No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
  • Advertise With Us
  • Grievances
  • About Us
  • Contact Us
Wednesday, October 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಶುಲ್ಕ ಪಾವತಿಯಲ್ಲಿ ಮಕ್ಕಳ ಹಿತ ಕಾಯಲು ಮುಂದಾಗಿ: ಶಿಕ್ಷಣ ಸಚಿವ ಸುರೇಶ್ ಕುಮಾರ್ ಮನವಿ

kalpa News by kalpa News
February 11, 2021
in ಬೆಂಗಳೂರು ನಗರ
0
ಶಾಲೆ ಆರಂಭಕ್ಕೆ ದಿನಾಂಕ ನಿಗದಿಯಾಗಿಲ್ಲ, ತರಾತುರಿಯಲ್ಲಿ ತೆರೆಯುವುದಿಲ್ಲ: ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ

File Photo

Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಬೆಂಗಳೂರು: ಪೋಷಕರು ಮತ್ತು ಖಾಸಗಿ ಶಾಲಾ ಕಾಲೇಜುಗಳ ಮಧ್ಯೆ ಹಗ್ಗಜಗ್ಗಾಟಕ್ಕೆ ಕಾರಣವಾಗಿದ್ದ ಪ್ರಸ್ತುತ ಶೈಕ್ಷಣಿಕ ವರ್ಷದ ಶುಲ್ಕ ಪಾವತಿ ಸಂಬಂಧದಲ್ಲಿ ಸರ್ಕಾರ ಎಲ್ಲರಿಗೂ ಅನುಕೂಲವಾಗುವಂತಹ ನಿಟ್ಟಿನಲ್ಲಿ ಚಿಂತಿಸಿ ಆದೇಶ ಹೊರಡಿಸಿದ್ದು ಅದನ್ನು ಈ ವರ್ಷದ ಮಟ್ಟಿಗೆ ಎಲ್ಲರೂ ಪಾಲಿಸುವುದರಿಂದ ನಮ್ಮ ವಿದ್ಯಾರ್ಥಿಗಳ ಹಿತರಕ್ಷಣೆ ಸಾಧ್ಯವಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.

ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೋನಾ ಹಿನ್ನೆಲೆಯಲ್ಲಿ ಶಾಲೆಗಳು ಭೌತಿಕವಾಗಿ ಆರಂಭವಾಗದೇ ಇರುವುದರಿಂದ ಆರ್ಥಿಕವಾಗಿ ಜರ್ಝರಿತವಾಗಿದ್ದ ಪೋಷಕರು ಶುಲ್ಕ ಪಾವತಿಸಿರಲಿಲ್ಲವಾದ್ದರಿಂದ ಖಾಸಗಿ ಶಾಲೆಗಳೂ ಸಹ ತೀವ್ರ ತೊಂದರೆಗೀಡಾಗಿದ್ದುದನ್ನು ಗಮನಿಸಿ ಸರ್ಕಾರ ಒಂದು ಸಮನ್ವಯ ಸೂತ್ರ ಪಾಲಿಸಿ ಕಳೆದ ವರ್ಷದ ಬೊಧನಾ ಶುಲ್ಕದ ಶೇ.30ರಷ್ಟು ಪಾವತಿಸಲು ಮತ್ತು ಸ್ವೀಕರಿಸಲು ಸೂಚಿಸಿ ಆದೇಶ ಹೊರಡಿಸಿತ್ತು ಎಂದು ಹೇಳಿದರು.


ಆದರೆ ಶೇ.30 ಬೋಧನಾ ಶುಲ್ಕ ಪಾವತಿ ಆದೇಶವನ್ನು ಬಹುತೇಕ ಖಾಸಗಿ ಶಾಲಾ ಸಂಘಟನೆಗಳು ಸ್ವಾಗತಿಸಿದರೆ, ಕೆಲ ಖಾಸಗಿ ಶಾಲಾ ಸಂಘಟನೆಗಳು ಅಸಮಧಾನ ವ್ಯಕ್ತಪಡಿಸಿವೆ. ಹಿಂದೆಂದೂ ಕಾಣದಂತಹ ಈ ವರ್ಷದ ವಿಚಿತ್ರ ಸನ್ನಿವೇಶದಲ್ಲಿ ಎಲ್ಲಾ ಶೈಕ್ಷಣಿಕ ಪಾಲುದಾರರೊಂದಿಗೆ ಹತ್ತಾರು ಬಾರಿ ಚರ್ಚಿಸಿ ಮಾನ್ಯ ಮುಖ್ಯಮಂತ್ರಿಗಳ ಗಮನಕ್ಕೆ ತಂದು ಅವರ ಒಪ್ಪಿಗೆ ಪಡೆದು ಈ ವರ್ಷದ ಮಟ್ಟಿಗೆ ಶೇ.30ರಷ್ಟು ಶುಲ್ಕ ಪಾವತಿ ಕುರಿತು ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ ಎಂದು ತಿಳಿಸಿದರು.

