No Result
View All Result
Kriti Sanon Raksha Bandhan Controversy GIVA Withdraw Advt copy
English Articles

Kriti Sanon’s Raksha Bandhan Ad Faces Backlash; GIVA Withdraws Campaign

by kalpa News
August 26, 2026
0

Kalpa Media House  |  Bangalore  | Jewellery brand GIVA has withdrawn its Raksha Bandhan advertisement featuring Bollywood actor Kriti Sanon following...

Read moreDetails
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
  • Advertise With Us
  • Grievances
  • About Us
  • Contact Us
Thursday, August 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ರಾಷ್ಟ್ರೀಯ ಮುಖಂಡರ ವಿರುದ್ಧ ಸುಳ್ಳು ಪ್ರಕರಣ ದಾಖಲು: ಡಿ.ಕೆ. ಶಿವಕುಮಾರ್ ಆಕ್ರೋಶ

kalpa News by kalpa News
June 15, 2022
in ಬೆಂಗಳೂರು ನಗರ, ರಾಜಕೀಯ
0
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್’ಗೆ ಕೊರೋನಾ ಪಾಸಿಟಿವ್!

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

‘ಮುಖ್ಯಮಂತ್ರಿಗಳು ಸೇರಿದಂತೆ ಬಿಜೆಪಿ ರಾಜ್ಯ ಹಾಗೂ ಕೇಂದ್ರ ಸಚಿವರು ವಿಧಾನಸೌಧದ ಒಳಗೆ ಹಾಗೂ ಹೊರಗೆ ಯಾತ್ರೆ, ಮೆರವಣಿಗೆಗಳು ಮಾಡಿ ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿದ್ದರೂ ಯಾವುದೇ ಪ್ರಕರಣ ದಾಖಲಾಗಿಲ್ಲ. ಆದರೆ ನಮ್ಮ ಮೇಲೆ ಮಾತ್ರ ಪ್ರಕರಣ ದಾಖಲಿಸಿದ್ದಾರೆ. ಆ ಮೂಲಕ ಅಧಿಕಾರ ದುರುಪಯೋಗ ಆಗುತ್ತಿದೆ. ಸರ್ಕಾರ ಏನೇ ಮಾಡಿದರೂ ನಾವು ನಮ್ಮ ಜನಪರ ಹೋರಾಟ ಮುಂದುವರಿಸುತ್ತೇವೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ D K Shivakumar ಅವರು ತಿಳಿಸಿದ್ದಾರೆ.

ಮೇಕೆದಾಟು ಪಾದಯಾತ್ರೆ, ಕೊರೊನಾ ಅಕ್ರಮ, ಕೃಷಿ ಕರಾಳ ಕಾಯ್ದೆ ವಿರುದ್ಧ ನಡೆಸಿದ್ದ ಪ್ರತಿಭಟನೆ ಸಂಬಂಧ ದಾಖಲಾಗಿರುವ ಪ್ರಕರಣಗಳ ವಿಚಾರಣೆಗೆ ಸಿಟಿ ಸಿವಿಲ್ ಕೋರ್ಟ್ ಗೆ ಬುಧವಾರ ಹಾಜರಾದ ಬಳಿಕ ಮಾಧ್ಯಮಗಳ ಜತೆ ಅವರು ಮಾತನಾಡಿದರು.

‘ರಾಷ್ಟ್ರ ಮಟ್ಟದಲ್ಲಿ ನಮ್ಮ ನಾಯಕರು ಯಾವುದೇ ತಪ್ಪು ಮಾಡದಿದ್ದರೂ ಸುಳ್ಳು ಕೇಸ್ ದಾಖಲಿಸಲಾಗಿದೆ. ನೆಹರೂ, ತಿಲಕರು ಹಾಗೂ ಪಟೇಲರು ಸ್ವಾತಂತ್ರ್ಯ ಹೋರಾಟ ಸಂದರ್ಭದಲ್ಲಿ ಜನರಲ್ಲಿ ಅರಿವು ಮೂಡಿಸಲು ಆರಂಭಿಸಿದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಯನ್ನು ಇಲ್ಲಿಯವರೆಗೂ ಉಳಿಸಿಕೊಂಡು ಬರಲಾಗಿದೆ. ಕಾಂಗ್ರೆಸ್ ನಾಯಕರೆಲ್ಲರೂ ಇದರ ನಿರ್ವಹಣೆಗೆ ಹಣ ನೀಡಿದ್ದಾರೆ. ಈ ಸಂಸ್ಥೆ ಟ್ರಸ್ಟ್ ಮೂಲಕ ನಡೆಯುತ್ತಿದೆಯೇ ಹೊರತು ಇದನ್ನು ಯಾವುದೇ ನಾಯಕರು ತಮ್ಮ ಆಸ್ತಿ ಎಂದು ಹೇಳಿಕೊಂಡಿಲ್ಲ.

