ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ #Renukaswamy murder case ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್, #Actor Darshan ಪವಿತ್ರಾ ಗೌಡ #Pavithra Gowda ಸೇರಿದಂತೆ ಎಲ್ಲ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಮತ್ತೆ 14 ದಿನಗಳ ಕಾಲ ವಿಸ್ತರಣೆ ಮಾಡಲಾಗಿದೆ.
ಎಲ್ಲ ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ಇಂದಿಗೆ ಮುಕ್ತಾಯವಾಗಲಿರುವ ಹಿನ್ನೆಲೆಯಲ್ಲಿ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಯಿತು. ಎಲ್ಲ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಆಗಸ್ಟ್ 14ರವರೆಗೂ ವಿಸ್ತರಣೆ ಮಾಡಿ ನ್ಯಾಯಾಲಯ ಆದೇಶಿಸಿತು.

Also read: ವಾಹನ ಸವಾರರೇ ಎಚ್ಚರ | ಈ ಸಂಚಾರ ನಿಯಮ ಉಲ್ಲಂಘಿಸಿದ್ರೆ ಜೈಲು ಪಾಲಾಗಬೇಕಾಗುತ್ತದೆ!
ವಿಚಾರಣೆಯ ವೇಳೆ ನ್ಯಾಯಾಧೀಶರು ಎಲ್ಲಾ ಆರೋಪಿಗಳ ಹೆಸರನ್ನು ಹೇಳಿದರು. ಪ್ರತಿ ಆರೋಪಿಗಳು ತಮ್ಮ ಹೆಸರು ಕೂಗಿದಾಗ ಕೈ ಎತ್ತಿ ತಮ್ಮ ಉಪಸ್ಥಿತಿಯನ್ನು ಖಚಿತಪಡಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 










Discussion about this post