ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯದಾದ್ಯಂತ ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಿಗೆ ದಸರಾ ರಜೆಯನ್ನು #Dasara Holidays ನಾಳೆಯಿಂದ ಅ.18ರವರೆಗೂ ವಿಸ್ತರಣೆ ಮಾಡಲಾಗಿದೆ.
ಈ ಕುರಿತಂತೆ ಸಿಎಂ ಸಿದ್ದರಾಮಯ್ಯ #CM Siddaramaiah ಆದೇಶಿಸಿದ್ದು, ರಾಜ್ಯದಲ್ಲಿ ಸಮೀಕ್ಷಾ ಕಾರ್ಯ ಅಪೂರ್ಣಗೊಂಡ ಹಿನ್ನೆಲೆಯಲ್ಲಿ ರಜೆಯನ್ನು ವಿಸ್ತರಣೆ ಮಾಡಲಾಗಿದೆ.
ರಾಜ್ಯದಲ್ಲಿ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದಿಂದ ನಡೆಯುತ್ತಿರುವ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಕಾರ್ಯ ಕೆಲವು ಕಡೆ ಪೂರ್ಣಗೊಂಡಿಲ್ಲ. ಹೀಗಾಗಿ ಶಿಕ್ಷಕರನ್ನು ಸಮೀಕ್ಷೆ ಕಾರ್ಯದಲ್ಲಿ ಬಳಸಿಕೊಳ್ಳಲು ನಿರ್ಧರಿಸಲಾಗಿದೆ ಎಂದರು.
ಅ.7 ರಂದು ಸಮೀಕ್ಷೆ ಪೂರ್ಣಗೊಳಿಸಲು ನಿರ್ಧರಿಸಿದ್ದೆವು. ಆದರೆ, ನಿರೀಕ್ಷೆಯಂತೆ ರಾಜ್ಯದ ಹಲವೆಡೆ ಸಮೀಕ್ಷೆ ಕಾರ್ಯ ಪೂರ್ಣಗೊಂಡಿಲ್ಲ. ರಾಜ್ಯದಲ್ಲಿ 1.20 ಲಕ್ಷ ಶಿಕ್ಷಕರು ಸಮೀಕ್ಷೆ ಕಾರ್ಯದಲ್ಲಿ ಭಾಗಿಯಾಗಿದ್ದು, ಸಮೀಕ್ಷೆ ಕಾರ್ಯ ಪೂರ್ಣಗೊಳ್ಳಲು ದಸರಾ ರಜೆ ವಿಸ್ತರಣೆ ಮಾಡುವಂತೆ ರಾಜ್ಯ ಶಿಕ್ಷಕರ ಸಂಘ ಮನವಿ ಮಾಡಿತ್ತು. ಈ ಮನವಿ ಆಧಾರದ ಮೇಲೆ ರಜೆಯನ್ನು ಅಕ್ಟೋರ್ಬ 18ರವರೆಗೆ ರಜೆಯನ್ನು ವಿಸ್ತರಣೆ ಮಾಡಲಾಗಿದೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post