Also read: ಡಾ. ಧನಂಜಯ ಸರ್ಜಿ ಅವರಿಗೆ ಅಚೀವರ್‍ಸ್ ಆಫ್‌ ಕರ್ನಾಟಕ ಪ್ರಶಸ್ತಿ ಪ್ರದಾನ

ನಾನು ಕೆಪಿಟಿಸಿಎಲ್ ಅಧ್ಯಕ್ಷನಾಗಿದ್ದ ಮಾತ್ರಕ್ಕೆ ಅದು ನನ್ನ ಆಸ್ತಿ ಎಂದು ಘೋಷಣೆ ಮಾಡಿಕೊಳ್ಳಲು ಸಾಧ್ಯವೇ? ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದವರು ಆ ಸಂಸ್ಥೆಯ ಮುಖ್ಯಸ್ಥರಾಗಿರುತ್ತಾರೆ. ನಮ್ಮ ನಾಯಕರ ಚುನಾವಣಾ ಅಫಿಡವಿಟ್ ಗಳನ್ನು ಪರಿಶೀಲಿಸಿ. ಯಂಗ್ ಇಂಡಿಯಾ ಕಂಪನಿಯಾಗಲಿ, ಎಜಿಎಲ್ ಕಂಪನಿಗಳ ಮಾಲೀಕತ್ವವನ್ನು ಯಾರಾದರೂ ಹೇಳಿಕೊಂಡಿದ್ದಾರಾ? ಇಲ್ಲ.

ಕಾಂಗ್ರೆಸ್ ಕಚೇರಿಗೆ ಹೋಗುವ ನಾಯಕರನ್ನು ಬಂಧಿಸಲಾಗುತ್ತಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಹೋರಾಟ ಮಾಡುವ ಹಕ್ಕನ್ನು ಸಂವಿಧಾನ ನೀಡಿದೆ. ಈ ಹಕ್ಕಿನ ಆಧಾರದ ಮೇಲೆ ಪ್ರತಿಭಟನೆ ಮಾಡಲು ಅವಕಾಶ ನೀಡುತ್ತಿಲ್ಲ. ಇದನ್ನು ತುರ್ತು ಪರಿಸ್ಥಿತಿ ಎನ್ನುವ ಬದಲು ಇದಕ್ಕೆ ಹೊಸ ದರ್ಬಾರ್ ಎಂಬ ಹೆಸರನ್ನು ಇಡಬೇಕಿದೆ.’

