ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಫೆ.25ರಂದು ರಾಜ್ಯ ರಾಜಧಾನಿಯಲ್ಲಿ ನಮ್ಮ ಕರಾವಳಿ ಉತ್ಸವ Karawali Utsava ನಡೆಯಲಿದ್ದು, ಸುಮಾರು 1 ಲಕ್ಷಕ್ಕೂ ಅಧಿಕ ಜನರು ಸೇರುವ ನಿರೀಕ್ಷೆಯಿದೆ ಎಂದು ಕರಾವಳಿ ಒಕ್ಕೂಟ ಬೆಂಗಳೂರು ಅಧ್ಯಕ್ಷ ಕೆ. ಸುಬ್ರಾಯ ಭಟ್ ತಿಳಿಸಿದ್ದಾರೆ.
ಈ ಕುರಿತಂತೆ ಮಾತನಾಡಿದ ಅವರು, ಬೆಂಗಳೂರಿನ ಜೆಪಿ ನಗರದ ಆರ್’ಬಿಐ ಲೇಔಟ್ ಬಿಬಿಎಂಪಿ ಆಟದ ಮೈದಾನದಲ್ಲಿ ನಮ್ಮ ಕರಾವಳಿ ಉತ್ಸವ ಆಯೋಜಿಸಲಾಗಿದೆ. ಬೆಂಗಳೂರಿನ ಕರಾವಳಿಗರ ಒಕ್ಕೂಟದ ನೇತೃತ್ವದಲ್ಲಿ ಫೆ.25ರ ಭಾನುವಾರ ನಮ್ಮ ಕರಾವಳಿ ಉತ್ಸವ ನಡೆಯಲಿದೆ ಎಂದು ತಿಳಿಸಿದ್ದಾರೆ.

ಕರಾವಳಿಯ ಸ್ವಾದಿಷ್ಟ ಖಾದ್ಯಗಳ ಆಹಾರ ಮೇಳ ದಲ್ಲಿ ರುಚಿ ರುಚಿಯ ಕರಾವಳಿ ಖಾದ್ಯಗಳ ಅನಾವರಣ ನಡೆಯಲಿದ್ದು ವಿಶೇಷ ತಿಂಡಿ ತಿನಿಸುಗಳು ಜನರನ್ನ ಆಕರ್ಷಿಸಲಿದೆ. ಸುಮಾರು ಒಂದು ಲಕ್ಷಕ್ಕೂ ಹೆಚ್ಚು ಜನ ಈ ಕಾರ್ಯಕ್ರಮಕ್ಕೆ ಆಗಮಿಸುವ ನಿರೀಕ್ಷೆಯಿದ್ದು ಅದಕ್ಕೆ ಬೇಕಾದ ಸಿದ್ದತೆ ಮಾಡಲಾಗಿದೆ. ಪ್ರಸಿದ್ದ ನಟ ನಟಿಯರು, ಪ್ರಮುಖ ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

Also read: ಹೊನ್ನಾವರ | ಗಮನ ಸೆಳೆದ ಗುಣವಂತೆಯಲ್ಲಿ ನಡೆದ ಸತ್ಯಹರಿಶ್ಚಂದ್ರ ಯಕ್ಷಗಾನ ಪ್ರಸಂಗ
ಭೂತಾರಾಧನೆ, ಹುಲಿ ಕುಣಿತ, ಯಕ್ಷಗಾನ, ಅಹಾರ, ಆಚಾರ ವಿಚಾರವನ್ನು ಹೆಚ್ಚಿನ ಬೆಂಗಳೂರಿನ ಜನರಿಗೆ ತಲುಪಿಸುವ ಕೆಲಸ ಮಾಡಬೇಕಿದ್ದು ಈ ನಿಟ್ಟಿನಲ್ಲಿ ಕಾರ್ಯಕ್ರಮ ಆಯೋಜನೆಗೊಂಡಿದೆ. ಬೆಳಗ್ಗೆ 9 ಕ್ಕೆ ಕಾರ್ಯಕ್ರಮ ಪ್ರಾರಂಭವಾಗಲಿದ್ದು ರಾತ್ರಿಯವರೆಗೂ ನಡೆಯಲಿದೆ ಎಂದಿದ್ದಾರೆ.
ಒಕ್ಕೂಟದ ಉಪಾಧ್ಯಕ್ಷರಾದ ಬಿ.ಆರ್. ದೇವಾಡಿಗ, ಮಂಜುನಾಥ್ ಸಿ, ಸಂಘಟನಾ ಕಾರ್ಯದರ್ಶಿ ಸುರೇಶ್ ಪೈ ಸೇರಿ ಹಲವರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

 
	    	



 Loading ...
 Loading ... 
							



 
                
Discussion about this post