ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ವಯೋಸಹಜ ಅಸ್ವಸ್ಥತೆಯಿಂದ ಬಳಲುತ್ತಿದ್ದ ಖ್ಯಾತ ಹಿರಿಯ ನಟಿ ಲೀಲಾವತಿ Actress Leelavathi ಇಂದು ಸಂಜೆ ಇಹಲೋಕದ ಯಾತ್ರೆ ಮುಗಿಸಿದ್ದಾರೆ.
ವಯೋಸಜಹ ಅಸ್ವಸ್ಥತೆಯಿಂದ ಬಳಲುತ್ತಿದ್ದ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಅವರು ಇಂದು ಕೊನೆಯುಸಿರೆಳೆದಿದ್ದಾರೆ.
ಅತ್ಯಂತ ಸ್ಪುರದ್ರೂಪಿ ನಟಿಯಾದ ಲೀಲಾವತಿ ಸುಮಾರು ಐದು ಭಾಷೆಗಳಲ್ಲಿ ನಟಸಿದ್ದು, ಕನ್ನಡದಲ್ಲಿ ಅತಿ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ.

ಲೀಲಾವತಿ ಅವರು ಕೆಲವು ದಿನಗಳಿಂದ ಅನಾರೋಗ್ಯ ಕಾರಣದಿಂದಾಗಿ ಹಾಸಿಗೆ ಹಿಡಿದಿದ್ದರು. ಅವರ ಆರೋಗ್ಯ ಯೋಗ ಕ್ಷೇಮ ವಿಚಾರಿಸಲು ಖುದ್ದು ಸಿಎಂ ಸಿದ್ದರಾಮಯ್ಯ ನಟಿ ಲೀಲಾವತಿ ಮನೆಗೆ ಭೇಟಿ ನೀಡಿದ್ದರು.
ಜೀವಮಾನದ ಸಾಧನೆ
ಕನ್ನಡದಲ್ಲಿ ಪ್ರಧಾನವಾಗಿ ನಟಿಸುವುದರೊಂದಿಗೆ ತಮಿಳು, ತೆಲುಗು ಮತ್ತು ಮಲಯಾಳಂ ಭಾಷೆಗಳ ಸುಮಾರು 600 ಚಿತ್ರಗಳಲ್ಲಿ ಅವರು ನಟಿಸಿದ್ದಾರೆ.
ಕರ್ನಾಟಕ ಸರ್ಕಾರ ಚಲನಚಿತ್ರರಂಗದ ಜೀವಮಾನ ಸಾಧನೆಗೆ ನೀಡುವ ಡಾ. ರಾಜಕುಮಾರ್ ಪ್ರಶಸ್ತಿಯನ್ನು Dr. Rajkumar Award 1999-2000ನೇ ಸಾಲಿನಲ್ಲಿ ಪಡೆದ ಲೀಲಾವತಿ ಅವರು, ‘ತುಮಕೂರು ವಿಶ್ವವಿದ್ಯಾಲಯ’ದ ಗೌರವ ಡಾಕ್ಟರೇಟ್ ಪದವಿಯನ್ನು 2008ರಲ್ಲಿ ಪಡೆದಿದ್ದಾರೆ.

Also read: ಪ್ರಚಾರದ ಅಬ್ಬರವಿಲ್ಲದೇ ಶಿವಮೊಗ್ಗ ನಗರದ ಜನತೆ ಮನ್ನಣೆ ಗಳಿಸಿದ ಸ್ವದೇಶಿ ಮೇಳ
ಲೀಲಾವತಿ ಅವರು 1949ರಲ್ಲಿ ಶಂಕರ್ ಸಿಂಗ್ ಅವರ ನಾಗಕನ್ನಿಕ ಚಿತ್ರದಲ್ಲಿ ಸಖಿಯ ಪಾತ್ರದ ಮುಖಾಂತರ ಕನ್ನಡ ಚಿತ್ರರಂಗ ಪ್ರವೇಶಿಸಿದರು. ಸುಬ್ಬಯ್ಯ ನಾಯ್ಡು ಅವರ ಸಂಸ್ಥೆಯಲ್ಲಿ ರಂಗಭೂಮಿ ಕಲಾವಿದೆಯಾಗಿದ್ದ ಲೀಲಾವತಿ ಅವರು ಕಯಾದುವಿನ ಸಖಿಯಾಗಿ ಅಭಿನಯಿಸಿದ್ದಾರೆ.

ನಾಯಕಿಯಾಗಿ ಅವರು ಅಭಿನಯಿಸಿದ ಮೊದಲ ಚಿತ್ರ ಮಾಂಗಲ್ಯ ಯೋಗ. ಡಾ. ರಾಜ್ ಕುಮಾರ್ ಅವರೊಂದಿಗೆ ನಟಿಸಿದ ಮೊದಲ ಚಿತ್ರ ರಣಧೀರ ಕಂಠೀರವ.
ರಾಣಿ ಹೊನ್ನಮ್ಮ ಚಿತ್ರದ ಯಶಸ್ಸಿನ ನಂತರ ರಾಜ್ ಕುಮಾರ್ ಮತ್ತು ಲೀಲಾವತಿ ಅವರ ಜೋಡಿ ಜನಪ್ರಿಯವಾಯಿತು. ಸಂತ ತುಕಾರಾಂ, ಕಣ್ತೆರೆದು ನೋಡು, ಕೈವಾರ ಮಹಾತ್ಮೆ, ಗಾಳಿ ಗೋಪುರ, ಕನ್ಯಾರತ್ನ, ಕುಲವಧು, ವೀರ ಕೇಸರಿ, ಮನ ಮೆಚ್ಚಿದ ಮಡದಿ ಹೀಗೆ ಹಲವಾರು ಚಿತ್ರಗಳ ನಾಯಕಿಯಾದರು. ಕೆಲಚಿತ್ರಗಳಲ್ಲಿ ನಾಯಕನಟರಿಗಿಂತ ಹೆಚ್ಚಿನ ಸಂಭಾವನೆ ಪಡೆಯುವ ನಾಯಕಿಯಾಗಿ ಗುರುತಿಸಿಕೊಂಡಿದ್ದರು.

ನೆಲಮಂಗಲದ ಸುತ್ತಮುತ್ತ ವಾಸಿಸುವ ಜನರ ಆರೋಗ್ಯ ಸೇವೆಗಾಗಿ ಸೋಲದೇವನಹಳ್ಳಿಯಲ್ಲಿ ಆಸ್ಪತ್ರೆಯೊಂದನ್ನು ಲೀಲಾವತಿ ಕಟ್ಟಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

 
	    	

 Loading ...
 Loading ... 
							



 
                
Discussion about this post