ಕಾಂಗ್ರೆಸ್ ನಾಯಕರು ತಮ್ಮ ಕಳ್ಳತನ ಮುಚ್ಚಿಕೊಳ್ಳಲು ಹೋರಾಟ ಮಾಡುತ್ತಿದ್ದಾರೆ ಎಂಬ ಬಿಜೆಪಿ ಆರೋಪಕ್ಕೆ ಸಂಬಂಧಿಸಿದಂತೆ ಕೇಳಿದ ಪ್ರಶ್ನೆಗೆ, ‘ನಾವು ಎಲ್ಲಿ ಕಳ್ಳತನ ಮಾಡಿದ್ದೇವೆ? ನಾವೇನು ಲಂಚಕ್ಕೆ ಹೋಗಿದ್ದೇವಾ? ಅಥವಾ ಮಂಚಕ್ಕೆ ಹೋಗಿದ್ದೇವಾ? ಈ ಸರ್ಕಾರ ಹಾಗೂ ಸಚಿವರು 40% ಕಮಿಷನ್ ಪಡೆಯುತ್ತಿದ್ದಾರೆ ಎಂಗು ಗುತ್ತಿಗೆದಾರರ ಸಂಘದ ಅಧ್ಯಕ್ಷರು ಪ್ರಧಾನಿಗೆ ಪತ್ರ ಬರೆದಿಲ್ಲವೇ? ಇನ್ನು ಕಮಿಷನ್ ಗೆ ಕಿರುಕುಳ ನೀಡಿ ಗುತ್ತಿಗೆದಾರ ಆತ್ಮಹತ್ಯೆ ಮಾಡಿಕೊಂಡಿದ್ದಕ್ಕೆ ಸಚಿವರು ರಾಜೀನಾಮೆ ನೀಡಿಲ್ಲವೇ? ಪೊಲೀಸ್ ನೇಮಕಾತಿಯಿಂದ ಎಲ್ಲ ನೇಮಕಾತಿಯಲ್ಲಿ ಅಕ್ರಮ ನಡೆದಿಲ್ಲವೇ? ಈಗ ಹೊಸದಾಗಿ 10 ಲಕ್ಷ ಉದ್ಯೋಗಕ್ಕೆ ನೇಮಕ ಘೋಷಣೆ ಮಾಡಿದ್ದಾರೆ. ವರ್ಷಕ್ಕೆ 2 ಕೋಟಿ ಉದ್ಯೋಗ ನೀಡುತ್ತೇವೆ ಎಂದು ಹೇಳಿದಂತೆ 8 ವರ್ಷದಲ್ಲಿ 16 ಕೋಟಿ ಉದ್ಯೋಗ ನೀಡದೇ ಈಗ ಕೇವಲ 10 ಲಕ್ಷ ಉದ್ಯೋಗದ ಬಗ್ಗೆ ಮಾತನಾಡುತ್ತಿರುವುದೇಕೆ? ಇದೆಲ್ಲವೂ ಜನರನ್ನು ತಪ್ಪು ದಾರಿಗೆ ಎಳೆಯವ ಪ್ರಯತ್ನ. ಬಿಜೆಪಿಯ ಯಾವನು ಬೇಕಾದರೂ ಏನಾದರೂ ಮಾತನಾಡಲಿ. ನಮ್ಮ ನಿಲುವು, ಬಿಜೆಪಿಯ ದ್ವೇಷದ ರಾಜಕಾರಣ, ನಮ್ಮ ನಾಯಕರನ್ನು ಮುಗಿಸಲು ಪ್ರಯತ್ನಿಸುತ್ತಿರುವುದು ಜನರಿಗೆ ಅರ್ಥವಾಗುತ್ತಿದೆ. ಕಾಂಗ್ರೆಸಿಗರು ದೇಶದ ಸ್ವಾತಂತ್ರ್ಯಕ್ಕೆ ಪ್ರಾಣವನ್ನೇ ನೀಡಿದ್ದು, ಎಲ್ಲ ರೀತಿಯ ತ್ಯಾಗ ಹೋರಾಟಕ್ಕೂ ಸಿದ್ಧವಿದ್ದೇವೆ’ ಎಂದು ಉತ್ತರಿಸಿದರು.


ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreD K ShivakumarKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaPolitical NewsState Newsಡಿ.ಕೆ. ಶಿವಕುಮಾರ್ಬೆಂಗಳೂರು
Share210Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಡಾ. ಧನಂಜಯ ಸರ್ಜಿ ಅವರಿಗೆ ಅಚೀವರ್‍ಸ್ ಆಫ್‌ ಕರ್ನಾಟಕ ಪ್ರಶಸ್ತಿ ಪ್ರದಾನ

Next Post

ನೂತನ ಲೋಕಾಯುಕ್ತರಿಗೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಅಭಿನಂದನೆ…

kalpa News

kalpa News

Next Post
ನೂತನ ಲೋಕಾಯುಕ್ತರಿಗೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಅಭಿನಂದನೆ…

ನೂತನ ಲೋಕಾಯುಕ್ತರಿಗೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಅಭಿನಂದನೆ...

Leave a Reply Cancel reply

Your email address will not be published. Required fields are marked *

No Result
View All Result
Kriti Sanon Raksha Bandhan Controversy GIVA Withdraw Advt copy
English Articles

Kriti Sanon’s Raksha Bandhan Ad Faces Backlash; GIVA Withdraws Campaign

by kalpa News
August 26, 2026
0

Kalpa Media House  |  Bangalore  | Jewellery brand GIVA has withdrawn its Raksha Bandhan advertisement featuring Bollywood actor Kriti Sanon following...

Read moreDetails
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL