ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಹತ್ಯೆ ಮಾಡಿ, #Murder ಬಳಿಕ ತಾಯಿಯು ಆತ್ಮಹತ್ಯೆಗೆ #Suicide ಶರಣಾಗಿರುವ ದಾರುಣ ಘಟನೆ ಬೆಂಗಳೂರಿನ ಕೊಡಿಗೆಹಳ್ಳಿಯಲ್ಲಿ ನಡೆದಿದೆ.
ಮೃತ ಮಹಿಳೆ ಕುಸುಮಾ (35) ಹಾಗೂ ಮಕ್ಕಳಾದ ಶ್ರೀಯಾನ್ (6), ಚಾರ್ವಿ (1.5ವರ್ಷ) ಎಂದು ಗುರುತಿಸಲಾಗಿದೆ.
Also read: ‘ಒಂದು ರಾಷ್ಟ್ರ, ಒಂದು ಚುನಾವಣೆ’ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ
ಕೊಡಿಗೆಹಳ್ಳಿಯ ಅಪಾರ್ಟ್‌ಮೆಂಟ್ ಒಂದರಲ್ಲಿ ದಂಪತಿ ಸುರೇಶ್, ಕುಸುಮಾ ವಾಸವಾಗಿದ್ದರು. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ ನಂತರ ತಾಯಿಯೂ ನೇಣಿಗೆ ಶರಣಾಗಿದ್ದಾರೆ. ಘಟನಾ ಸ್ಥಳದಲ್ಲಿ ಡೆತ್‌ನೋಟ್ ಸಿಕ್ಕಿದ್ದು, ನನ್ನ ಸಾವಿಗೆ ನಾನೇ ಕಾರಣ ಎಂದು ಬರೆದಿದ್ದಾರೆ ಎನ್ನಲಾಗಿದೆ.
ಪ್ರಕರಣಕ್ಕೆ ಸಂಬಂಧಪಟ್ಟಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕೊಡುಗೆಹಳ್ಳಿ ಪೊಲೀಸ್‌ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನಿಖೆ ಮುಂದುವರೆದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post