಥಾನದ ಹುಂಡಿ ಕಳವು

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
ಧರ್ಮ ರಹಿತ ಸಮಾಜದ ಕಲ್ಯಾಣ ಅಸಾಧ್ಯ- ಧರ್ಮಪಾಲನೆ  ಸರ್ವರ ಕರ್ತವ್ಯ: ಯದುಗಿರಿ ಯತಿರಾಜ ಜೀಯರ್ ಸ್ವಾಮೀಜಿ

ಧರ್ಮ ರಹಿತ ಸಮಾಜದ ಕಲ್ಯಾಣ ಅಸಾಧ್ಯ- ಧರ್ಮಪಾಲನೆ  ಸರ್ವರ ಕರ್ತವ್ಯ: ಯದುಗಿರಿ ಯತಿರಾಜ ಜೀಯರ್ ಸ್ವಾಮೀಜಿ

April 13, 2026
ತ್ರಿಪುರ | ಇದು ಆಗ್ನೇಯ ಏಷ್ಯಾಕ್ಕೆ ಪ್ರವೇಶ ದ್ವಾರ | ಹೂಡಿಕೆ – ಅಭಿವೃದ್ಧಿಗೆ ಪ್ರಶಸ್ತ ಸ್ಥಳ

ತ್ರಿಪುರ | ಇದು ಆಗ್ನೇಯ ಏಷ್ಯಾಕ್ಕೆ ಪ್ರವೇಶ ದ್ವಾರ | ಹೂಡಿಕೆ – ಅಭಿವೃದ್ಧಿಗೆ ಪ್ರಶಸ್ತ ಸ್ಥಳ

April 13, 2026
An Immaculate Demonstration on Confluence of Architecture Design & Music

An Immaculate Demonstration on Confluence of Architecture Design & Music

April 13, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!