ಕೊರೋನಾ ಹಿನ್ನೆಲೆಯಲ್ಲಿ ಶುಲ್ಕ ಪಾವತಿಸಲು ಪೋಷಕರು ಹಿಂಜರಿದಾಗ ಖಾಸಗಿ ಶಾಲೆಗಳು ತೊಂದರೆ ಅನುಭವಿಸಿದವು. ಈ ಸಂದರ್ಭದಲ್ಲಿ ಶಿಕ್ಷಣ ಇಲಾಖೆ ಈ ಮೊದಲು ಒಂದು ಕಂತಿನ ಶುಲ್ಕ ಪಾವತಿಸಲು ಪೋಷಕರಿಗೆ ಸೂಚಿಸಿ ಸುತ್ತೋಲೆ ಹೊರಡಿಸಿತ್ತು. ಸಂಗ್ರಹವಾದ ಶುಲ್ಕವನ್ನು ಶಿಕ್ಷಕರ ಮತ್ತು ಸಿಬ್ಬಂದಿಯ ವೇತನಕ್ಕೆ ಮೊದಲ ಆದ್ಯತೆ ನೀಡಬೇಕೆಂದು ಸದರಿ ಸುತ್ತೋಲೆಯಲ್ಲಿ ಶಾಲೆಗಳಿಗೆ ಸೂಚಿಸಲಾಗಿತ್ತು ಎಂದು ವಿವರಿಸಿದರು.

ಇದು ಸಂಕಷ್ಟದ ಸಮಯವಾದ್ದರಿಂದ ಈ ವರ್ಷ ಶುಲ್ಕ ಹೆಚ್ಚಳ ಮಾಡದಿರುವಂತೆ ಮತ್ತೊಂದು ಸುತ್ತೋಲೆ ಸಹ ಹೊರಡಿಸಿತ್ತು. ಈ ಶೈಕ್ಷಣಿಕ ವರ್ಷದಲ್ಲಿ ಶಾಲೆಗಳು ಭೌತಿಕವಾಗಿ ಆರಂಭವಾಗದೇ ಇರುವುದರಿಂದ ಎಷ್ಟು ಶುಲ್ಕ ಪಾವತಿಸಬೇಕೆಂದು ಗೊತ್ತಾಗದೇ ಪೋಷಕರು ಶುಲ್ಕ ಪಾವತಿಗೆ ಮುಂದಾಗಲಿಲ್ಲ. ಹಲವಾರು ತಿಂಗಳು ಶುಲ್ಕ ಪಾವತಿಯಾಗದೇ ಶಾಲೆಗಳು ಆರ್ಥಿಕವಾಗಿ ತೊಂದರೆಗೊಳಗಾಗಿ ಶಿಕ್ಷಕರು ಸಿಬ್ಬಂದಿ ವೇತನಕ್ಕೆ ಪರದಾಡುವಂತಾಯಿತು. ಇದೆಲ್ಲವನ್ನೂ ಮನಗಂಡು ಎಲ್ಲರ ಹಿತದೃಷ್ಟಿಯಿಂದ ಸರ್ಕಾರ ಎಲ್ಲರೊಂದಿಗೆ ಚಿರ್ಚಿಸಿಯೇ ಒಂದು ಸಮನ್ವಯ ಸೂತ್ರದಂತೆ ಶೇ.30ರಷ್ಟು ಶುಲ್ಕ ಪಾವತಿಸಲು ಸೂಚಿಸಿತು ಎಂದರು.

ಸರ್ಕಾರ ಶೇ.30ರಷ್ಟು ಶುಲ್ಕ ಪಾವತಿಸುವಂತೆ ಆದೇಶ ಹೊರಡಿಸಿದಾಗ ಪೋಷಕರು ತಮ್ಮ ಮಕ್ಕಳ ಶಾಲೆಗಳಿಗೆ ಶುಲ್ಕ ಪಾವತಿಸಲು ಮುಂದಾಗಿದ್ದಾರೆ. ಇದರಿಂದ ಅನೇಕ ಶಾಲೆಗಳು ಸದರಿ ಶುಲ್ಕ ಪಾವತಿಗೆ ಪೋಷಕರಿಗೆ ಅನುವು ಮಾಡಿಕೊಟ್ಟಿವೆ. ಇದರಿಂದ ಆ ಶಾಲೆಗಳ ಸಿಬ್ಬಂದಿಯ ವೇತನಕ್ಕೆ ಅನುಕೂಲವಾಗಿರುವುದಂತೂ ನಿಜ. ಸರ್ಕಾರ ಈ ಆದೇಶ ಹೊರಡಿಸಿದ್ದರ ಪರಿಣಾಮ ಪ್ರಸ್ತುತ ಶಾಲೆಗಳಲ್ಲಿ ಶುಲ್ಕ ಸಂಗ್ರಹವಾಗುತ್ತಿದೆ. ಇಲ್ಲದೇ ಹೋಗಿದ್ದರೆ ಇದು ಇನ್ನೂ ಬಿಗಡಾಯಿಸುತಿತ್ತು. ಸರ್ಕಾರ ಶುಲ್ಕ ಪಾವತಿಸಬೇಕೆಂದು ಆದೇಶ ಹೊರಡಿಸಿದ್ದರಿಂದಲೇ ಪೋಷಕರು ಶುಲ್ಕ ಪಾವತಿಸಲು ಮುಂದಾಗಿದ್ದಾರೆ ಎಂಬುದನ್ನು ನಮ್ಮ ಶಾಲೆಗಳು ಅರ್ಥೈಸಿಕೊಳ್ಳಬೇಕಿದೆ ಎಂದರು.

ಈ ಸಮಸ್ಯೆಯನ್ನು ಯಾವ ರೀತಿ ಪರಿಹರಿಸಬೇಕೆಂದು ಯಾರಾದರೂ ನನಗೆ ಸಲಹೆ ನೀಡಿದರೆ ನಾನಂತೂ ಮುಕ್ತವಾಗಿ ಸ್ವೀಕರಿಸುತ್ತೇನೆ. ಇದನ್ನು ನಾವು ಮಾತುಕತೆಯಿಂದಲೇ ಬಗೆಹರಿಸಿಕೊಳ್ಳಬೇಕು. ಇಂತಹ ವಿಚಿತ್ರ ಸನ್ನಿವೇಶದಲ್ಲಿ ನಾವು ನೀವೆಲ್ಲರೂ ಪೋಷಕರನ್ನೂ ಒಳಗೊಂಡು ಕುಳಿತು ಚರ್ಚೆ ಮಾಡೋಣ. ಈ ವಿಚಿತ್ರ ಸನ್ನಿವೇಶದಲ್ಲಿ ಈ ವರ್ಷದ ಮಟ್ಟಿಗೆ ಎಲ್ಲರೂ ಸಹಕಾರ ನೀಡುವ ಮೂಲಕ ನಮ್ಮ ಮಕ್ಕಳ ಭವಿಷ್ಯವನ್ನು ಕಾಯಲು ನಾವೆಲ್ಲ ಮುಂದಾಗಬೇಕು ಎಂದು ಸಚಿವರು ಪೋಷಕರು ಮತ್ತು ಶಾಲಾಡಳಿತ ಮಂಡಳಿಗಳಿಗೆ ಮನವಿ ಮಾಡಿದ್ದಾರೆ.

(ವರದಿ: ಡಿ.ಎಲ್. ಹರೀಶ್, ಬೆಂಗಳೂರು)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: BangaloreEducation NewsKannada News WebasiteLatest News KannS Suresh kumarSchool FeeState Newsಎಸ್. ಸುರೇಶ್ ಕುಮಾರ್ಕರ್ನಾಟಕಬೆಂಗಳೂರು
Share220Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ವೈದ್ಯಕೀಯ ವಿದ್ಯಾರ್ಥಿಗಳು ಲಸಿಕೆ ಪಡೆದು ಸ್ಪೂರ್ತಿಯಾಗಿ: ಆರೋಗ್ಯ ಸಚಿವ ಸುಧಾಕರ್ ಕರೆ

Next Post

ರಾಜ್ಯದಲ್ಲಿಯೂ ಸಾವಯವ ಕೃಷಿ ವಿಶ್ವವಿದ್ಯಾಲಯದ ಚಿಂತನೆ: ಬಿ.ಸಿ. ಪಾಟೀಲ್

kalpa News

kalpa News

Next Post
ಗಂಗಾವತಿ ಟೌನ್, ಶ್ರೀರಾಮನಗರದಲ್ಲಿ 10 ದಿನ ಲಾಕ್ ಡೌನ್: ಕೊಪ್ಪಳ ಉಸ್ತುವಾರಿ ಸಚಿವ ಬಿ.ಸಿ. ಪಾಟೀಲ್

ರಾಜ್ಯದಲ್ಲಿಯೂ ಸಾವಯವ ಕೃಷಿ ವಿಶ್ವವಿದ್ಯಾಲಯದ ಚಿಂತನೆ: ಬಿ.ಸಿ. ಪಾಟೀಲ್

Leave a Reply Cancel reply

Your email address will not be published. Required fields are marked *

No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL