No Result
View All Result
Mysuru Project Assistant Job Kits Leap 22 K Salary
English Articles

Mysuru Job Alert : Project Assistant Vacancy, 22,000 Salary, Apply by Oct 10

by kalpa News
September 21, 2026
0

Kalpa Media House  |  Mysuru  | Applications have been invited for one Project Assistant post for the Optical Sensing Biotechnology...

Read moreDetails
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
  • Advertise With Us
  • Grievances
  • About Us
  • Contact Us
Monday, September 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಸಧೃಡ ಭಾರತದ ನಿರ್ಮಾಣಕ್ಕೆ ನ್ಯಾಯಯುತ ಸಂಪನ್ಮೂಲ ಹಂಚಿಕೆ ಅತ್ಯಗತ್ಯ: ಸಿಎಂ

16ನೇ ಹಣಕಾಸು ಆಯೋಗಕ್ಕೆ ಸಲ್ಲಿಸಿದ ರಾಜ್ಯದ ಶಿಫಾರಸ್ಸುಗಳ ಕುರಿತು ಮುಖ್ಯಮಂತ್ರಿ ಸಿದ್ಧರಾಮಯ್ಯ ಪತ್ರಿಕಾಗೋಷ್ಠಿ

kalpa News by kalpa News
June 14, 2025
in ಬೆಂಗಳೂರು ನಗರ
0
ಸಧೃಡ ಭಾರತದ ನಿರ್ಮಾಣಕ್ಕೆ ನ್ಯಾಯಯುತ ಸಂಪನ್ಮೂಲ ಹಂಚಿಕೆ ಅತ್ಯಗತ್ಯ: ಸಿಎಂ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ರಾಜ್ಯವು ದೇಶದ ಒಟ್ಟು ಜಿಡಿಪಿಗೆ ಸುಮಾರು ಶೇ.8.7ರಷ್ಟು ಕೊಡುಗೆ ನೀಡುತ್ತಿದ್ದು, ಜಿ.ಎಸ್.ಟಿ ಸಂಗ್ರಹಣೆಯಲ್ಲಿ 2ನೇ ಸ್ಥಾನದಲ್ಲಿದೆ. ರಾಜ್ಯದಿಂದ ಕೇಂದ್ರಕ್ಕೆ ಸ್ವೀಕೃತವಾಗುವ ತೆರಿಗೆಯ ಪ್ರತಿ ರೂಪಾಯಿಗೆ ಪ್ರತಿಯಾಗಿ ರಾಜ್ಯವು ಕೇವಲ 15 ಪೈಸೆ ಮಾತ್ರ ಪಡೆಯುತ್ತದೆ. 15 ನೇ ಹಣಕಾಸು ಆಯೋಗವು ಕರ್ನಾಟಕದ ತೆರಿಗೆ ಪಾಲನ್ನು 4.713% ರಿಂದ 3.647% ಕ್ಕೆ ಇಳಿಕೆ ಮಾಡಿದ್ದರಿಂದ 15ನೇ ಹಣಕಾಸು ಆಯೋಗದ ಅವಧಿಯಲ್ಲಿ ₹ 80,000 ಕೋಟಿಗಳಷ್ಟು ನಷ್ಟವಾಗಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ #CM Siddaramaiah  ತಿಳಿಸಿದರು.

16ನೇ ಹಣಕಾಸು ಆಯೋಗಕ್ಕೆ ಸಲ್ಲಿಸಿದ ರಾಜ್ಯದ ಶಿಫಾರಸ್ಸುಗಳ ಕುರಿತು ಮುಖ್ಯಮಂತ್ರಿ ಸಿದ್ಧರಾಮಯ್ಯ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು.

