ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಬೆಳೆಯುವ ಸಿರಿ ಮೊಳಕೆಯಲ್ಲೇ ಎಂಬಂತೆ ಹಿಜಾಬ್ ವಿವಾದ ತೀವ್ರ ಸ್ವರೂಪ ಪಡೆಯುವ ಮುಂಚೆಯೇ ಅದನ್ನು ತಡೆಗಟ್ಟುವ ಪ್ರಯತ್ನ ಮಾಡಬೇಕಿತ್ತು ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ರಾಜ್ಯದಲ್ಲಿ ಭುಗಿಲೆದ್ದಿರುವ ಹಿಜಾಬ್ ವಿವಾದಕ್ಕೆ ಸಂಬಂಧಪಟ್ಟಂತೆ ಪ್ರತಿಕ್ರಿಯೆ ನೀಡಿರುವ ಅವರು, ಸಂಘರ್ಷ ಪ್ರಾರಂಭವಾಗುತ್ತಿದ್ದಂತೆ ಎರಡು ರಾಷ್ಟ್ರೀಯ ಪಕ್ಷಗಳು ತಡೆಯುವ ಪ್ರಯತ್ನ ಮಾಡಬೇಕಿತ್ತು. ಆದರೆ, ಈಗ ಪರಿಸ್ಥಿತಿ ತುಂಬಾ ಮುಂದುವರೆದಿದ್ದು, ನ್ಯಾಯಾಲಯ ನೀಡುವ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಿರಬೇಕು ಎಂದು ಹೇಳಿದರು.
ಕಾಂಗ್ರೆಸ್ ಮುಖಂಡ ಸಿಎಂ ಇಬ್ರಾಹಿಂ ಜೆಡಿಸ್ ಸೇರ್ಪಡೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈಗಾಗಲೇ ನಮ್ಮಲ್ಲಿ ಒಬ್ಬರು ರಾಜ್ಯಾಧ್ಯಕ್ಷರಾಗಿದ್ದಾರೆ. ಅವರು ಆರು ಬಾರಿ ಗೆಲುವು ಸಾಧಿಸಿದ್ದು, ತಕ್ಷಣವೇ ಅವರನ್ನು ಅಧಿಕಾರದಿಂದ ಕೆಳಗಿಳಿಸಲು ಸಾಧ್ಯವಾಗುವುದಿಲ್ಲ. ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯುವ ವೇಳೆ ಗಣನೆಗೆ ತೆಗೆದುಕೊಳ್ಳುತ್ತೇವೆ ಎಂದು ಭರವಸೆ ಕೊಟ್ಟಿದ್ದೇವೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post