ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
2022-23ನೆಯ ಸಾಲಿನ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಶುಲ್ಕ ಮರುಪಾವತಿಗೆ ಆನ್’ಲೈನ್ ಮೂಲಕ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ವಿಸ್ತರಣೆ ಮಾಡಿ ಆದೇಶ ಹೊರಡಿಸಲಾಗಿದೆ.
ಈ ಕುರಿತಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆಯುಕ್ತರು ಆದೇಶ ಹೊರಡಿಸಿದ್ದು, ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ, ವಿದ್ಯಾಸಿರಿ ಊಟ ಮತ್ತು ವಸತಿ ಸಹಾಯ ವಿದ್ಯಾರ್ಥಿವೇತನ ಯೋಜನೆ ಸೌಲಭ್ಯಕ್ಕಾಗಿ ಆನ್’ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ನಿಗದಿಪಡಿಸಲಾಗಿತ್ತು.
ಆದರೆ, ವಿದ್ಯಾರ್ಥಿಗಳು ಮತ್ತು ಶೈಕ್ಷಣಿಕ ಸಂಸ್ಥೆಗಳಿAದ ಅರ್ಜಿ ಸಲ್ಲಿಕೆಯ ದಿನಾಂಕವನ್ನು ವಿಸ್ತರಿಸಲು ಮನವಿ ಬಂದಿದ್ದವು. ಈ ಹಿನ್ನೆಲೆಯಲ್ಲಿ ಶುಲ್ಕ ಮರುಪಾವತಿಗೆ ಮಾತ್ರ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ಜುಲೈ 6ರಿಂದ ಜುಲೈ 15ರವರೆಗೆ ಅಮದರೆ 10 ದಿನಗಳ ಕಾಲ ವಿಸ್ತರಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
Also read: ಜು.9ರಂದು ಜೆಎನ್ಎನ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಸಿಇಟಿ ಸಂವಾದ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post