16ನೇ ಹಣಕಾಸು ಆಯೋಗದ ಅಧ್ಯಕ್ಷರಾದ ಡಾ. ಅರ್ವಿಂದ್ ಪನಗಾರಿಯ ಮತ್ತು ಆಯೋಗದ ಸದಸ್ಯರೊಂದಿಗೆ ಭೇಟಿ ಮಾಡಿ, ಕೇಂದ್ರದಿಂದ ರಾಜ್ಯಗಳಿಗೆ ತೆರಿಗೆ ಹಂಚಿಕೆ ಮತ್ತು ಹಣಕಾಸು ವರ್ಗಾವಣೆಗಳ ಕುರಿತು ರಾಜ್ಯದ ಆಶಯಗಳು, ನಿರೀಕ್ಷೆಗಳು ಮತ್ತು ಪ್ರಸ್ತಾವನೆಗಳನ್ನು ಮಂಡಿಸಿದರು. ಈ ಸಭೆಯಲ್ಲಿ ಶ್ರೀ ಬಸವರಾಜ ರಾಯರೆಡ್ಡಿ, ಮುಖ್ಯಮಂತ್ರಿ ಆರ್ಥಿಕ ಸಲಹೆಗಾರರು, ಮುಖ್ಯ ಕಾರ್ಯದರ್ಶಿರವರು, ಮುಖ್ಯಮಂತ್ರಿ ಕಚೇರಿ ಮತ್ತು ಹಣಕಾಸು ಇಲಾಖೆಯ ಹಿರಿಯ ಅಧಿಕಾರಿಗಳು ಹಾಜರಿದ್ದರು.
ಮುಖ್ಯಮಂತ್ರಿಗಳು ಹೆಚ್ಚುವರಿ ಜ್ಞಾಪಕ ಪತ್ರವನ್ನು ಆಯೋಗಕ್ಕೆ ಸಲ್ಲಿಸುವುದರೊಂದಿಗೆ, ಈ ಜ್ಞಾಪಕ ಪತ್ರದಲ್ಲಿ ನ್ಯಾಯಯುತ, ಪಾರದರ್ಶಕ ಮತ್ತು ಬೆಳವಣಿಗೆಯನ್ನು ಪ್ರೋತ್ಸಾಹಿಸುವ ಮತ್ತು ಒಕ್ಕೂಟ ವ್ಯವಸ್ಥೆಯನ್ನು ಬಲಪಡಿಸುವ ರಾಜ್ಯದ ದೃಷ್ಟಿಕೋನವನ್ನು ಸ್ಪಷ್ಟಪಡಿಸಿದರು.

ಕೇಂದ್ರ ಹಾಗು ರಾಜ್ಯಗಳ ನಡುವಿನ ಹಂಚಿಕೆಯು ಕನಿಷ್ಠ 50% ಕ್ಕೆ ಹೆಚ್ಚಿಸಬೇಕು ಮತ್ತು ಸೆಸ್‌ಗಳು ಮತ್ತು ಸರ್‌ಚಾರ್ಜ್‌ಗಳನ್ನು 5% ಕ್ಕೆ ಮಿತಿಗೊಳಿಸಬೇಕೆಂದು ಪ್ರಸ್ತಾಪಿಸಿದೆ. ಕೇಂದ್ರದ ತೆರಿಗೆಯೇತರ ಆದಾಯವನ್ನು ರಾಜ್ಯಗಳಿಗೆ ಹಂಚಿಕೆಯಾಗುವ ಪಾಲಿನಲ್ಲಿ (divisible pool) ಸೇರಿಸಲು ಸಹ ಶಿಫಾರಸು ಮಾಡಿದೆ ರಾಜ್ಯಗಳ ನಡುವಿನ ಹಂಚಿಕೆಗೆ ಸಂಬಂಧಿಸಿದಂತೆ ಪ್ರತಿ ರಾಜ್ಯವು ತಾನು ನೀಡುವ ಕೊಡುಗೆಯಲ್ಲಿ ಸುಮಾರು 60% ಅನ್ನು ಉಳಿಸಿಕೊಳ್ಳಲು ಮತ್ತು 40% ಅನ್ನು ಉಳಿದ ರಾಜ್ಯಗಳಿಗೆ ಹಂಚಿಕೆಯಾಗಬೇಕೆಂದು ಸೂಚಿಸಿದೆ ಇದು ಬೆಳವಣಿಗೆ ಮತ್ತು ಸಮಾನತೆ ಎರಡನ್ನೂ ಖಚಿತಪಡಿಸುತ್ತದೆ ಎಂದರು.

