ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ಪೆಟ್ರೋಲ್ ಹಾಗೂ ಡೀಸೆಲ್ ಮೇಲೆ ರಾಜ್ಯ ಸರ್ಕಾರ ವಿಧಿಸುವ ತೆರಿಗೆಯನ್ನು ಇಳಿಕೆ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದು, ಈ ಮೂಲಕ ರಾಜ್ಯದ ಜನರ ನಿರೀಕ್ಷೆ ಹುಸಿಯಾಗಿಸಿದ್ದಾರೆ.
ಬಜೆಟ್ ಭಾಷಣದಲ್ಲಿ ಇದನ್ನು ಉಲ್ಲೇಖಿಸಿರುವ ಅವರು, ಕೋವಿಡ್ ನಿಂದ ಸಂಕಷ್ಟಕ್ಕೀಡಾಗಿರುವ ಜನತೆಗೆ ಮತ್ತಷ್ಟು ತೆರಿಗೆ ಹೊರೆ ವಿಧಿಸುವುದಿಲ್ಲ. ಆದರೆ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಮಾರಾಟ ತೆರಿಗೆ ಇಳಿಸುವುದಿಲ್ಲ. ದಕ್ಷಿಣದ ಇತರ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ರಾಜ್ಯದಲ್ಲಿ ಕಡಿಮೆಯಿದೆ. ಹೀಗಾಗಿ ಇಂಧನದ ಮೇಲೆ ಹೊಸ ತೆರಿಗೆ ವಿಧಿಸುವುದಿಲ್ಲ, ಈಗಿರುವ ಮಾರಾಟ ತೆರಿಗೆ ಕಡಿತವೂ ಇಲ್ಲ ಎಂದು ಸ್ಪಷ್ಟಪಡಿಸಿದರು.
ಪೆಟ್ರೋಲ್ ಹಾಗೂ ಡೀಸೆಲ್ ಮೇಲೆ ರಾಜ್ಯ ಸರ್ಕಾರ ವಿಧಿಸುವ ತೆರಿಗೆಯನ್ನು ಈ ಬಾರಿಯ ಬಜೆಟ್’ನಲ್ಲಿ ಇಳಿಕೆ ಮಾಡುವ ಮೂಲಕ ವಾಹನ ಸವಾರರಿಗೆ ಗುಡ್ ನ್ಯೂಸ್ ಸಿಗಬಹುದು ಎಂಬ ಅಪಾರ ನಿರೀಕ್ಷೆಯಿತ್ತು. ಆದರೆ, ಇದು ಈಗ ಹುಸಿಯಾಗಿದೆ.
ವರದಿ: ಡಿ.ಎಲ್. ಹರೀಶ್, ಬೆಂಗಳೂರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post