ಸೂತ್ರವನ್ನು ನ್ಯಾಯಯುತವಾಗಿಸಲು, ಕರ್ನಾಟಕವು ಆದಾಯ-ದೂರ (income-distance) ಮಾನದಂಡದ ಪಾಲನ್ನು ಕಡಿಮೆ ಮಾಡಲು ಮತ್ತು ರಾಜ್ಯದ ಆರ್ಥಿಕ ಕೊಡುಗೆಗೆ ಹೆಚ್ಚಿನ ಪಾಲನ್ನು ನೀಡಲು ಪ್ರಸ್ತಾಪಿಸಿದೆ. ಕರ್ನಾಟಕವು ತನ್ನ ಹೆಚ್ಚುವರಿ ಜ್ಞಾಪಕ ಪತ್ರದಲ್ಲಿ, ಸಂಪನ್ಮೂಲ ಹಂಚಿಕೆಯು ಹೆಚ್ಚು ಬೆಳವಣಿಗೆ-ಆಧಾರಿತ ಮತ್ತು ನ್ಯಾಯಯುತವಾಗಿಸಲು ನಿರ್ಣಾಯಕ ಸುಧಾರಣೆಗಳಿಗೆ ಕರೆ ನೀಡಿದೆ. ಹೆಚ್ಚುವರಿ ಜ್ಞಾಪಕ ಪತ್ರದ ಪ್ರಮುಖ ಪ್ರಸ್ತಾವನೆಗಳು ಕೆಳಕಂಡಂತಿದೆ.

ತಲಾವಾರು ತೆರಿಗೆ ಹಂಚಿಕೆಯಲ್ಲಿ ಹೆಚ್ಚುತ್ತಿರುವ ಅಸಮಾನತೆಗಳು, ಆದಾಯ ಕೊರತೆ ಅನುದಾನಗಳ ಅವೈಜ್ಞಾನಿಕ ವಿನ್ಯಾಸ ಮತ್ತು ರಾಜ್ಯ-ನಿರ್ದಿಷ್ಟ ಅನುದಾನಗಳ ಅನಿರೀಕ್ಷಿತತೆಯ ಕುರಿತು ಹೆಚ್ಚುವರಿ ಜ್ಞಾಪಕ ಪತ್ರದಲ್ಲಿ ಪ್ರಸ್ತಾಪಿಸಲಾಗಿದೆ. ದೇಶದ  GDP ಗೆ ರಾಜ್ಯದ ಕೊಡುಗೆಯು ಹೆಚ್ಚಾಗಿರುವ ಹೊರತಾಗಿಯೂ, ತಲಾವಾರು ತೆರಿಗೆ ಹಂಚಿಕೆಯು ಗಮನಾರ್ಹವಾಗಿ ಕುಸಿದಿದೆ – 14 ನೇ ಮತ್ತು 15 ನೇ ಹಣಕಾಸು ಆಯೋಗಗಳ ನಡುವಿನ ರಾಷ್ಟ್ರೀಯ ಸರಾಸರಿಯ 95% ರಿಂದ 73% ಕ್ಕೆ ಕುಸಿದಿದೆ.
ಸಂಪನ್ಮೂಲ ಹಂಚಿಕೆಯಲ್ಲಿ ಸಮಾನತೆ ಮುಖ್ಯವಾಗಿದ್ದರೂ, ಇದು ಸ್ಥಿರವಾದ ಆರ್ಥಿಕ ಕಾರ್ಯಕ್ಷಮತೆ ಮತ್ತು ಆರ್ಥಿಕ ಶಿಸ್ತನ್ನು ಪಾಲಿಸುವ ರಾಜ್ಯಗಳಿಗೆ ದಂಡ ವಿಧಿಸುವಂತಾಗಬಾರದು. ಸಂಪನ್ಮೂಲ ಹಂಚಿಕೆಯಲ್ಲಿ ಸಮಾನತೆಯನ್ನು ಫಲಿತಾಂಶ ಆಧಾರಿತ ರೀತಿಯಲ್ಲಿ ಕಾರ್ಯಗತಗೊಳಿಸಬೇಕು ಎಂದು ರಾಜ್ಯವು ಒತ್ತಿಹೇಳಿತು. ಆದ್ದರಿಂದ, ಆದಾಯ-ದೂರ ಮಾನದಂಡದ ಪಾಲನ್ನು 20% ರಷ್ಟು ಕಡಿಮೆ ಮಾಡಿ ದೇಶದGDP ಯಲ್ಲಿ ರಾಜ್ಯಗಳ ಕೊಡುಗೆಯನ್ನು ಅಳತೆಗೊಲಾಗಿ ಪರಿಗಣಿಸಿ ಇದಕ್ಕೆ 20% ಅಂಕವನ್ನು ನೀಡಬೇಕೆಂದು ಪ್ರಸ್ತಾಪಿಸಿದೆ.

ಹಣಕಾಸು ಆಯೋಗವು ನೀಡುವ ರಾಜಸ್ವ ಕೊರತೆ ಅನುದಾನಗಳ ಪರಿಣಾಮಕಾರಿತ್ವವನ್ನು ಮುಖ್ಯಮಂತ್ರಿಯವರು ಪ್ರಶ್ನಿಸಿದರು. ಪ್ರಸ್ತುತ ರೂಪದಲ್ಲಿ ರಾಜಸ್ವ ಕೊರತೆ ಅನುದಾನವನ್ನು ಪಡೆಯುತ್ತಿರುವ ಫಲಾನುಭವಿ ರಾಜ್ಯಗಳು, ಈ ಅನುದಾನದ ಹೊರತಾಗಿಯೂ ರಾಜಸ್ವ ಕೊರತೆಯನ್ನು ಶೂನ್ಯವಾಗಿಸುವಲ್ಲಿ ವಿಫಲವಾಗಿರುವುದನ್ನು ಉಲ್ಲೇಖಿಸಿ ರಾಜಸ್ವ ಕೊರತೆ ಅನುದಾನವನ್ನು ತೆರಿಗೆ ಹಂಚಿಕೆಯ ಸೂತ್ರದಲ್ಲೇ ರಾಜ್ಯಗಳಿಗೆ ನೀಡಬೇಕೆಂದು ಪ್ರಸ್ತಾಪಿಸಿದರು.

ಇದಲ್ಲದೆ, ರಾಜಸ್ವ ಕೊರತೆ ಅನುದಾನಗಳನ್ನು ಅಂದಾಜಿಸಲು ಆಯೋಗವು ಪರಿಕಲ್ಪಿಸುವ ವೆಚ್ಚದ ಆದ್ಯತೆಗಳು ವ್ಯಕ್ತಿನಿಷ್ಠ ಮೌಲ್ಯಮಾಪನಗಳನ್ನು ಪ್ರತಿಬಿಂಬಿಸುತ್ತವೆ. ದುರದೃಷ್ಟವಶಾತ್, ಈ ಮೌಲ್ಯಮಾಪನಗಳು ಸಂಬಳ, ಪಿಂಚಣಿ ಮತ್ತು ಆಡಳಿತಾತ್ಮಕ ವೆಚ್ಚಗಳಿಗೆ ಹೋಲಿಸಿದರೆ ಕಲ್ಯಾಣ ಕಾರ್ಯಕ್ರಮಗಳಿಗೆ ಸರ್ಕಾರ ಭರಿಸುವ ವೆಚ್ಚವನ್ನು ಕಡಿಮೆ ಪ್ರಮಾಣದಲ್ಲಿ ಇರಿಸುತ್ತವೆ. ನಮ್ಮ ಸರ್ಕಾರವು ಎಲ್ಲರ ಕಲ್ಯಾಣವನ್ನು ಒತ್ತಿಹೇಳುವ ಗಾಂಧೀಜಿಯವರ ಸರ್ವೋದಯ ತತ್ವದಿಂದ ಮಾರ್ಗದರ್ಶಿಸಲ್ಪಟ್ಟಿದೆ. ಕಡಿಮೆ ಆದಾಯದ ಕುಟುಂಬಗಳನ್ನು ಸಬಲೀಕರಣಗೊಳಿಸುವ ಮೂಲಕ, ಸ್ಥಳೀಯ ಬೇಡಿಕೆಯನ್ನು ಉತ್ತೇಜಿಸುವ ಮತ್ತು ಸಮಗ್ರ ಬೆಳವಣಿಗೆಯನ್ನು ಹೆಚ್ಚಿಸುವಲ್ಲಿ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ರೂಪಿತವಾಗಿದೆ. ಆದ್ದರಿಂದ, ಹಣಕಾಸಿನ ಹಂಚಿಕೆಯಲ್ಲಿ ಮೌಲ್ಯಮಾಪನ ಮಾಡುವಾಗ ಈ ಕಲ್ಯಾಣ ಕಾರ್ಯಕ್ರಮಗಳ ಮೇಲಿನ ವೆಚ್ಚಗಳಿಗೆ ಹೆಚ್ಚಿನ ಆದ್ಯತೆ ನೀಡದೆ ಹೋದರೆ ಕನಿಷ್ಠ ಸಂಬಳ, ಪಿಂಚಣಿ ಮತ್ತು ಬಡ್ಡಿ ಪಾವತಿಗಳಂತಹ ಬದ್ಧ ವೆಚ್ಚಗಳಿಗೆ ಸಮಾನವಾಗಿ ಪರಿಗಣಿಸಬೇಕು.
ಕೇಂದ್ರ ಸರ್ಕರದ ವಿವೇಚನಾಧಾರಿತ ಅನುದಾನವಾಗಿರುವ ರಾಜ್ಯ ಕೇಂದ್ರಿತ ಅನುದಾನದ ಬದಲಾಗಿ ಒಟ್ಟು ಕೇಂದ್ರ ಸ್ವೀಕೃತಿಗಳ 0.3% ರಷ್ಟು ಅನುದಾನವನ್ನು ಸೂತ್ರ ಆಧಾರಿತ ಹಂಚಿಕೆಯ ಮೂಲಕ ರಾಜ್ಯಗಳಿಗೆ ನೀಡಬೇಕೆಂದು ಕರ್ನಾಟಕವು ಶಿಫಾರಸು ಮಾಡಿದೆ. ಆದಾಗ್ಯೂ, ಆಯೋಗವು ಅಂತಹ ನಿಬಂಧನೆಗಳನ್ನು ಮುಂದುವರಿಸಿದರೆ ಬೆಂಗಳೂರು ಮತ್ತು ಇತರ ನಿರ್ಣಾಯಕ ಯೋಜನೆಗಳಿಗೆ ಅನುದಾನಕ್ಕಾಗಿ ಮೂಲ ಜ್ಞಾಪಕ ಪತ್ರದಲ್ಲಿ ಸಲ್ಲಿಸಿರುವ ತನ್ನ ಪ್ರಸ್ತಾವನೆಯನ್ನು ಪುನರುಚ್ಚರಿಸಿದೆ.

ಇದಲ್ಲದೆ, ಕರ್ನಾಟಕದ ಆರ್ಥಿಕತೆಯಲ್ಲಿ ಬೆಂಗಳೂರಿನ ಪ್ರಮುಖ ಪಾತ್ರವನ್ನು ಪರಿಗಣಿಸಿ, ಬೆಂಗಳೂರಿನ ಮೂಲಸೌಕರ್ಯವನ್ನು ಬಲಪಡಿಸಲು ₹1.15 ಲಕ್ಷ ಕೋಟಿ ಹೂಡಿಕೆಗೆ ಬೆಂಬಲವನ್ನು ಮುಖ್ಯಮಂತ್ರಿ ಕೋರಿದರು. ಅಲ್ಲದೆ, ಕಡಿಮೆ ಆದಾಯ ಮತ್ತು ಕುಂಠಿತ ಮೂಲಸೌಕರ್ಯ ಅಭಿವೃದ್ಧಿ ಸಮಸ್ಯೆಯನ್ನು ಎದುರಿಸುತ್ತಿರುವ ಕಲ್ಯಾಣ ಕರ್ನಾಟಕ ಮತ್ತು ಮಲೆನಾಡಿನಲ್ಲಿ ಪ್ರಾದೇಶಿಕ ಅಂತರವನ್ನು ಕಡಿಮೆ ಮಾಡುವ ಅಗತ್ಯವನ್ನು ಅವರು ಒತ್ತಿ ಹೇಳಿದರು.

ಬೆಳವಣಿಗೆ ಮತ್ತು ಸಮಾನತೆ ಜೊತೆ ಜೊತೆಯಾಗಿ ಮುಂದುವರಿಯಬೇಕು. ಆದ್ದರಿಂದ ಸಧೃಡ ಭಾರತದ ನಿರ್ಮಾಣಕ್ಕೆ ನ್ಯಾಯಯುತ ಸಂಪನ್ಮೂಲ ಹಂಚಿಕೆಯಿಂದ ಬೆಂಬಲಿತವಾದ ಬಲವಾದ ಕರ್ನಾಟಕ ಅತ್ಯಗತ್ಯ ಎಂದು ಮುಖ್ಯಮಂತ್ರಿಯವರು ಒತ್ತಿ ಹೇಳಿದರು.

ಕರ್ನಾಟಕದ ಆರ್ಥಿಕ ಬಲವು ರಾಷ್ಟ್ರೀಯ ಬೆಳವಣಿಗೆಗೆ ಇಂಧನವಾಗಿದೆ. ಬೆಳವಣಿಗೆಗೆ ದಂಡ ವಿಧಿಸಬಾರದು, ಬದಲಾಗಿ ಪ್ರೋತ್ಸಾಹ ದೊರೆಯುವಂತೆ ನೋಡಿಕೊಳ್ಳುವ ಸಮಯ ಇದು. ಸಮತೋಲಿತ, ಸಂಪನ್ಮೂಲ ಹಂಚಿಕೆಯ ದೃಷ್ಟಿಕೋನವನ್ನು ಅಳವಡಿಸಿಕೊಳ್ಳುವಂತೆ ನಾವು ಆಯೋಗವನ್ನು ಒತ್ತಾಯಿಸುತ್ತೇವೆ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2025/02/Kumadvati-College-Shikaripura-2025-Video.mp4
https://kalpa.news/wp-content/uploads/2024/04/VID-20240426-WA0008.mp4
Tags: BangaloreCM SiddaramaiahKannada_NewsKannada_News_LiveKannada_News_OnlineKannada_WebsiteKannadaNews WebsiteLatest NewsKannadaNews_in_KannadaNews_Kannadaಬೆಂಗಳೂರುಮುಖ್ಯಮಂತ್ರಿ ಸಿದ್ಧರಾಮಯ್ಯ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕೊಪ್ಪಳ | ನವವೃಂದಾವನ ಶ್ರೀರಘುವರ್ಯತೀರ್ಥರ ಅದ್ದೂರಿ ಆರಾಧನೆ | ಮೂರು ದಿನ ವಿದ್ವಾಂಸರ ಪ್ರವಚನ

Next Post

ಕ್ಯಾನ್ಸರ್ ಬಾದಿತ ಮಕ್ಕಳಿಗೆ ಸರ್ಕಾರದಿಂದಲೇ ಚಿಕಿತ್ಸೆಗೆ ಸಹಕಾರ: ಮಧು ಬಂಗಾರಪ್ಪ

kalpa News

kalpa News

Next Post
ದ್ವಿತೀಯ ಪರೀಕ್ಷೆ-2 | ಸಮರ್ಪಕ ನಿರ್ವಹಣೆಗೆ ಸಚಿವ ಮಧು ಬಂಗಾರಪ್ಪ ಸೂಚನೆ

ಕ್ಯಾನ್ಸರ್ ಬಾದಿತ ಮಕ್ಕಳಿಗೆ ಸರ್ಕಾರದಿಂದಲೇ ಚಿಕಿತ್ಸೆಗೆ ಸಹಕಾರ: ಮಧು ಬಂಗಾರಪ್ಪ

Leave a Reply Cancel reply

Your email address will not be published. Required fields are marked *

No Result
View All Result
Mysuru Project Assistant Job Kits Leap 22 K Salary
English Articles

Mysuru Job Alert : Project Assistant Vacancy, 22,000 Salary, Apply by Oct 10

by kalpa News
September 21, 2026
0

Kalpa Media House  |  Mysuru  | Applications have been invited for one Project Assistant post for the Optical Sensing Biotechnology...

Read moreDetails
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL